ಬೆಂಗಳೂರು: ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಪುರುಷರ 61 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ನಲ್ಲಿ ಕಂಚಿನ ಪದಕ ಗೆದ್ದ ಕನ್ನಡಿಗ ಪಿ. ಗುರುರಾಜ್ ಪೂಜಾರಿ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿರುವ ಸಿಎಂ, ನಮ್ಮ ಹುಡುಗ ಗುರುರಾಜ್ ವೇಡ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವುದು ಸಂತೋಷವಾಗಿದೆ. ಇಡೀ ದೇಶ ಈ ಗೆಲುವನ್ನು ಸಂಭ್ರಮಿಸುತ್ತಿದೆ. ತಮ್ಮ ಪರಿಶ್ರಮ ಹಾಗೂ ಅಚಲ ನಿರ್ಧಾರದಿಂದ ಈ ಗೆಲುವು ಸಾಧಿಸಿರುವ ಗುರುರಾಜ್ಗೆ ಅಭಿನಂದನೆಗಳು. ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗಕ್ಕೆ ಏರಿಸಿ ಎಂದು ಹಾರೈಸಿದರು.
-
ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ ಪಿ. ಗುರುರಾಜ ಅವರಿಗೆ ಮಾನ್ಯ ಮುಖ್ಯಮಂತ್ರಿ @BSBommai ಅವರಿಂದ ಅಭಿನಂದನೆ ಹಾಗೂ ಶುಭ ಹಾರೈಕೆಗಳು. #CommonwealthGames2022 pic.twitter.com/Bhg9PTq1iH
— CM of Karnataka (@CMofKarnataka) July 30, 2022 " class="align-text-top noRightClick twitterSection" data="
">ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ ಪಿ. ಗುರುರಾಜ ಅವರಿಗೆ ಮಾನ್ಯ ಮುಖ್ಯಮಂತ್ರಿ @BSBommai ಅವರಿಂದ ಅಭಿನಂದನೆ ಹಾಗೂ ಶುಭ ಹಾರೈಕೆಗಳು. #CommonwealthGames2022 pic.twitter.com/Bhg9PTq1iH
— CM of Karnataka (@CMofKarnataka) July 30, 2022ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆ ಹಾರಿಸಿದ ಪಿ. ಗುರುರಾಜ ಅವರಿಗೆ ಮಾನ್ಯ ಮುಖ್ಯಮಂತ್ರಿ @BSBommai ಅವರಿಂದ ಅಭಿನಂದನೆ ಹಾಗೂ ಶುಭ ಹಾರೈಕೆಗಳು. #CommonwealthGames2022 pic.twitter.com/Bhg9PTq1iH
— CM of Karnataka (@CMofKarnataka) July 30, 2022
8 ಲಕ್ಷ ನಗದು ಪುರಸ್ಕಾರ ಘೋಷಣೆ: ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಕೂಡ ಕಂಚಿನ ಪದಕ ವಿಜೇತ ಕನ್ನಡಿಗ ಗುರುರಾಜ್ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದು, 8 ಲಕ್ಷ ರೂ. ನಗದು ಪುರಸ್ಕಾರ ಘೋಷಿಸಿದ್ದಾರೆ. ಇದೇ ವೇಳೆ ಪುರುಷರ 55 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆದ್ದಿರುವ ಸಂಕೇತ್ ಸರ್ಗರ್ ಅವರಿಗೂ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: CWG-2022: ವೇಟ್ ಲಿಫ್ಟಿಂಗ್ನಲ್ಲಿ ಭಾರತಕ್ಕೆ ಮತ್ತೊಂದು ಪದಕ.. ಕಂಚು ಗೆದ್ದ ಕನ್ನಡಿಗ