ETV Bharat / state

ಬೊಮ್ಮಾಯಿ ಚೊಚ್ಚಲ ಬಜೆಟ್​​​ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಖಚಿತ: ಸಿಎಂ ಲೆಕ್ಕಾಚಾರ ಹೇಗಿದೆ? - ರಾಜ್ಯದಲ್ಲಿ ಬಜೆಟ್​ನಲ್ಲಿ ಬೆಂಗಳೂರಿಗೆ ಹೆಚ್ಚಿ ಕೊಡುಗೆ ಸಾಧ್ಯತೆ

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಮಾರ್ಚ್​.04ರಂದು ಮೊದಲ ಬಜೆಟ್​ ಮಂಡನೆ ಮಾಡಲಿದ್ದಾರೆ. ಈ ಬಾರಿ ಆಯವ್ಯಯದಲ್ಲಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆ ನೀಡಲು ಸಿಎಂ ಬೊಮ್ಮಾಯಿಯವರು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

CM Basavaraj Bommai will give more contribution to Bangalore in State Budget
ಬೊಮ್ಮಾಯಿ ಚೊಚ್ಚಲ ಬಜೆಟ್​​​ನಲ್ಲಿ ಬೆಂಗಳೂರಿಗೆ ಬಂಪರ್ ಕೊಡುಗೆ ಖಚಿತ
author img

By

Published : Feb 24, 2022, 8:16 PM IST

ಬೆಂಗಳೂರು: ಮಾರ್ಚ್.4ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ವಿಧಾನಸಭೆ ಚುನಾವಣೆಗೆ 14 ತಿಂಗಳುಗಳು ಉಳಿದಿರುವ ಹಿನ್ನೆಲೆ ಆರ್ಥಿಕ ಸಂಕಷ್ಟದ ಮಧ್ಯೆ ಸಿಎಂಗೆ ಜನಸ್ನೇಹಿ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ. ಇತ್ತ ಬಿಬಿಎಂಪಿ ಚುನಾವಣೆಯೂ ಹೊಸ್ತಿಲಲ್ಲಿ ಇದ್ದು, ಬೊಮ್ಮಾಯಿ ತಮ್ಮ ಆಯವ್ಯದಲ್ಲಿ ರಾಜಧಾನಿಗೆ ಹೆಚ್ಚಿನ ಕೊಡುಗೆ ನೀಡುವ ಲೆಕ್ಕಾಚಾರದಲ್ಲಿದ್ದಾರೆ.

2023 ವಿಧಾನಸಭೆ ಚುನಾವಣೆ ಹಿನ್ನೆಲೆ 2022-23ರ ಬಜೆಟ್ ಬಿಜೆಪಿಗೆ ನಿರ್ಣಾಯಕವಾಗಿದೆ. ವಿಧಾನಸಭೆ ಚುನಾವಣೆ ಪೂರ್ವ ಪೂರ್ಣ ಪ್ರಮಾಣದ ಬಜೆಟ್ ಇದಾಗಲಿದೆ. ಹೀಗಾಗಿ ಬೊಮ್ಮಾಯಿ ಬಜೆಟ್ ಚುನಾವಣಾ ಕೇಂದ್ರೀಕೃತ ಬಜೆಟ್ ಆಗುವುದರಲ್ಲಿ ಅನುಮಾನ ಇಲ್ಲ. ಆದ್ದರಿಂದ ಈ ಬಾರಿ ಜನಸ್ನೇಹಿ, ಜನರಿಗೆ ಹೊರೆಯಾಗದ ,ಜನರಿಗೆ ಪ್ರಿಯವಾಗುವಂತಹ ಬಜೆಟ್ ಮಂಡಿಸುವ ಕಸರತ್ತಿನಲ್ಲಿ ಸಿಎಂ ಬೊಮ್ಮಾಯಿ ಇದ್ದಾರೆ.

