ETV Bharat / state

ಸಂಘರ್ಷದ ವಾತಾವರಣದಲ್ಲಿಯೂ ಶಾಂತಿ - ಸುವ್ಯವಸ್ಥೆ ಕಾಪಾಡಿದ್ದೇವೆ: ಸಿಎಂ ಬೊಮ್ಮಾಯಿ

author img

By

Published : Mar 30, 2022, 12:17 PM IST

ಎಲ್ಲ ಸಂಘಟನೆಗಳು ಹಲವಾರು ವಿಚಾರದಲ್ಲಿ ಬ್ಯಾನ್ ಮಾಡುತ್ತಲೇ ಇರುತ್ತವೆ. ಆದರೆ, ಇದಕ್ಕೆಲ್ಲಾ ಸರ್ಕಾರ ತನ್ನ ನಿಲುವನ್ನು ಹೇಳುತ್ತಾ ಇರಲು ಆಗಲ್ಲ. ಯಾವಾಗ ಏನು ಹೇಳಬೇಕೋ ಆಗ ಹೇಳಲಿದ್ದೇವೆ. ಯಾವಾಗ ನಿಲುವು ವ್ಯಕ್ತಪಡಿಸಬೇಕೋ ಆಗ ವ್ಯಕ್ತಪಡಿಸಲಿದ್ದೇವೆ ಎಂದು ಸಿಎಂ ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
cm basavaraj bommai

ಬೆಂಗಳೂರು: ರಾಜ್ಯದಲ್ಲಿ ಶಾಂತಿ, ಅಭಿವೃದ್ಧಿ, ಸಾಮಾನ್ಯ ವ್ಯಕ್ತಿ ಭದ್ರತೆ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಹಿಜಾಬ್, ಹಲಾಲ್​ನಂತಹ ಸಂದರ್ಭದಲ್ಲಿಯೂ ಕಾನೂನು ವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಂಡಿದ್ದು, ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಯುಗಾದಿಗೆ ಮಾಂಸ ಖರೀದಿಸುವ ವಿಚಾರದ ಕುರಿತು ಹಲಾಲ್ ವಿರೋಧಿ ಅಭಿಯಾನ ನಡೆದಿದೆ. ಎಲ್ಲ ಸಂಘಟನೆಗಳು ಹಲವಾರು ವಿಚಾರದಲ್ಲಿ ಬ್ಯಾನ್ ಮಾಡುತ್ತಲೇ ಇರುತ್ತವೆ. ಆದರೆ, ಇದಕ್ಕೆಲ್ಲ ಸರ್ಕಾರ ತನ್ನ ನಿಲುವನ್ನು ಹೇಳುತ್ತಾ ಇರಲು ಆಗಲ್ಲ. ಯಾವಾಗ ಏನು ಹೇಳಬೇಕೋ ಆಗ ಹೇಳಲಿದ್ದೇವೆ. ಯಾವಾಗ ನಿಲುವು ವ್ಯಕ್ತಪಡಿಸಬೇಕೋ ಆಗ ವ್ಯಕ್ತಪಡಿಸಲಿದ್ದೇವೆ ಎಂದರು.

ಹಿಬಾಜ್, ದೇವಾಲಯ ಮಳಿಗೆ ಗುತ್ತಿಗೆ ವಿವಾದ, ಹಲಾಲ್ ವಿಚಾರಗಳಿಂದಾಗಿ ರಾಜ್ಯದಲ್ಲಿ ಸಂಘರ್ಷಮಯ ವಾತಾವರಣದಲ್ಲಿಯೂ ಇದುವರೆಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಡದಂತೆ ನೋಡಿಕೊಂಡಿದ್ದೇವೆ. ಮುಂದೆಯೂ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಾಹಿತಿಗಳ ಪತ್ರ ವಿಷಯದ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಅದರಲ್ಲಿನ ಅಂಶ ಅಧ್ಯಯನ ಮಾಡಿ ಅವರು ಹೇಳಿರುವುದನ್ನು ಪರಿಗಣಿಸುತ್ತೇವೆ. ಅಲ್ಲದೇ, ವಾಸ್ತವಾಂಶ ಏನಿದೆ ಅಂತ ಪರಿಶೀಲಿಸುತ್ತೇವೆ. ಅದರ ಆಧಾರದಲ್ಲಿ ಬರುವ ದಿನಗಳಲ್ಲಿ ಯಾವ ರೀತಿ ಪರಿಸ್ಥಿತಿ ನಿಭಾಯಿಸಬೇಕೆಂದರು.

ಇದುವರೆಗೆ ಬಜೆಟ್ ಅನುಷ್ಠಾನ ಸೆಪ್ಟಂಬರ್ - ಅಕ್ಟೋಬರ್ ಆಗುತ್ತಿತ್ತು. ಇದರಿಂದ ಯೋಜನೆಗಳ ಅನುಷ್ಠಾನಕ್ಕೆ ವಿಳಂಬವಾಗುತ್ತಿತ್ತು. ಆದರೆ ಈಗ ಹಾಗಾಗಬಾರದು ಎಂದು ತಿಂಗಳಾಂತ್ಯದಲ್ಲಿ ಸಿದ್ದತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಏಪ್ರಿಲ್ ಮೊದಲ, ಎರಡನೇ ವಾರದಲ್ಲಿ ಹಣಕಾಸು ಇಲಾಖೆ ಒಪ್ಪಿಗೆ ಕೊಡಲಿದೆ ಎಂದು ತಿಳಿಸಿದರು.

ಇದೇ ವೇಳೆ ಪಠ್ಯದಿಂದ ಟಿಪ್ಪು ಸುಲ್ತಾನ್ ಕೈಬಿಡುವ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಲು ನಿರಾಕರಿಸಿದ ಸಿಎಂ, ಪ್ರಶ್ನೆ ಕೇಳಿಸಿಕೊಂಡರೂ ಕೇಳಿಸಿಕೊಳ್ಳದಂತೆ ನಿರ್ಗಮಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಮಾಜಿ ಸಿಎಂ ಬಿಎಸ್​ವೈ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.