ETV Bharat / state

ದೆಹಲಿ ಪ್ರವಾಸ ಫಲಪ್ರದ, ಸಂಪುಟ ವಿಸ್ತರಣೆ ಮಾತುಕತೆ ನಡೆದಿಲ್ಲ: ಸಿಎಂ ಬೊಮ್ಮಾಯಿ

ಶಿರಾಡಿಘಾಟ್ ರಸ್ತೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಶಿರಾಡಿಘಾಟ್​​ನಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಅದನ್ನು ಕೂಡ ಮಾಡಿಕೊಡುವುದಾಗಿ ಗಡ್ಕರಿ ಭರವಸೆ ಕೊಟ್ಟಿದ್ದಾರೆ. ಚತುಷ್ಪಥ ಮಾರ್ಗ ನಿರ್ಮಾಣದ ಬಗ್ಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮಾತುಕತೆ ನಡೆಸಿದ್ದೇನೆ ಎಂದು ಸಿಎಂ ತಿಳಿಸಿದರು.

cm-basavaraj-bommai-reaction-after-delhi-visit
ದೆಹಲಿ ಪ್ರವಾಸ ಫಲಪ್ರದ, ಸಂಪುಟ ವಿಸ್ತರಣೆ ಮಾತುಕತೆ ನಡೆದಿಲ್ಲ: ಸಿಎಂ ಬೊಮ್ಮಾಯಿ
author img

By

Published : Sep 9, 2021, 12:24 PM IST

Updated : Sep 9, 2021, 1:19 PM IST

ಬೆಂಗಳೂರು: ಎರಡು ದಿನಗಳ ದೆಹಲಿ ಪ್ರವಾಸವು ಬಹಳ ಫಲಪ್ರದವಾಗಿದೆ. ವಿವಿಧ ಇಲಾಖೆಗಳಲ್ಲಿ ಬಾಕಿ ಉಳಿದಿರುವ ರಾಜ್ಯದ ಯೋಜನೆಗಳ ಬಗ್ಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದನೆ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಆರ್​.ಟಿ.ನಗರದ ನಿವಾಸದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇವೆ. ಉಪನಗರ ರಿಂಗ್ ರೋಡ್ ದಾಬಸ್ ಪೇಟೆಯಿಂದ ಹೊಸೂರುವರೆಗೆ ಭಾರತ್ ಮಾಲಾ ಮೊದಲನೇ ಯೋಜನೆಯಡಿ ಕೈಗೊಳ್ಳಲಾಗಿದೆ. ಅದರ ಭೂಸ್ವಾಧೀನ ವಿಚಾರದಲ್ಲಿದ್ದ ವಿವಾದವನ್ನು ಪರಿಹರಿಸಲಾಗಿದೆ.

ಆರು ತಿಂಗಳ ಒಳಗಾಗಿ ರಸ್ತೆ ನಿರ್ಮಾಣ ಕೆಲಸ ಪ್ರಾರಂಭವಾಗಲಿದೆ. ಅದೇ ರೀತಿ ಬಿಜಾಪುರ ಸಂಕೇಶ್ವರ ಹೈವೇ ವಿಸ್ತರಣೆಗೆ ಒಪ್ಪಿಕೊಂಡಿದ್ದಾರೆ. ಡಿಪಿಆರ್ ನಡೆಯುತ್ತಿದ್ದು, ಇದರೊಂದಿಗೆ ಇನ್ನೂ ನಾಲ್ಕು ಹೆದ್ದಾರಿಗಳನ್ನು ಭಾರತ್ ಮಾಲಾ ಎರಡನೇ ಹಂತದಲ್ಲಿ ತೆಗೆದುಕೊಳ್ಳಲು ಒಪ್ಪಿಕೊಂಡಿದ್ದಾರೆ ಎಂದರು.