ಬೆಂಗಳೂರಿಗೆ ಹೆಚ್ಚಿನ ಬಜೆಟ್ ಕೊಡುಗೆ: ಬಿಬಿಎಂಪಿ ಚುನಾವಣೆಯೂ ಸನಿಹದಲ್ಲಿದೆ. ಹೀಗಾಗಿ ಈ ಬಾರಿಯ ಬಜೆಟ್​​​ನಲ್ಲಿ ಸಿಎಂ ಬೊಮ್ಮಾಯಿ ಬೆಂಗಳೂರಿಗೆ ಹೊಸ ಯೋಜನೆಗಳನ್ನು ನೀಡುವ ಅನಿವಾರ್ಯತೆಯೂ ಇದೆ. ಬಿಜೆಪಿಗೆ ವಿಧಾನಸಭೆ ಚುನಾವಣಾ ಲೆಕ್ಕಾಚಾರದಲ್ಲಿ ಬೆಂಗಳೂರು ನಗರ ಅತಿ ಮುಖ್ಯ ಚುನಾವಣಾ ಕಣವಾಗಿದೆ. ಹೀಗಾಗಿ ಸಿಎಂ ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಬೆಂಗಳೂರಿನ ಬಿಜೆಪಿ ಶಾಸಕರ ನಿಯೋಗ ಸಿಎಂರನ್ನು ಭೇಟಿಯಾಗಿ ಬಜೆಟ್‌ನಲ್ಲಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆ ನೀಡುವಂತೆ ಮನವಿ ಮಾಡಿದ್ದಾರೆ. ಬೆಂಗಳೂರಿಗರಿಗೆ ಸಹಕಾರಿಯಾಗುವ ಕೆಲ ಮಹತ್ವದ ಯೋಜನೆಗಳನ್ನು ಘೋಷಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿ, ಬೇಡಿಕೆಗಳ ಪಟ್ಟಿಯನ್ನೂ ಸಲ್ಲಿಕೆ ಮಾಡಿದ್ದಾರೆ. ಬಿಬಿಎಂಪಿ ಚುನಾವಣೆ ಹಿನ್ನೆಲೆ ಬೆಂಗಳೂರಿನ ಬಹು ನಿರೀಕ್ಷಿತ ಯೋಜನೆಗಳನ್ನು ಘೋಷಿಸುವಂತೆ ಶಾಸಕರು ಮನವಿ ಮಾಡಿದ್ದಾರೆ. ಸಿಎಂ ಅದಕ್ಕೆ ಸಕಾರಾತ್ಮಕವಾಗಿನೇ ಸ್ಪಂದಿಸಿದ್ದಾರೆ.

ಬಜೆಟ್​ನಲ್ಲಿ ಬೆಂಗಳೂರು ಲೆಕ್ಕಾಚಾರ ಏನು?: ಸಿಎಂ ಬೊಮ್ಮಾಯಿ ಬೆಂಗಳೂರಿಗೆ ಹೆಚ್ಚಿನ ಕೊಡುಗೆ ನೀಡುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಪ್ರಮುಖವಾಗಿ ಬೆಂಗಳೂರಿಗರ ಬಹು ವರ್ಷಗಳ ಬೇಡಿಕೆಯಾದ 'ಬಿ'ಖಾತ ಆಸ್ತಿಗಳನ್ನು 'ಎ' ಖಾತಾಗೆ ಪರಿವರ್ತಿಸುವ ಘೋಷಣೆಯನ್ನು ಮಾಡುವ ಸಾಧ್ಯತೆ ಇದೆ. ಈ ಸಂಬಂಧ ಈಗಾಗಲೇ ಸರ್ಕಾರ ಮಟ್ಟದಲ್ಲಿ ಸಭೆ ನಡೆಸಿದ್ದು, ಬಜೆಟ್​​​ನಲ್ಲಿ ಸಿಎಂ ಬೊಮ್ಮಾಯಿ ಈ ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಗರದಲ್ಲಿ 6 ಲಕ್ಷಕ್ಕೂ ಅಧಿಕ 'ಬಿ' ಖಾತ ಆಸ್ತಿಗಳಿದ್ದು, ಅವುಗಳನ್ನು 'ಎ' ಖಾತಾ ಮಾಡುವ ಚಿಂತನೆ ಇದೆ. ಇದರಿಂದ ಸರ್ಕಾರಕ್ಕೆ 2000 ಕೋಟಿ ರೂ. ಆದಾಯ ಸಂಗ್ರಹವಾಗುವುದರ ಜೊತೆಗೆ ಬಿ ಖಾತಾ ಆಸ್ತಿದಾರರನ್ನು ತನ್ನತ್ತ ಸೆಳೆಯುವ ಯೋಚನೆ ಬಿಜೆಪಿ ಸರ್ಕಾರದ್ದು, ಇದು ಬಿಬಿಎಂಪಿ ಚುನಾವಣೆಯಲ್ಲಿ ಹೆಚ್ಚಿನ ರಾಜಕೀಯ ಲಾಭ ತರಲಿದೆ.

