ETV Bharat / state

ಮಾಜಿ ಸಭಾಪತಿ ಡಿ.ಮಂಜುನಾಥ್ ನಿಧನಕ್ಕೆ ಗಣ್ಯರಿಂದ ಸಂತಾಪ - ಸಿಎಂ ಬಿ.ಎಸ್​. ಯಡಿಯೂರಪ್ಪ ಮತ್ತು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಸಂತಾಪ

ವಿಧಾನಪರಿಷತ್​​ನ ಮಾಜಿ ಸಭಾಪತಿ ಡಿ. ಮಂಜುನಾಥ್ ಅವರ ನಿಧನಕ್ಕೆ ಸಿಎಂ ಬಿ.ಎಸ್​. ಯಡಿಯೂರಪ್ಪ, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಸಿಎಂ ಹೆಚ್​​.ಡಿ. ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

former minister D. Manjunath
ಮಾಜಿ ಸಚಿವ ಡಿ .ಮಂಜುನಾಥ್ ನಿಧನ
author img

By

Published : Feb 3, 2020, 7:38 PM IST

Updated : Feb 3, 2020, 10:53 PM IST

ಬೆಂಗಳೂರು: ವಿಧಾನಪರಿಷತ್​​ನ ಮಾಜಿ ಸಭಾಪತಿ ಡಿ. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸರಳತೆ, ಸಜ್ಜನಿಕೆಯ ರಾಜಕಾರಣಿಯಾಗಿದ್ದ ಡಿ. ಮಂಜುನಾಥ್ ಅವರು ಅರಣ್ಯ, ಕಾರ್ಮಿಕ, ಯೋಜನೆ, ಪ್ರಾಥಮಿಕ ಶಿಕ್ಷಣ, ಉನ್ನತ ಶಿಕ್ಷಣ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವಿಧಾನ ಪರಿಷತ್ತಿನ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದರು. ಇವರ ನಿಧನದಿಂದ ಮೌಲ್ಯಾಧಾರಿತ ರಾಜಕಾರಣದ ಪೀಳಿಗೆಯ ಕೊಂಡಿಯೊಂದು ಕಳಚಿದಂತಾಗಿದೆ ಎಂದು ವಿಷಾದಿಸಿದ್ದಾರೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧುವರ್ಗ, ಅನುಯಾಯಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ದೇವೇಗೌಡ ಸಂತಾಪ:

ಮಂಜುನಾಥ್ ಅವರ ನಿಧನಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರೂ ಸಹ ಸಂತಾಪ ವ್ಯಕ್ತಪಡಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಅವರು ಪ್ರಾರ್ಥಿಸಿದ್ದಾರೆ.

ಹೆಚ್​ಡಿಕೆ, ದೇಶಪಾಂಡೆ ಹಾಗೂ ಗೋವಿಂದ ಎಂ. ಕಾರಜೋಳ ಸಂತಾಪ:

ಮಾಜಿ ಮುಖ್ಯಮಂತ್ರಿ ಹೆಚ್ .ಡಿ. ಕುಮಾರಸ್ವಾಮಿ ಅವರು ಕೂಡ ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ. ಮಂಜುನಾಥ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಡಿ. ಮಂಜುನಾಥ್ ಅವರು ಸಚಿವರಾಗಿ, ವಿಧಾನಪರಿಷತ್ತಿನ ಸಭಾಪತಿಯಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸಿದ್ದರು. ಸರಳ ವ್ಯಕ್ತಿತ್ವದ ಪ್ರತಿರೂಪದಂತೆ ಇದ್ದರು ಎಂದು ಸ್ಮರಿಸಿದ್ದಾರೆ. ಭಗವಂತ ಮೃತರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಬಂಧು ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಹಾಗೆಯೇ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರೂ ಕೂಡ ಡಿ. ಮಂಜುನಾಥ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

Last Updated : Feb 3, 2020, 10:53 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.