ಬೆಂಗಳೂರು: ಖಾತೆ ಅಸಮಾಧಾನದ ಬಗ್ಗೆ ಚರ್ಚೆ ಮಾಡುತ್ತೇನೆ. ಎಲ್ಲರೂ ನಮ್ಮವರೇ ನಾನು ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನ ವಿಜಯನಗರದಲ್ಲಿ ಮಾತನಾಡಿದ ಅವರು, ಅಸಮಾಧಾನಿತ ಸಚಿವರೆಲ್ಲರಲ್ಲರೂ ನಮ್ಮವರೇ. ಅಸಮಾಧಾನಿತರ ಜೊತೆ ಮಾತನಾಡಿದ್ದೇನೆ. ಇನ್ನೂ ಕೆಲವರ ಜೊತೆ ಮಾತನಾಡುತ್ತೇನೆ, ಎಲ್ಲವೂ ಸರಿ ಹೋಗಲಿದೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಸ್ವರ್ಣ ಬಂದಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಭಾರತ ಹೆಮ್ಮೆ ಪಡೆಯಬೇಕಾದ ವಿಚಾರವಾಗಿದೆ. ಮುಂದಿನ ದಿನಗಳಲ್ಲಿ ಈ ಸಾಧನೆ ಹಲವರಿಗೆ ಪ್ರೇರಣೆಯಾಗಲಿದೆ ಎಂದರು.
ಪ್ರಧಾನಿಗಳು ಕ್ರೀಡೆಗೆ ತುಂಬಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಕರ್ನಾಟಕದಲ್ಲಿಯೂ ಕ್ರೀಡೆಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು. ಮುಂದಿನ ದಿನಗಳಲ್ಲಿ ಒಲಿಂಪಿಕ್ಸ್ ಅಸೋಸಿಯೇಷನ್ ಜೊತೆ ಮಾತನಾಡುತ್ತೇನೆ. ಕ್ರೀಡೆಗೆ ನಮ್ಮ ಸಹಕಾರ ಯಾವಾಗಲೂ ಇರಲಿದೆ ಎಂದರು.
ಆದಿಚುಂಚನಗಿರಿ ಮಠಕ್ಕೆ ಭೇಟಿ, ಆಶೀರ್ವಾದ:
ಸಿಎಂ ಬಸವರಾಜ್ ಬೊಮ್ಮಾಯಿ ಶನಿವಾರ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಸಚಿವರಾದ ಆರ್.ಅಶೋಕ್, ಡಾ. ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ್ ಹಾಗೂ ಗೋಪಾಲಯ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ: ಬೊಮ್ಮಾಯಿ ಸಂಪುಟದಲ್ಲಿ ಹೊಸಬರಿಗೆ ಬಂಪರ್.. ಖಾತೆ ಹಂಚಿಕೆಯಲ್ಲಿ ಆರ್ಎಸ್ಎಸ್-ಹೈಕಮಾಂಡ್ ಜುಗಲ್ ಬಂದಿ..