ETV Bharat / state

ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ಸಿಎಂ ವಾಪಸ್ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕಕ್ಕೆ ವಾಪಸ್​

ದೆಹಲಿಯಿಂದ ವಾಪಸಾಗುತ್ತಿದ್ದಂತೆ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

cm-basavaraj-bommai-to-returns-to-bangalore-tonight-from-delhi
ಎರಡು ದಿನಗಳ ದೆಹಲಿ ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ಸಿಎಂ ವಾಪಸ್
author img

By

Published : Aug 26, 2021, 5:02 PM IST

ನವದೆಹಲಿ/ಬೆಂಗಳೂರು: ಎರಡು ದಿನಗಳ ಕಾಲ ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ರಾಜ್ಯದ ಯೋಜನೆಗಳು ಮತ್ತು ಅಂತಾರಾಜ್ಯ ಜಲ ವಿವಾದ ವಿಚಾರದಲ್ಲಿ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದ್ದು, ಉದ್ದೇಶಿತ ಪ್ರವಾಸ ಸಫಲವಾಗಿದೆ ಎನ್ನುವ ನಿರೀಕ್ಷೆಯೊಂದಿಗೆ ಮರಳುತ್ತಿದ್ದಾರೆ.

ಇಂದು ಸಂಜೆ 7.50ಕ್ಕೆ ನವದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾತ್ರಿ 10.40 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ.

ಜಿಲ್ಲಾ ಪ್ರವಾಸ:

ದೆಹಲಿಯಿಂದ ವಾಪಸಾಗುತ್ತಿದ್ದಂತೆ ಜಿಲ್ಲಾ ಪ್ರವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿ ಪ್ರಶಾಂತಿ ಬಾಲ ಮಂದಿರ ಟ್ರಸ್ಟ್ ವತಿಯಿಂದ ನಿರ್ಮಿಸಿರುವ 300 ಹಾಸಿಗೆಗಳ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಮುದ್ದೇನಹಳ್ಳಿ ಗ್ರಾಮದಲ್ಲಿ ಭಾರತರತ್ನ ಸರ್ ಎಂ. ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಲಿದ್ದಾರೆ. ನಂತರ ಮಧ್ಯಾಹ್ನ 3.15ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಇದನ್ನೂ ಓದಿ: ಆಡಳಿತ ಪಕ್ಷಗಳ ಪರ ಕೆಲ ಪೊಲೀಸರು ಕೆಲಸ ಮಾಡುತ್ತಿರುವುದು ಮುಜುಗರ ಉಂಟು ಮಾಡುತ್ತಿದೆ: ಸುಪ್ರೀಂಕೋರ್ಟ್‌ ಬೇಸರ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.