ETV Bharat / state

ಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ : ಸಿಎಂ ಬಸವರಾಜ ಬೊಮ್ಮಾಯಿ - basavaraj bommai talk about yettinahole project in assembly

ಭೂಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ. ಹಣ ಒದಗಿಸಲಾಗಿದೆ. ಆದರೂ ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣಪಾವತಿ ಮಾಡುವುದು ವಿಳಂಬವಾದಲ್ಲಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಸಚಿವರು ವಿವರಿಸಿದರು..

cm-basavaraj-bommai
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Sep 14, 2021, 4:55 PM IST

Updated : Sep 14, 2021, 5:03 PM IST

ಬೆಂಗಳೂರು : ಎತ್ತಿನಹೊಳೆ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯಲ್ಲಿರುವ ಅಡೆತಡೆಗಳನ್ನು ನಿವಾರಿಸಲು ಸದ್ಯದಲ್ಲೇ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಕೊರಟಗೆರೆ ಶಾಸಕ, ಮಾಜಿ ಸಚಿವ ಡಾ. ಜಿ ಪರಮೇಶ್ವರ್ ಅವರು ಎತ್ತಿನಹೊಳೆ ಯೋಜನೆಯ ಬೈರಗೊಂಡ್ಲು ಜಲಾಶಯದ ಭೂಸ್ವಾಧೀನ ಪ್ರಕ್ರಿಯೆಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಈ ವೇಳೆ ಅವರಿಗೆ ಜಲ ಸಂಪನ್ಮೂಲ ಸಚಿವರು ನೀಡಿದ ಉತ್ತರಕ್ಕೆ ಧ್ವನಿಗೂಡಿಸಿ ಎತ್ತಿನಹೊಳೆಯಿಂದ ನೀರು ಎತ್ತಿಯೇ ತೀರುತ್ತೇವೆ ಎಂದು ಸಿಎಂ ತಿಳಿಸಿದರು.

ಎತ್ತಿನಹೊಳೆ ಯೋಜನೆ ಸಂಬಂಧ ಸದ್ಯದಲ್ಲೇ ಸಭೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು

ಇತ್ತೀಚೆಗೆ ತಾವು ಎತ್ತಿನಹೊಳೆ ಯೋಜನಾ ಪ್ರದೇಶಕ್ಕೆ ಭೇಟಿಕೊಟ್ಟು, ಭೂಸ್ವಾಧೀನವೂ ಸೇರಿದಂತೆ ಯೋಜನೆಯ ಅಡ್ಡಿ-ಆತಂಕಗಳನ್ನು ನಿವಾರಿಸಲು ಅಗತ್ಯ ಕ್ರಮಕೈಗೊಳ್ಳುವ ಪ್ರಯತ್ನ ಮಾಡಿದ್ದೇವೆ. ಇದರ ಫಲವಾಗಿ ಎರಡು ಬಹುದೊಡ್ಡ ಅಡೆತಡೆಗಳು ನಿವಾರಣೆಯಾಗಿವೆ. ಒಂದೆರಡು ತಿಂಗಳಲ್ಲಿ ಎತ್ತಿನಹೊಳೆಯಿಂದ ಪ್ರಾಯೋಗಿಕವಾಗಿ ನೀರು ಹರಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಎತ್ತಿನಹೊಳೆಯಂತಹ ಮಹತ್ವಾಕಾಂಕ್ಷಿ ಕುಡಿಯುವ ನೀರಿನ ಯೋಜನೆಗೆ ಇರುವ ಅಡ್ಡಿ ಆತಂಕ ಪರಿಹರಿಸಿ ತಕ್ಷಣ ಕ್ರಮಕೈಗೊಳ್ಳಲು ಕಾರ್ಯಪ್ರವೃತ್ತರಾಗಿದ್ದೇವೆ. ಆದಷ್ಟು ಬೇಗ ಫಲಿತಾಂಶ ನಿಮ್ಮ ಕಣ್ಣಿಗೆ ಕಾಣಿಸಲಿದೆ ಎಂದು ಹೇಳಿದರು.

ಭೂಸ್ವಾಧೀನ ಪ್ರಕ್ರಿಯೆಗೆ 195 ಕೋಟಿ ರೂ. ಹಣ ಒದಗಿಸಲಾಗಿದೆ. ಆದರೂ ಕೆಲ ಅಧಿಕಾರಿಗಳು ರೈತರಿಗೆ ಹಣವಿಲ್ಲವೆಂದು ಹೇಳುತ್ತಿದ್ದರು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಪ್ರಕರಣಗಳಲ್ಲಿ ರೈತರಿಗೆ ಹಣಪಾವತಿ ಮಾಡುವುದು ವಿಳಂಬವಾದಲ್ಲಿ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರರನ್ನಾಗಿಸಲಾಗುವುದು ಎಂದು ಸಚಿವರು ವಿವರಿಸಿದರು.

ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ತಾಲೂಕಿನ ರೈತರ 5078 ಎಕರೆ ಭೂಸ್ವಾಧೀನಕ್ಕೆ ಸಂಬಂಧಪಟ್ಟಂತೆ ಏಕರೂಪದ ದರ ನಿಗದಿಪಡಿಸುವಲ್ಲಿ ಸಮಸ್ಯೆಗಳಿವೆ. ಈ ಸಮಸ್ಯೆ ಪರಿಹಾರಕ್ಕೆ 2018ರಲ್ಲಿ ಅಂದಿನ ಉಪಮುಖ್ಯಮಂತ್ರಿಯಾಗಿದ್ದ ಡಾ. ಜಿ ಪರಮೇಶ್ವರ್ ಅವರ ನೇತೃತ್ವದ ಸಚಿವ ಸಂಪುಟದ ಉಪಸಮಿತಿ-ಸಭೆ ನಡೆದಿದೆ. ಆದರೂ ಯಾವುದೇ ಅಂತಿಮ ನಿರ್ಣಯ ಕೈಗೊಳ್ಳಲಾಗಲಿಲ್ಲ. ಈಗ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವರು ವಿವರವಾದ ಉತ್ತರ ನೀಡಿದರು.

ಎತ್ತಿನಹೊಳೆ ಯೋಜನೆಯ ಅನುಷ್ಠಾನದಲ್ಲಿ ಸಣ್ಣ-ಪುಟ್ಟ ಅಡ್ಡಿಗಳನ್ನು ನಿವಾರಿಸಿಕೊಂಡು ಮುಂದಿನ ಹೆಜ್ಜೆ ಇರಿಸುವುದಾಗಿ, ಆದಷ್ಟು ಬೇಗ ಯೋಜನೆ ಸಾಕಾರಗೊಳಿಸಲು ಪ್ರಯತ್ನ ಮಾಡುವುದಾಗಿ ಹೇಳಿದರು.

ಓದಿ: ಕಾಂಗ್ರೆಸ್‌ನಲ್ಲಿ ನಿಮಗೆ ಒಳ್ಳೆ ಭವಿಷ್ಯ ಇದೆ ಎಂದು ಫರ್ನಾಂಡಿಸ್‌ ಆಗಲೇ ಹೇಳಿದ್ದರು: ಸಿದ್ದರಾಮಯ್ಯ

Last Updated : Sep 14, 2021, 5:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.