ETV Bharat / state

ಏಪ್ರಿಲ್ 20 ರಂದು ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ! - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಆರ್ಥಿಕ ಸ್ಥಿತಿ ಚೇತರಿಕೆ, ಲಾಕ್ ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನ, ಕೇಂದ್ರದ ಮಾರ್ಗಸೂಚಿಯಂತೆ ಸರಕು ಸಾಗಣೆಗೆ ಅವಕಾಶ ಸೇರಿದಂತೆ ಹಲವು ಮಹತ್ವದ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

CM announced Cabinet meeting on April 20
ಏಪ್ರಿಲ್ 20 ರಂದು ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ
author img

By

Published : Apr 16, 2020, 5:56 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಏಪ್ರಿಲ್ 20 ರಂದು ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ಕರೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿನ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 20 ರಂದು ಲಾಕ್​​ಡೌನ್​ ಅವಲೋಕನ ಮಾಡುವುದಾಗಿ ಹೇಳಿರುವ ಕಾರಣದಿಂದ ಮುಂದಿನ ನಿರ್ಧಾರ, ಲಾಕ್ ಡೌನ್ ಸಡಿಲಿಕೆ ಇತ್ಯಾದಿಗಳ ಕುರಿತು ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ‌ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಆರ್ಥಿಕ ಸ್ಥಿತಿ ಚೇತರಿಕೆ, ಲಾಕ್​ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನ, ಕೇಂದ್ರದ ಮಾರ್ಗಸೂಚಿಯಂತೆ ಸರಕು ಸಾಗಣೆಗೆ ಅವಕಾಶ ಸೇರಿದಂತೆ ಹಲವು ಮಹತ್ವದ ನಿರ್ಧಾರವನ್ನು ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.