ETV Bharat / state

ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆ ಕುರಿತು ಆರೋಗ್ಯ ಸಚಿವರೊಂದಿಗೆ ಸಿಎಂ ಸಭೆ

author img

By

Published : Mar 4, 2022, 7:56 AM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣದ ಸುಧಾರಣೆ ನಿಟ್ಟಿನಲ್ಲಿ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ.

CM Bommai held meeting over reform the medical education system in the state
ಆರೋಗ್ಯ ಸಚಿವ ಕೆ.ಸುಧಾಕರ್ ಅವರೊಂದಿಗೆ ಮುಖ್ಯಮಂತ್ರಿ ಸಭೆ

ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಸುಧಾರಣೆ ಮತ್ತು ಕಡಿಮೆ ದರದಲ್ಲಿ ಎಲ್ಲರಿಗೂ ವೈದ್ಯಕೀಯ ಶಿಕ್ಷಣ ದೊರೆಯುವ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.

  • Took part in the meeting chaired by CM Shri @BSBommai to brainstorm about further strengthening the medical education system in the state and steps need to be taken to make medical education more inclusive, accessible and affordable to all.@CMofKarnataka

    1/6 pic.twitter.com/mA1J9nLReY

    — Dr Sudhakar K (@mla_sudhakar) March 3, 2022 " class="align-text-top noRightClick twitterSection" data=" ">

ರಷ್ಯಾ ಉಕ್ರೇನ್ ನಡುವಿನ ಯುದ್ದದಲ್ಲಿ ರಾಜ್ಯದ ವೈದ್ಯಕೀಯ ವಿದ್ಯಾರ್ಥಿಗಳು ಹೆಚ್ಚು ಸಿಲುಕಿಕೊಂಡಿರುವ ನಡುವೆಯೇ ಸಿಎಂ ಬೊಮ್ಮಾಯಿ ಈ ಮಹತ್ವದ ಸಭೆ ನಡೆಸಿದ್ದಾರೆ. ಆ ವಿದ್ಯಾರ್ಥಿಗಳೆಲ್ಲ ಕಡಿಮೆ ಶುಲ್ಕಕ್ಕೆ ವೈದ್ಯಕೀಯ ಶಿಕ್ಷಣ ಸಿಗಲಿದೆ ಎಂದು ಉಕ್ರೇನ್​​​ಗೆ ಹೋದವರಾಗಿದ್ದಾರೆ. ಹಾಗಾಗಿ ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಸುಧಾರಣೆಯಾದಲ್ಲಿ ಇಂತಹ ವಲಸೆ ತಪ್ಪಿಸಬಹುದು ಎನ್ನುವ ಚಿಂತನೆಯೊಂದಿಗೆ ಸಿಎಂ ಸಭೆ ನಡೆಸಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಕುರಿತು ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ಕಳೆದ ಏಳು ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಗುಣಾತ್ಮಕ ಬದಲಾವಣೆ ತಂದಿದೆ. ರಾಜ್ಯದಲ್ಲಿ ಕಳೆದ ಎರಡು ವರ್ಷದ ಬಿಜೆಪಿ ಸರ್ಕಾರದ ಅವಧಿಯಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಹಲವಾರು ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಏಮ್ಸ್​​​ಗಳ ಸಂಖ್ಯೆಯಲ್ಲಿ ಹೆಚ್ಚಳ: 2014 ರಲ್ಲಿ ದೇಶದಲ್ಲಿ 387 ವೈದ್ಯಕೀಯ ಕಾಲೇಜುಗಳಿದ್ದವು. ಕಳೆದ ಏಳು ವರ್ಷಗಳಲ್ಲಿ 586 ಕ್ಕೆ ಹೆಚ್ಚಳವಾಗಿದ್ದು, ಶೇ 54 ರಷ್ಟು ಹೆಚ್ಚಳವಾಗಿದೆ. ಅದೇ ರೀತಿ ದೇಶದಲ್ಲಿ ಕೇವಲ 7 ಏಮ್ಸ್ ಗಳಿದ್ದ ಹಂತದಲ್ಲಿ ಇಂದು 22 ಏಮ್ಸ್ ಗಳಿವೆ ಎಂದು ಮಾಹಿತಿ ನೀಡಿದ್ದಾರೆ.

2014ರ ವರೆಗೂ 82,000 ವೈದ್ಯಕೀಯ ಪದವಿ ಹಾಗೂ ಸ್ನಾತಕೋತ್ತರ ಸೀಟುಗಳಿದ್ದವು. ಅವುಗಳನ್ನು 1.48 ಲಕ್ಷ ಸೀಟುಗಳಿಗೆ ಹೆಚ್ಚಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾವೇರಿ, ಚಿಕ್ಕಮಗಳೂರು, ಯಾದಗಿರಿ ಮತ್ತು ಚಿಕ್ಕಬಳ್ಳಾಪುರಗಳಲ್ಲಿ ನಾಲ್ಕು ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗಿದೆ. ಬಿಜೆಪಿ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಜಿಲ್ಲೆಗೊಂದು ವೈದ್ಯಕೀಯ ಕಾಲೇಜು ತೆರೆಯಲು ಪ್ರಯತ್ನ ನಡೆಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಮೆರಿಟ್ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ವೈದ್ಯಕೀಯ ಶಿಕ್ಷಣ ದೊರೆಯುವಂತೆ ಮಾಡಲು ಎಲ್ಲ ರೀತಿಯ ಪ್ರಯತ್ನ ಮಾಡಲಿದೆ ಎಂದು ಸಚಿವ ಸುಧಾಕರ್​ ತಿಳಿಸಿದ್ದಾರೆ.

ಇದನ್ನೂ ಓದಿ: ಬಜೆಟ್​ಗೂ ಮುನ್ನ ಸಿನಿರಂಗಕ್ಕೆ ಬಂಪರ್​ ಆಫರ್​ ಕೊಟ್ಟ ಸಿಎಂ: ಕಾರ್ಯಕ್ರಮದಲ್ಲಿ ದರ್ಶನ್​ ಹೊಗಳಿದ ಬೊಮ್ಮಾಯಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.