ದೆಹಲಿ ಪ್ರವಾಸದ ಬಳಿಕ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಶಿರಾಡಿಘಾಟ್ ರಸ್ತೆ ಬಗ್ಗೆ ಮಾತುಕತೆ ನಡೆಸಲಾಗಿದೆ. ಶಿರಾಡಿಘಾಟ್​​ನಲ್ಲಿ ನಾಲ್ಕು ಪಥದ ರಸ್ತೆ ನಿರ್ಮಾಣ ಮಾಡಬೇಕಿದ್ದು, ಅದನ್ನು ಕೂಡ ಮಾಡಿಕೊಡುವುದಾಗಿ ಗಡ್ಕರಿ ಭರವಸೆ ಕೊಟ್ಟಿದ್ದಾರೆ. ಚತುಷ್ಪಥ ಮಾರ್ಗ ನಿರ್ಮಾಣದ ಬಗ್ಗೆ ಆದಷ್ಟು ಬೇಗ ಕಾಮಗಾರಿ ಆರಂಭಿಸಲು ಮಾತುಕತೆ ನಡೆಸಿದ್ದೇನೆ ಎಂದು ತಿಳಿಸಿದರು.

ಎಲೆಕ್ಟ್ರಾನಿಕ್ ಹಾರ್ಡ್​​ವೇರ್ ಪಾರ್ಕ್:

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಗ್ರಾಮೀಣ ಸಂಪರ್ಕಕ್ಕೆ ವಿಶೇಷ ಕಾರ್ಯಕ್ರಮ ಮಾಡೋಣ, ಡಿಜಿಟೈಸೇಷನ್ ಆಫ್ ರೂರಲ್ ಮಾಡೋಣ. ಅದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾತುಕತೆ ನಡೆಸಿ ಮುಂದುವರಿಯಬೇಕು ಎಂದು ತಿಳಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರ ಮಾರ್ಗದಲ್ಲಿ ಎಲೆಕ್ಟ್ರಾನಿಕ್ ಹಾರ್ಡ್​​ವೇರ್ ಪಾರ್ಕ್​​​ ಅನ್ನು 400 ಎಕರೆ ಜಾಗದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ.

ಆಪ್ಟಿಕಲ್ ಫೈಬರ್ ಕೇಬಲ್ ಜಾಲವನ್ನು ವಿಸ್ತರಣೆ ಮಾಡುವ ಸಲುವಾಗಿ ಯೋಜನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಸ್ಕಿಲ್ ವಿಶ್ವವಿದ್ಯಾಲಯ ಮಾಡಬೇಕು ಎನ್ನುವ ಉದ್ದೇಶ ಅವರಿಗಿದೆ. ಈ ಬಗ್ಗೆ ಪರಿಶೀಲನೆ ಮಾಡುವುದಾಗಿ ಹೇಳಿದ್ದೇವೆ ಎಂದರು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಜೊತೆ ಮಾತುಕತೆ ನಡೆಸಿದ್ದೇನೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 400 ಕೋಟಿ ರೂ.ಗಳನ್ನು ನಿನ್ನೆ ಬಿಡುಗಡೆ ಮಾಡಿದ್ದಾರೆ. ಇನ್ನು 1,500 ಕೋಟಿ ಬಿಡುಗಡೆಯಾಗಬೇಕು, ನಮ್ಮಿಂದ ಕೆಲ ವಿವರಣೆ ಕೊಡಬೇಕಿದೆ, ಅದಾದ ತಕ್ಷಣ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದರು.

ಪ್ರಮುಖ ಮಾರ್ಗಗಳ ಬಗ್ಗೆ ಚರ್ಚೆ:

