ಬೆಂಗಳೂರು: ಶಿವಮೊಗ್ಗದಲ್ಲಿ ಚಾಕು ಇರಿತ ಘಟನೆ ನಡೆಯಬಾರದಿತ್ತು. ಇದರಲ್ಲಿ ಯಾರೇ ತಪ್ಪು ಮಾಡಿದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ-2022ರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಶಿವಮೊಗ್ಗದಲ್ಲಿ ನಮ್ಮ ಅಧಿಕಾರಿಗಳು ಈಗಾಗಲೇ ಕ್ರಮ ತೆಗೆದುಕೊಂಡಿದ್ದಾರೆ. ಸ್ಥಳೀಯ ನಾಯಕರು ಸಹಕಾರ ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಕ್ರಮ ಕೈಗೊಳ್ಳಲಾಗಿದ್ದು, ಹೆಚ್ಚುವರಿ ಪೊಲೀಸ್ ಪೋರ್ಸ್ ಕಳುಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇದನ್ನೂ ಓದಿ: ಸಾವರ್ಕರ್ ಫ್ಲೆಕ್ಸ್ ತೆರವು ಗಲಾಟೆ: ನಾಳೆ ಶಿವಮೊಗ್ಗ, ಭದ್ರಾವತಿಯ ಶಾಲೆ ಕಾಲೇಜುಗಳಿಗೆ ರಜೆ