ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟದ ನೂತನ ಸಚಿವರನ್ನು ಸದನಕ್ಕೆ ಪರಿಚಯಿಸಿದರು. ಎಲ್ಲಾ ಸಚಿವರ ಹೆಸರು ಹಾಗೂ ಅವರ ಹುದ್ದೆಗಳ ಬಗ್ಗೆ ಓದಿ ಹೇಳಿದರು.
ಇದೇ ವೇಳೆ ಸರ್ಕಾರದ ಮುಖ್ಯ ಸಚೇತಕರಾಗಿ ಶಾಸಕ ಸತೀಶ್ ರೆಡ್ಡಿ ಅವರನ್ನು ನೇಮಕ ಮಾಡಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನಕ್ಕೆ ತಿಳಿಸಿದರು.