ಸಕ್ಷಮ ಪ್ರಾಧಿಕಾರಿಗಳಿಂದ ನಕ್ಷೆ ಮಂಜೂರಾತಿಗೆ ಅನುಮೋದನೆ ಪಡೆಯದೆ, ಭೂಪರಿವರ್ತನೆ ಮಾಡಿಸದೆಯೇ ಬಡಾವಣೆಗಳನ್ನು ನಿರ್ಮಿಸಿ, ನಿವೇಶನಗಳನ್ನು ಮಾರಾಟ ಮಾಡಲಾಗಿದೆ. ಅವೈಜ್ಞಾನಿಕವಾಗಿ ಎಲ್ಲೆಡೆ ಅನಧಿಕೃತ ಬಡಾವಣೆಗಳು ತಲೆಯೆತ್ತಿದೆ. ಹಾಗಾಗಿಯೇ, ಅನುಮೋದನೆ ಪಡೆಯದ ಬಡಾವಣೆಗಳಲ್ಲಿನ ನಿವೇಶನಗಳು ಮತ್ತು ಕಟ್ಟಡ ನಿರ್ಮಿಸಿರುವ ನಿವೇಶನಗಳಿಗೆ 'ಎ' ಖಾತಾ ನೀಡುವ ಬದಲಿ 'ಬಿ' ಖಾತಾ ನೀಡಲಾಗುತ್ತಿದೆ. ಇವುಗಳಿಗೆ 'ಎ' ಖಾತಾಗೆ ಪರಿವರ್ತಿಸಲು ಸರ್ಕಾರ ಚಿಂತನೆ ನಡೆಸಿದೆ.

ಕಟ್ಟಡ ಬೈಲಾ ಉಲ್ಲಂಘಿಸಿ ಕಟ್ಟಡ ನಿರ್ಮಿಸಿರುವ ಪ್ರಕರಣಗಳು ಇದರ ವ್ಯಾಪ್ತಿಯಲ್ಲಿ ಬರಲ್ಲ. 'ಎ' ಖಾತಾ ನಿವೇಶನದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸಿದ್ದರೂ ಅದು ಅಕ್ರಮ ಕಟ್ಟಡ ಎನಿಸಿಕೊಳ್ಳುತ್ತದೆ. ಈ ಉಲ್ಲಂಘನೆಗಳನ್ನು ಅಕ್ರಮ ಸಕ್ರಮ ಮಾಡುವ ಯೋಜನೆ ಸುಪ್ರೀಂಕೋರ್ಟ್ ಅಂಗಳದಲ್ಲಿದೆ. ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೂ ಅಕ್ರಮ ಸಕ್ರಮಕ್ಕೂ ಸಂಬಂಧ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಟಿಡಿಆರ್ ಬ್ಯಾಂಕ್ ಸ್ಥಾಪನೆ ಮಾಡುವ ಮೂಲಕ ರಸ್ತೆ ಅಗಲೀಕರಣಕ್ಕೆ ಮತ್ತು ಸಾರ್ವಜನಿಕ ಸ್ವತ್ತುಗಳು ಮೌಲ್ಯಕ್ಕೆ ತಕ್ಕುದಾದ ಟಿಡಿಆರ್ ಕೊಡುವ ನೀತಿಯನ್ನು ಬಜೆಟ್​​​​ನಲ್ಲಿ ಘೋಷಿಸುವ ಸಾಧ್ಯತೆ ಇದೆ. ಈಗಾಗಲೇ ವೃದ್ಧರಿಗೆ ಮತ್ತು ಶಾಲೆ,ಕಾಲೇಜು ಮಕ್ಕಳಿಗೆ ಬಿಎಂಟಿಸಿ ಬಸ್​​​ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿದ್ದು, ಅದೇ ರೀತಿ ಮಹಿಳೆಯರಿಗೆ ಮತ್ತು ಹೆಣ್ಣುಮಕ್ಕಳಿಗೆ ಬಿಎಂಟಿಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಪಾಸ್​​​ಗಳನ್ನು ವಿತರಿಸುವ ಬಗ್ಗೆನೂ ಚರ್ಚೆ ನಡೆದಿದೆ.

ಬೆಂಗಳೂರು ಉಪನಗರ ರೈಲು ಯೋಜನೆಗೆ ಹೆಚ್ಚಿನ ಅನುದಾನ ನೀಡುವ ಬಗ್ಗೆನೂ ಸಿಎಂ ಬಜೆಡ್​​​​ನಲ್ಲಿ ಘೋಷಿಸುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ವಿಸ್ತರಣೆ, ಮೇಲ್ಸೇತುವೆ, ಅಂಡರ್ ಪಾಸ್​​​​ಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸಿಎಂ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅದರ ಜೊತೆಗೆ ಪೆರಿಫರಲ್ ರಿಂಗ್ ರಸ್ತೆಗೆ ಹೆಚ್ಚಿನ ಅನುದಾನ ನೀಡಿ ಯೋಜನೆ ಶೀಘ್ರ ಅನುಷ್ಠಾನದ ಘೋಷಣೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ತೋಟದ ಮನೆಯಲ್ಲಿ ಕತ್ತು ಸೀಳಿ ವ್ಯಕ್ತಿಯ ಬರ್ಬರ ಕೊಲೆ.. ಕೆ ಆರ್​ ನಗರದಲ್ಲಿ ಹರಿಯಿತು ನೆತ್ತರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.