ETV Bharat / state

ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಹಾಗೂ ಡಿಸಿಎಂ

ಕೆಂಪೇಗೌಡ ಜಯಂತಿ ಪ್ರಯುಕ್ತವಾಗಿ ಸಿಎಂ ಬಿಎಸ್​ವೈ, ಡಿಸಿಎಂ ಡಾ. ಅಶ್ವತ್ಥ್​ ನಾರಾಯಣ್​ ಹಾಗೂ ನಟರಾದ ಜಗ್ಗೇಶ್​, ಪುನೀತ್​ ರಾಜ್​ಕುಮಾರ್​ ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಹಾಗೂ ಡಿಸಿಎಂ
author img

By

Published : Sep 4, 2019, 12:26 PM IST

ಬೆಂಗಳೂರು: ಕೆಂಪೇಗೌಡ ಜಯಂತಿ ಪ್ರಯುಕ್ತವಾಗಿ ನಗರದ ಮೇಖ್ರಿ ವೃತ್ತದ ಬಳಿ ಇರುವ ಕೆಂಪೇಗೌಡ ಪ್ರತಿಮೆಗೆ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್​ ನಾರಾಯಣ್, ಬಿಬಿಎಂಪಿ ಮೇಯರ್​ ಗಂಗಾಂಬಿಕೆ, ನಟ ಜಗ್ಗೇಶ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಮಾಲಾರ್ಪಣೆ ಮಾಡಿದರು.

ಮಾಲಾರ್ಪಣೆ ಮಾಡಿ ಮಾತನಾಡಿದ ಡಿಸಿಎಂ ಅಶ್ವತ್ಥ್ ನಾರಾಯಣ್, ಇಂದು ಕೆಂಪೇಗೌಡ ಜಯಂತಿ ಇರುವ ಕಾರಣ ಡಿ.ಕೆ.ಶಿವಕುಮಾರ್ ಬಂಧನ ವಿಚಾರವಾಗಿ ನಾನು ಏನು ಮಾತನಾಡುವುದಿಲ್ಲ. ನಾನು ಈಗಾಗಲೇ ಪ್ರತಿಕ್ರಿಯೆ ಕೊಟ್ಟಿದ್ದೇನೆ. ಮತ್ತೊಮ್ಮೆ ನಾನು ಹೇಳುವುದು ಸೂಕ್ತವಲ್ಲ. ಶಾಂತಿ ಕಾಪಾಡುವುದು ನಮ್ಮ ಕರ್ತವ್ಯ. ಕಾಪಾಡುತ್ತೇವೆ ಎಂದ್ರು. ಇನ್ನು ನೀರು ಕುಡಿಯಲೇಬೇಕು ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿದ್ದೇನೆ ಎಂದ್ರು.

ಕೆಂಪೇಗೌಡ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಿಎಂ ಹಾಗೂ ಡಿಸಿಎಂ

ಸಿಎಂ ಯಡಿಯೂರಪ್ಪ ಮಾತನಾಡುವ ವೇಳೆ ಕೆಂಪೇಗೌಡರು ಬೆಂಗಳೂರಿಗೆ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಆದರೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಬಂಧನದ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ರು.

Intro:

Body:ಬೈಟ್ wrap ನಲ್ಲಿ ಕಲಿಸಲಾಗಿದೆ

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.