ಬೆಂಗಳೂರು: ನಾಳೆ ಬೆಳಗ್ಗೆ 8 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಲಿದ್ದಾರೆ. ಈ ಮೂಲಕ ಸಂಪುಟ ಸರ್ಜರಿಯ ಸುದ್ದಿ ಮತ್ತೆ ಮುನ್ನಲೆಗೆ ಬಂದಿದೆ. ಮಂಗಳವಾರದ ದೆಹಲಿ ಪ್ರವಾಸದ ವೇಳೆ ಕೇಂದ್ರ ಸಚಿವರುಗಳನ್ನು ಸಿಎಂ ಭೇಟಿಯಾಗಲಿದ್ದಾರೆ.
ಬಳಿಕ ಸಂಜೆ ಇನ್ವೆಸ್ಟ್ ಕರ್ನಾಟಕ ಸಂಬಂಧ ವಿವಿಧ ದೇಶಗಳ ರಾಯಭಾರಿಗಳು ಹಾಗೂ ಹೈ ಕಮಿಷನರ್ಗಳನ್ನು ಭೇಟಿ ಮಾಡಲಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಹೂಡಿಕೆ ಸಂಬಂಧ ಆಯಾ ದೇಶಗಳಲ್ಲಿ ರೋಡ್ ಶೋ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ.
ನಾಳೆ ರಾತ್ರಿ ದೆಹಲಿಯಲ್ಲೇ ಉಳಿಯಲಿದ್ದು, ವರಿಷ್ಠರ ಭೇಟಿಯಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ ಎನ್ನಲಾಗ್ತಿದೆ. ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾಗಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಪಡೆಯುವ ಸಾಧ್ಯತೆ ಇದೆ. ಬುಧವಾರ ಬೆಂಗಳೂರಿಗೆ ಮರಳಲಿದ್ದಾರೆ.
ಇದನ್ನೂ ಓದಿ: ಆಜಾನ್ - ಭಜನೆ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಶೀಘ್ರದಲ್ಲೇ ಮಾರ್ಗಸೂಚಿ