ETV Bharat / state

ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ? - Ganesh chaturthi in karnataka

ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಅನುಮತಿ ನೀಡುವ ಕುರಿತು ಸಮಾಲೋಚನೆ ನಡೆಯುತ್ತಿದ್ದು, ಬಹುತೇಕ ಷರತ್ತುಬದ್ದ ಅನುಮತಿ ನೀಡಲು ಚಿಂತನೆ ನಡೆಸಲಾಗಿದೆ ಎನ್ನಲಾಗುತ್ತಿದೆ.

cm-basavaraj-bommai-meeting-on-ganesh-chaturthi-festival
ರಾಜ್ಯದಲ್ಲಿ ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ದ ಅನುಮತಿ ?
author img

By

Published : Sep 5, 2021, 2:26 PM IST

ಬೆಂಗಳೂರು: ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಆಯಾ ಜಿಲ್ಲೆಗಳಿಗೆ ಅನುಮತಿ ನೀಡುವ ಅಧಿಕಾರವನ್ನು ಒಳಗೊಂಡಂತೆ ಎಲ್ಲ ನಿರ್ಧಾರವನ್ನು ಕೆಲ ಹೊತ್ತಲ್ಲೇ ಪ್ರಕಟಿಸಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ 19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಸಭೆ ನಡೆಯುತ್ತಿದೆ‌. ಸಭೆಯಲ್ಲಿ ಸಚಿವರಾದ ಆರ್. ಅಶೋಕ್, ಬಿ.ಸಿ. ನಾಗೇಶ್ , ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

ಸಾರ್ವಜನಿಕ ಗಣೇಶ ಉತ್ಸವ ಆಚರಣೆಗೆ ಅನುಮತಿ ನೀಡುವ ಕುರಿತು ಸಮಾಲೋಚನೆ ನಡೆಯುತ್ತಿದ್ದು, ಬಹುತೇಕ ಷರತ್ತುಬದ್ಧ ಅನುಮತಿ ನೀಡಲು ಚಿಂತನೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ವಿಶ್ವದ 13 ಪ್ರಭಾವಿ ನಾಯಕರ ಪೈಕಿ ಪ್ರಧಾನಿ ನರೇಂದ್ರ ಮೋದಿಯೇ ನಂಬರ್​-1 ಲೀಡರ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.