ರೈಲ್ವೆ ಸಚಿವರ ಜೊತೆ ಮಾತುಕತೆ ನಡೆಸಿದ್ದೇನೆ. ಉಪನಗರ ರೈಲ್ವೆ ಹಾಗೂ ಬೈಯಪ್ಪನಹಳ್ಳಿ ನಿಲ್ದಾಣದ ಕಾಮಗಾರಿ ಕೂಡಲೇ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಪ್ರಮುಖ ಮಾರ್ಗಗಳ ಬಗ್ಗೆಯೂ ಮಾತುಕತೆ ನಡೆದಿದೆ. ತುಮಕೂರಿನಿಂದ ದಾವಣಗೆರೆ, ಹುಬ್ಬಳ್ಳಿಯಿಂದ ಬೆಳಗಾವಿ, ಬೀದರ್ - ಕಲಬುರಗಿ ಮಾರ್ಗಗಳನ್ನು ಆದಷ್ಟು ಬೇಗ ಕಾರ್ಯಗತ ಮಾಡಬೇಕು ಎಂದು ಹೇಳಿದ್ದೇವೆ. ನಮ್ಮ ಕಡೆಯಿಂದ ಭೂಮಿ ಕೊಡಬೇಕು, ಶೇ.50ರಷ್ಟು ವೆಚ್ಚ ಭರಿಸಲು ನಾವು ಸಿದ್ದರಿದ್ದೇವೆ ಎನ್ನುವ ಮಾಹಿತಿ ತಿಳಿಸಿದ್ದೇನೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರನ್ನು ಭೇಟಿ ಮಾಡಿ ನಮ್ಮ ಜಿಎಸ್​ಟಿ ಪರಿಹಾರನ್ನು ಮತ್ತೆ ಮುಂದುವರೆಸಬೇಕು. ನಬಾರ್ಡ್ ಯೋಜನೆಯನ್ನು ಕರ್ನಾಟಕಕ್ಕೆ ವಿಶೇಷ ಅನುಷ್ಠಾನ ಮಾಡಬೇಕು ಎಂದು ಮನವಿ ಮಾಡಿದ್ದೇನೆ. ಈ ಸಂಬಂಧ ಒಂದು ಸಭೆ ಮಾಡಲಾಗಿದೆ, ಮತ್ತೊಂದು ಸಭೆಯನ್ನು ನಡೆಸಿ ಅವರೇ ಬಂದು ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ ಎಂದರು.

ಸಂಪುಟ ವಿಸ್ತರಣೆ ಚರ್ಚಿಸಿಲ್ಲ:

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ, ಅವರಿಗೆ ಆರೋಗ್ಯ ಸಮಸ್ಯೆ ಇದೆ. ಹಾಗಾಗಿ ಜಾಸ್ತಿ ಮಾತುಕತೆ ನಡೆಸಲಿಲ್ಲ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಮುಂದೆ ಬರುವ ಎಲ್ಲ ಚುನಾವಣೆಗಳನ್ನು ಎದುರಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ಮಾಹಿತಿ ನೀಡಿದರು.

ನಿಫಾ ವೈರಸ್ ಬಗ್ಗೆ ಸಂಜೆ ನಿರ್ಧಾರ:

ನಿಫಾ ವೈರಸ್ ಬಗ್ಗೆ ಈಗಾಗಲೇ ಆರೋಗ್ಯ ಕಾರ್ಯದರ್ಶಿ ಮತ್ತು ತಜ್ಞರಿಗೆ ಸೂಚನೆ ಕೊಟ್ಟಿದ್ದೇನೆ. ಕೇರಳದಲ್ಲಿ ಯಾವ ರೀತಿ ಅದು ವರ್ತಿಸುತ್ತಿದೆ. ಕರ್ನಾಟಕದಲ್ಲಿ ಯಾವ ರೀತಿ ಪ್ರಭಾವ ಬೀರಲಿದೆ ಎನ್ನುವ ಕುರಿತು ಇಂದು ಸಂಜೆ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್:

ಕಲಬುರಗಿ ಮಹಾನಗರ ಪಾಲಿಕೆ ಮೈತ್ರಿ ಬಗ್ಗೆ ಇನ್ನು ಮಾತುಕತೆ ಆರಂಭಿಕ ಹಂತದಲ್ಲಿದೆ. ಆದರೆ, ಅಲ್ಲಿ ಬಿಜೆಪಿಯವರೇ ಮೇಯರ್ ಆಗಲಿದ್ದಾರೆ ಎನ್ನುವ ವಿಶ್ವಾಸ ಇಟ್ಟುಕೊಳ್ಳಿ ಎಂದು ಸಿಎಂ ಪ್ರತಿಕ್ರಿಯೆ ನೀಡಿದರು.

ಇದನ್ನೂ ಓದಿ: ರಸ್ತೆ ವಿಸ್ತರಣೆಗಾಗಿ ಮರ ಕಡಿಯಲು ಮುಂದಾದ ಪಾಲಿಕೆ.. ವಿದ್ಯಾರ್ಥಿಗಳಿಂದ ಅಪ್ಪಿಕೋ ಚಳವಳಿ

Last Updated : Sep 9, 2021, 1:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.