ETV Bharat / state

ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ - raichuru reporter hanumanthu

ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಹನುಮಂತು ಅಪಘಾತದಲ್ಲಿ ಮೃತಪಟ್ಟಿದ್ದು, ಸಿಎಂ ಸಂತಾಪ ಸೂಚಿಸಿದ್ದಾರೆ. ಅಲ್ಲದೆ 5 ಲಕ್ಷ ರೂಪಾಯಿ ಪರಿಹಾರದ ಘೋಷಿಸಿದ್ದಾರೆ.

CM announces Rs 5 lakh compensation to journalist Hanumanthu family
ಪತ್ರಕರ್ತ ಹನುಮಂತು ಕುಟುಂಬಕ್ಕೆ 5ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಸಿಎಂ
author img

By

Published : Apr 21, 2020, 9:22 PM IST

ಬೆಂಗಳೂರು: ರಾಮನಗರದ ಬಳಿ ಅಪಘಾತದಲ್ಲಿ ಮೃತಪಟ್ಟ ಖಾಸಗಿ ಸುದ್ದಿ ವಾಹಿನಿಯೊಂದರ ವರದಿಗಾರ ಹನುಮಂತು ಅವರ ಕುಟುಂಬದವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಇತ್ತೀಚೆಗೆ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ಇಂದು ನೀಡಲಾಗಿದೆ. ಕೆಲವರಿಗೆ ನೇರವಾಗಿ ಚೆಕ್​​ ನೀಡಿದರೆ, ಮತ್ತೆ ಕೆಲವರಿಗೆ ಪೋಸ್ಟ್ ಮೂಲಕ ಪರಿಹಾರದ ಚೆಕ್ ಕಳುಹಿಸಿಕೊಡಲಾಗಿದೆ.

ಇನ್ನು ಮೃತ ಪತ್ರಕರ್ತರ ಕುಟುಂಬ ವರ್ಗಕ್ಕೆ ಪರಿಹಾರ ನೀಡುವ ದಿನದಂದೇ ಮತ್ತೋರ್ವ ಪತ್ರಕರ್ತ ಕರ್ತವ್ಯನಿರತವಾಗಿರುವಾಗಲೇ ಅಪಘಾತದಿಂದ ಅಸುನೀಗಿದ್ದಕ್ಕೆ ಸಿಎಂ ತೀವ್ರ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪತ್ರಕರ್ತ ಹನುಮಂತು ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಣೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.