ETV Bharat / state

ಮುಷ್ಕರದಿಂದ ಉಂಟಾದ ಸಮಸ್ಯೆ.. ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಸಿಎಂ ಬಿಎಸ್​ವೈ ಕಿಡಿ!!

ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ. ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದು ಸಿಎಂ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ..

cm b s yadiyurappa outrage against kodihalli chandrashekar
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
author img

By

Published : Dec 12, 2020, 2:30 PM IST

ಬೆಂಗಳೂರು: ಸಾರಿಗೆ ನೌಕರರನ್ನು ಎತ್ತಿಕಟ್ಟಿ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಕಾರಣರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಿಡಿಕಾರಿದ್ದಾರೆ. ಅವಶ್ಯಕ ಸೇವೆಯಡಿ ಬರುವ ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದುಷ್ಟಕರ ಸಂಗತಿ.

ಈ ಮುಷ್ಕರದಿಂದ ರಾಜ್ಯದೆಲ್ಲೆಡೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಈಗಾಗಲೇ ಸಾರಿಗೆ ಸಂಸ್ಥೆಯ ನೌಕರರ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರಿಗೆ ಸಲಹೆ-ಸೂಚನೆಗಳನ್ನು ನೀಡಿದ್ದೇನೆ. ಸಾರಿಗೆ ಸಚಿವರೂ ಸಹ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ನಿರಂತರವಾಗಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

cm b s yadiyurappa outrage against kodihalli chandrashekar
ಪ್ರಕಟಣೆ

ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಮತ್ತು ರಾಜ್ಯದ ವಿವಿಧೆಡೆ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟಾಗಲು ಕಾರಣಕರ್ತರಾಗಿರುತ್ತಾರೆ. ಅಲ್ಲದೇ ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಬಗ್ಗೆ ಕೋಡಿಹಳ್ಳಿ ಚಂದ್ರಶೇಖರ್​ರವರು ಅತ್ಯಂತ ಲಘುವಾಗಿ ಮಾತನಾಡಿರುವುದು ಕೂಡ ಖಂಡನೀಯ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿಯನ್ನೂ ಓದಿ: ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರ.. ರಾಣಿ ಚೆನ್ನಮ್ಮ ವಿವಿ ಪರೀಕ್ಷೆಗಳು ಮುಂದೂಡಿಕೆ..

ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಸತ್ಯಾಗ್ರಹವನ್ನು ನಿಲ್ಲಿಸಿ ಕರ್ತವ್ಯಕ್ಕೆ ಮರಳಿ. ನಂತರ ಸಾರಿಗೆ ಸಚಿವರ ಜೊತೆ ಚರ್ಚೆಗೆ ಬರಲು ಮತ್ತೊಮ್ಮೆ ಮನವಿ ಮಾಡುತ್ತೇನೆ ಎಂದು ಸಿಎಂ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.