ETV Bharat / state

ನವೀನ್ ಮೃತದೇಹ ಪಡೆಯುವ ಪ್ರಯತ್ನ ನಡೆಯುತ್ತಿದೆ: ಸಿಎಂ ಬೊಮ್ಮಾಯಿ - Russia Ukraine News

ನವೀನ್ ಮೃತದೇಹ ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ ಅಂತಾ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Mar 5, 2022, 11:51 AM IST

ಬೆಂಗಳೂರು: ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ನಡೆಯುತ್ತಿದೆ. ಈ ಕುರಿತು ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಕ್ರೇನ್​ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕೀವ್​, ಕೀವ್​ನಲ್ಲಿ ಹೊರಬರಲಾರದ ಪರಿಸ್ಥಿತಿ ಇದೆ. ನವೀನ್ ಮೃತದೇಹ ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರು ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

ಇಂದು ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ 'ಜಲಜೀವನ್ ಮಿಷನ್' ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ, ನಂತರ ಶಿಕಾರಿಪುರದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣೆಬೆನ್ನೂರಿನಲ್ಲಿ ಉಕ್ರೇನ್​ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ. ಸರ್ಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು.

ಇದನ್ನೂ ಓದಿ: 'ಆಪರೇಷನ್ ಗಂಗಾ': ಮುಂದಿನ 24 ಗಂಟೆಗಳಲ್ಲಿ 16 ವಿಮಾನಗಳ ಆಗಮನ ಸಾಧ್ಯತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.