ETV Bharat / state

ಮೀಸಲಾತಿ ಹೆಚ್ಚಳ ಮಾಡಲು ಸರ್ಕಾರ ಬದ್ಧ- ಸಿಎಂ ಬಸವರಾಜ ಬೊಮ್ಮಾಯಿ - ಮೀಸಲಾತಿ ಹೆಚ್ಚಳ ಕುರಿತು ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ

ನಮ್ಮ ಸರ್ಕಾರ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸಲು ಬದ್ದವಾಗಿದೆ. ಈಗಾಗಲೇ ಪರಿಶಿಷ್ಟ ವರ್ಗದವರ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು..

cm-basavaraja-bommai-assured-reservation-to-sc-st-people
ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು
author img

By

Published : Mar 30, 2022, 4:19 PM IST

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಂಚಮಸಾಲಿ ಹಾಗೂ ಹಿಂದುಳಿದ ವರ್ಗಗಳಿಗೆ ಸಂವಿಧಾನ ಬದ್ದವಾಗಿ ಮೀಸಲಾತಿ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸದನ ಇಂದು ಬೆಳಗ್ಗೆ ಆರಂಭವಾಗುತ್ತಿದ್ದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಚುನಾವಣಾ ವ್ಯವಸ್ಥೆಯೇ ಸುಧಾರಣೆಗಳ ಅಗತ್ಯತೆ ಕುರಿತ ಚರ್ಚೆಗೆ ಮುಂದಾದರು.

ಮೀಸಲಾತಿ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿರುವುದು..

ಈ ವೇಳೆ ಸದನದ ಬಾವಿಗೆ ಇಳಿದು ಧರಣಿ ನಡೆಸಿದ ಕಾಂಗ್ರೆಸ್ ಸದಸ್ಯರಾದ ಪ್ರಿಯಾಂಕ್ ಖರ್ಗೆ, ರಘುಮೂರ್ತಿ, ಭೀಮಾ ನಾಯಕ್, ಅಜಯ್ ಧರ್ಮಸಿಂಗ್ ಮತ್ತಿತರ ಸದಸ್ಯರು, ಪರಿಶಿಷ್ಟ ಪಂಗಡಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು. ಮೀಸಲಾತಿಯಲ್ಲಿ ವಾಲ್ಮೀಕಿ ಸಮುದಾಯದ ಶ್ರೀಗಳು ಕಳೆದ 49 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರ ಯಾವುದಾದರೊಂದು ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಮೀಸಲಾತಿ ಕುರಿತಂತೆ ಮಾತನಾಡಲು ಮುಂದಾದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧರಣಿ ನಿರಂತರ ಮನವೊಲಿಸಿ ಅವರ ಸ್ವಸ್ಥಾನಕ್ಕೆ ಮರಳುವಂತೆ ಮಾಡಿದರು. ಈ ವೇಳೆ ಸದನಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ನಮ್ಮ ಸರ್ಕಾರ ಎಲ್ಲ ವರ್ಗದವರಿಗೂ ಸಾಮಾಜಿಕ ನ್ಯಾಯ ಒದಗಿಸಲು ಬದ್ದವಾಗಿದೆ.

ಈಗಾಗಲೇ ಪರಿಶಿಷ್ಟ ವರ್ಗದವರ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಪರಿಶಿಷ್ಟ ಪಂಗಡದ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳಿಗೆ ಮೀಸಲಾತಿ ನೀಡುವ ಸಂಬಂಧ ಸರ್ವಪಕ್ಷಗಳ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸುತ್ತದೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಿಸಬೇಕೆಂಬ ಒತ್ತಾಯವಿದೆ. ನಾವು ಶೇ.50ಕ್ಕಿಂತ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಸುಪ್ರೀಂಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದ್ದೇವೆ.

ಯಾವುದೇ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಬೇಕಾದರೆ ಕಾನೂನು ಚೌಕಟ್ಟಿನಲ್ಲೇ ಕ್ರಮಕೈಗೊಳ್ಳಬೇಕು. ಹೀಗಾಗಿ, ನಮ್ಮ ಸರ್ಕಾರ ನಾಗಮೋಹನ್ ದಾಸ್ ವರದಿಯನ್ನು ಅಧ್ಯಯನ ಮಾಡಿ ವರದಿ ನೀಡುವಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಅವರಿಗೆ ಸೂಚಿಸಲಾಗಿದೆ. ಈ ಸದನದಲ್ಲಿ ಎಲ್ಲರಿಗೂ ಸ್ಪಷ್ಟ ಭರವಸೆ ಕೊಡುವುದೇನೆಂದರೆ ಎಲ್ಲಾ ಸಮುದಾಯಗಳ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸದ್ಯದಲ್ಲೇ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುವುದು.

ಪ್ರತಿಭಟನೆ ನಡೆಸುತ್ತಿರುವ ಶ್ರೀಗಳು ತಮ್ಮ ಧರಣಿಯನ್ನು ಕೈಬಿಡಬೇಕೆಂದು ಮನವಿ ಮಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಒದಗಿಸಲು ಸರ್ಕಾರ ಬದ್ದವಾಗಿದೆ ಎಂದರು.

