ಕೆ.ಆರ್ ಪುರ(ಬೆಂಗಳೂರು): ಇಲ್ಲಿನ ಹೊರಮಾವು ಅಗರದ ಶ್ರೀಮುತ್ತುರಾಯಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನಾ ಮತ್ತು ಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿ ಅವರು, 500 ವರ್ಷಗಳ ಹಿಂದಿನ ಪುರಾತನ ದೇವಾಲಯಗಳ ಅಭಿವೃದ್ಧಿಗೆ ಒತ್ತು ನೀಡುತ್ತಿರುವುದು ಸಂತಸದ ವಿಷಯ. ಕೆ.ಆರ್.ಪುರ ಕ್ಷೇತ್ರಕ್ಕೆ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ನಿರಂತರವಾಗಿ ಮಾಡಲಾಗುತ್ತಿದೆ. ಭೈರತಿ ಬಸವರಾಜ ಅವರಿಗೆ ಇರುವ ಅಭಿವೃದ್ಧಿ ಕಾಳಜಿಯಿಂದಾಗಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದೆ. ಕ್ಷೇತ್ರದ ಯಾವುದೇ ಕೆಲಸ ಆಗಬೇಕಿದ್ದರೆ ತಕ್ಷಣ ನನ್ನ ಗಮನಕ್ಕೆ ತಂದು ಕಾರ್ಯಗಳನ್ನು ಮಾಡಿಸುವಲ್ಲಿ ನಿಸ್ಸೀಮರು ಎಂದು ಹೇಳಿದರು.
ಭೈರತಿ ಬಸವರಾಜ್ ಗೆಲ್ಲಿಸಲು ಮನವಿ: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಬಸವರಾಜ್ ಅವರನ್ನು ಮುಂದಿನ ಚುನಾವಣೆಯಲ್ಲಿ ಮತ್ತೊಮ್ಮೆ ಆಯ್ಕೆ ಮಾಡುವ ಮೂಲಕ ಆಶೀರ್ವಾದ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಹೊರಮಾವು ಅಗರ ಗ್ರಾಮದ ಮುಖಂಡರಾದ ರಾಜು, ಬಚ್ಚೇಗೌಡ, ತ್ಯಾಗರಾಜ್, ಆನಂದ್ ಮತ್ತಿತರರು ಇದ್ದರು.
ಇದನ್ನೂ ಓದಿ :ಸೋಲಾರ್ ಪರವಾನಗಿ ಅವ್ಯವಹಾರದ ಬಗ್ಗೆ ಸಮಗ್ರ ತನಿಖೆ: ಸಿಎಂ ಬೊಮ್ಮಾಯಿ