ಬೆಂಗಳೂರು: ವರಿಷ್ಠರ ಭೇಟಿಗಾಗಿ ಇಂದು ಬೆಳಗ್ಗೆ ಬೆಂಗಳೂರಿನಿಂದ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರ ರಾಜಧಾನಿ ತಲುಪಿದ್ದಾರೆ. ಸಿಎಂ ಆದ ಬಳಿಕ ಮೊದಲ ದೆಹಲಿ ಪ್ರವಾಸ ಇದಾಗಿದೆ. ರಾಜ್ಯದ ಅಭಿವೃದ್ಧಿ ಹಾಗೂ ಸಚಿವ ಸಂಪುಟ ರಚನೆ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಬೆಳಗ್ಗೆ 6.10ರ ಏರ್ ಇಂಡಿಯಾ ವಿಮಾನದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಿದ್ದ ಸಿಎಂ ಬೊಮ್ಮಾಯಿ 9 ಗಂಟೆಗೆ ದೆಹಲಿ ತಲುಪಿದರು. ಮಧ್ಯಾಹ್ನ ಒಂದು ಗಂಟೆಯವರೆಗೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸಿಎಂ ಧನ್ಯವಾದ ಹೇಳಲಿದ್ದಾರೆ. ಜೊತೆಯಲ್ಲೇ ರಾಜ್ಯದ ಯೋಜನೆಗಳು ಮತ್ತು ಸಂಪುಟ ರಚನೆ ಕುರಿತು ಮಾತುಕತೆ ನಡೆಸಲಿದ್ದಾರೆ.
ಮಧ್ಯಾಹ್ನ 1:00 ಗಂಟೆಗೆ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರದ ಸಚಿವರು ಹಾಗೂ ಸಂಸತ್ ಸದಸ್ಯರ ಜೊತೆ ಸಭೆ ನಡೆಸಲಿರುವ ಸಿಎಂ, ಕೇಂದ್ರ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಕಡತ, ಬಾಕಿ ಯೋಜನೆ, ಮಂಜೂರಾತಿಗಾಗಿ ಇರುವ ಕಾಮಗಾರಿಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಿದ್ದಾರೆ.
ಇಂದು ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿರುವ ಸಿಎಂ ಬೊಮ್ಮಾಯಿ, ನಾಳೆ ವಾಪಸ್ ಬರುವ ಸಮಯವನ್ನು ಕಾಯ್ದಿರಿಸಿದ್ದಾರೆ. ಕೊನೆ ಕ್ಷಣದ ಬದಲಾವಣೆ, ವರಿಷ್ಠರು ಮತ್ತೆ ಚರ್ಚೆ ನಡೆಸುವ ಇಂಗಿತ ವ್ಯಕ್ತಪಡಿಸಿದರೆ ಅನುಕೂಲ ಆಗಲು ಸಮಯ ಕಾಯ್ದಿರಿಸಿಕೊಂಡಿದ್ದಾರೆ.
ಶೆಟ್ಟರ್ ಬಗ್ಗೆ ನನಗೆ ಗೌರವವಿದೆ, ಅವರ ಜೊತೆ ಫೋನ್ನಲ್ಲಿ ಮಾತನಾಡಿದ್ದೇನೆ: ಸಿಎಂ ಬೊಮ್ಮಾಯಿ