ಮನವಿ : ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕಳೆದ 49 ದಿನಗಳಿಂದ ಧರಣಿ ಸತ್ಯಾಗ್ರಹ ಮಾಡುವ ಸ್ಥಳಕ್ಕೆ ತಮ್ಮ ಸಚಿವ ಸಂಪುಟ ಸಚಿವರನ್ನು ಕಳುಹಿಸಿ ಶ್ರೀಗಳ ಮನವೊಲಿಸಿ ಧರಣಿ ಕೈಬಿಡುವಂತೆ ಕೋರಲಾಗುವುದು ಎಂದರು. ಸ್ವಲ್ಪ ಸಮಯಾವಕಾಶ ಕೊಟ್ಟರೆ ಎಸ್ಸಿ-ಎಸ್ಟಿ ಜನಸಂಖ್ಯೆಗೆ ಅನುಗುಣವಾಗಿ ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು.

ಈ ಹಂತದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಕಾಲಮಿತಿಯಲ್ಲಿ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಮತ್ತೆ ಮಾತು ಮುಂದುವರೆಸಿದ ಮುಖ್ಯಮಂತ್ರಿಗಳು, ಆದ್ಯತೆ ಮೇಲೆ ನಿರ್ಧಾರ ಕೈಗೊಂಡು ಒಳ್ಳೆಯ ಸುದ್ದಿ ಕೊಡುತ್ತೇವೆ. ಹಿಂದುಳಿದ ವರ್ಗದ ಆಯೋಗದ ವರದಿ ಅನ್ವಯ ಹಿಂದುಳಿದ ವರ್ಗದ ಸಮುದಾಯದ ಮೀಸಲಾತಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಎಸ್​ಟಿ ಸಮುದಾಯಕ್ಕೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿದರು.

ಆಗ ಮಾತನಾಡಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ವಿಶೇಷ ಪ್ರಕರಣದಲ್ಲಿ ಮೀಸಲಾತಿ ಹೆಚ್ಚಳಕ್ಕೆ ಅವಕಾಶವಿದೆ. ಸಂವಿಧಾನದ ಪರಿಚ್ಛೇದ 14, 15ರಲ್ಲಿ ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದರೆ ಎಂದು ಹೇಳಲಾಗಿದೆ ಅಷ್ಟೇ.. ಆದರೆ, ಮೇಲ್ವರ್ಗದವರಲ್ಲೂ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿ ಕಲ್ಪಿಸಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ಬಗ್ಗೆ ಸಂವಿಧಾನದಲ್ಲಿ ಹೇಳಿಲ್ಲ.

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲೂ ಶೇ.50ಕ್ಕಿಂತ ಹೆಚ್ಚಿನ ಮೀಸಲಾತಿ ನೀಡಲು ಹೇಳಿದೆ. ವಾಲ್ಮೀಕಿ ಗುರುಪೀಠದ ಶ್ರೀಗಳು ಧರಣಿ ಕೈಬಿಡಲು ಮನವೊಲಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಆಗ ಶಾಸಕ ರಘುಮೂರ್ತಿ ಮಾತನಾಡಿ, ಶ್ರೀಗಳು 49 ದಿನಗಳಿಂದ ಅಹೋರಾತ್ರಿ ಧರಣಿ ಮಾಡುತ್ತಿದ್ದಾರೆ. ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಆಧರಿಸಿ ಸರ್ಕಾರ ಎಸ್​ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು.

ಬಿಜೆಪಿ ಶಾಸಕ ರಾಜುಗೌಡ ಮಾತನಾಡಿ, ಮುಖ್ಯಮಂತ್ರಿಗಳು ಧರಣಿ ನಿರತ ಸ್ವಾಮೀಜಿಗಳ ಮನವೊಲಿಸಿ ಧರಣಿ ಕೈಬಿಡುವಂತೆ ಮಾಡಬೇಕು. ಯಾವುದೇ ವರದಿಗೆ ಕಾಯ್ದೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿದರು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ಪೂರಕವಾಗಿ ಸ್ಪಂದಿಸಿದ್ದು, ಶ್ರೀಗಳು ಧರಣಿ ಕೈಬಿಡುವಂತೆ ಎಲ್ಲರೂ ಮನವಿ ಮಾಡಿಕೊಳ್ಳೊಣ ಎಂದರು.

ಓದಿ: RSS ವ್ಯಕ್ತಿ ದೇಶಕ್ಕಾಗಿ ಪ್ರತಿ ದಿನ ಚಿಂತನೆ ಮಾಡ್ತಾನೆ, ಮದುವೆಯಾಗದೆ ಚಾಪೆಯಲ್ಲಿ ಮಲಗ್ತಾನೆ.. ಅಡ್ಡಂಡ ಕಾರ್ಯಪ್ಪ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.