ಬೆಂಗಳೂರು: ಹಸಿರು ವಲಯದಲ್ಲಿ ಅಕ್ರಮವಾಗಿ ತಲೆ ಎತ್ತಿರುವ ಲೇಔಟ್ ಅನ್ನು ಜಿಲ್ಲಾಧಿಕಾರಿ ಶಿವಮೂರ್ತಿ ಹಾಗೂ ತಹಶಿಲ್ದಾರ್ ತೇಜಸ್ಕುಮಾರ್ ನೇತೃತ್ವದಲ್ಲಿ ತೆರವುಗೊಳಿಸಲಾಯಿತು.
ಬೆಂಗಳೂರು ಪೂರ್ವ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ಸರ್ವೆ ನಂ.137 ರಲ್ಲಿ 5 ಎಕರೆ.4 ಗುಂಟೆ ಹಸಿರು ವಲಯದ ಭೂಮಿಯಲ್ಲಿ ಹಾಗೂ ಮೇಡಹಳ್ಳಿ ಗ್ರಾಮದ ಸರ್ವೆ ನಂಬರ್ 89ರ 2ಎಕರೆ ಪ್ರದೇಶದಲ್ಲಿ ಅನಧಿಕೃತವಾಗಿ ತಲೆ ಎತ್ತಿರುವ ಬಡಾವಣೆಗಳನ್ನು ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶಿವಮೂರ್ತಿ ತಿಳಿಸಿದರು.
ಈ ಸ್ಥಳವನ್ನು ಸರ್ಕಾರದ ಸೌಲಭ್ಯಗಳಿಗಾಗಿ ಸದುಪಯೋಗ ಪಡಿಸಿಕೊಂಡು, ಅಕ್ರಮ ಬಡಾವಣೆಗಳನ್ನು ನಿರ್ಮಾಣ ಮಾಡಿದವರ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಡಿಸಿ ಎಚ್ಚರಿಕೆ ನೀಡಿದರು.
ಬಳಿಕ ತಹಶಿಲ್ದಾರ್ ತೇಜಸ್ ಕುಮಾರ್ ಮಾತನಾಡಿ, ಬೆಂಗಳೂರು ಪೂರ್ವ ತಾಲೂಕಿನಲ್ಲಿ ಮತ್ತಷ್ಟು ಅನಧಿಕೃತ ಬಡಾವಣೆಗಳಿದ್ದು, ಇನ್ನೆರಡು ದಿನಗಳಲ್ಲಿ ಕಾರ್ಯಾಚರಣೆ ಮಾಡಿ ತೆರವುಗೊಳಿಸಲಾಗುವುದು ಎಂದರು.