ನವದೆಹಲಿ/ಬೆಂಗಳೂರು: ಬೆಳಗಾವಿಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ 732.24 ಎಕರೆ ಪ್ರದೇಶವನ್ನು ರಾಜ್ಯಕ್ಕೆ ಹಸ್ತಾಂತರಿಸುವಂತೆ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ವೇಳೆ, ರಾಜ್ಯ ಸರ್ಕಾರಕ್ಕೆ ಸೇರಿದ ಬೆಳಗಾವಿ ಜಿಲ್ಲೆ ತುಕಮಟ್ಟಿ ಗ್ರಾಮದ 732.24 ಎಕರೆ ಪ್ರದೇಶವು ರಕ್ಷಣಾ ಪ್ರಾಧಿಕಾರದ ವಶದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಈ ಭೂ ಪ್ರದೇಶವನ್ನು ಬೆಳಗಾವಿ ಜಿಲ್ಲಾಧಿಕಾರಿಗೆ ಹಸ್ತಾಂತರಿಸಲು ರಕ್ಷಣಾ ಪ್ರಾಧಿಕಾರಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೇಂದ್ರ ರಕ್ಷಣಾ ಸಚಿವರನ್ನು ಕೋರಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಆಲಿಸಿದ ರಾಜನಾಥ್ ಸಿಂಗ್, ಮನವಿ ಸ್ವೀಕರಿಸಿ ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುವ ಅಭಯ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಲಸಂಪನ್ಮೂಲ ಮತ್ತು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.
ಇದನ್ನೂ ಓದಿ: ಒಕ್ಕಲಿಗರ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು: ಜ.23 ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