ETV Bharat / state

ಸಿಎಂ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ; ಗಣೇಶ ಹಬ್ಬದ ಆಚರಣೆ, ಶಾಲೆಗಳ ಆರಂಭ ಕುರಿತು ನಿರ್ಧಾರ? - Meeting on celebration of Ganesha festival

ರಾಜ್ಯದಲ್ಲಿ ಈಗಾಗಲೇ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳಲ್ಲಿ ಈವರೆಗೂ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ, ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಬೇಕು ಎನ್ನುವ ಚಿಂತನೆಯನ್ನು ಶಿಕ್ಷಣ ಇಲಾಖೆ ಮಾಡಿದೆ..

cm-basavaraja-bommai-conduct-a-meeting-about-ganesha-festival
ಸಿಎಂ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ
author img

By

Published : Aug 30, 2021, 5:15 PM IST

ಬೆಂಗಳೂರು : ಗಣೇಶ ಚತುರ್ಥಿ ಸಾರ್ವಜನಿಕ ಆಚರಣೆಗೆ ಅವಕಾಶ ನೀಡುವುದು ಹಾಗೂ ಪ್ರಾಥಮಿಕ ಶಾಲೆಗಳ ಆರಂಭ ಮಾಡುವ ಕುರಿತು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸುತ್ತಿದ್ದಾರೆ.

cm-basavaraja-bommai-conduct-a-meeting-about-ganesha-festival
ಸಿಎಂ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಪಾಸಿಟಿವಿಟಿ ದರ ಶೇ.1ಕ್ಕಿಂತ ಕಡಿಮೆಯಾಗಿದೆ.

ಆದರೂ ಗಡಿ ರಾಜ್ಯಗಳಾದ ಕೇರಳ, ಮಹಾರಾಷ್ಟ್ರ, ತಮಿಳುನಾಡಿನಲ್ಲಿ ಕೋವಿಡ್ ಹೆಚ್ಚಾಗುತ್ತಿರುವುದು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಇಂತಹ ಸಂದರ್ಭದಲ್ಲಿ ಗೌರಿ-ಗಣೇಶ ಹಬ್ಬದ ಸಾರ್ವಜನಿಕ ಆಚರಣೆಗೆ ಅವಕಾಶ ನೀಡಿದರೆ ಆಗುವ ಪರಿಣಾಮದ ಕುರಿತು ಚರ್ಚೆ ನಡೆಸಲಾಗುತ್ತಿದೆ.

ಹಿಂದೂಪರ ಸಂಘಟನೆಗಳು ಗಣೇಶ ಹಬ್ಬದ ಆಚರಣೆಗೆ ಒತ್ತಾಯ ಮಾಡುತ್ತಿವೆ. ರಾಜಕೀಯ ನಾಯಕರ ಮೂಲಕವೇ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿವೆ. ಈ ಹಿನ್ನೆಲೆ ಗಣೇಶ ಹಬ್ಬದ ಸಾರ್ವಜನಿಕ ಆಚರಣೆಗೆ ಅವಕಾಶ ನೀಡಬೇಕಾ? ಒಂದು ವೇಳೆ ಅವಕಾಶ ನೀಡಿದರೆ ಯಾವೆಲ್ಲಾ ಷರತ್ತು ಹಾಗೂ ನಿಯಮಾವಳಿ ರೂಪಿಸಬೇಕಾಗಲಿದೆ ಎನ್ನುವ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಗುತ್ತಿದೆ.

ಸಿಎಂ ಅಧ್ಯಕ್ಷತೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ ಆರಂಭ

ಕೋವಿಡ್ ಪ್ರಕರಣ ವರದಿಯಾಗಿಲ್ಲ : ರಾಜ್ಯದಲ್ಲಿ ಈಗಾಗಲೇ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶಾಲಾ-ಕಾಲೇಜುಗಳಲ್ಲಿ ಈವರೆಗೂ ಕೋವಿಡ್ ಪ್ರಕರಣ ವರದಿಯಾಗಿಲ್ಲ. ಹಾಗಾಗಿ, ಪ್ರಾಥಮಿಕ ಶಾಲೆಗಳನ್ನೂ ಆರಂಭಿಸಬೇಕು ಎನ್ನುವ ಚಿಂತನೆಯನ್ನು ಶಿಕ್ಷಣ ಇಲಾಖೆ ಮಾಡಿದೆ. ಈ ಸಂಬಂಧ ಇಂದಿನ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುತ್ತದೆ.

ಸಲಹಾ ಸಮಿತಿ ಸಭೆಯಲ್ಲಿ ಪ್ರಸ್ತಾಪ : 6 ರಿಂದ 8ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸುವುದು,‌ 5-8ರವರೆಗೆ ಆರಂಭ ಹಾಗೂ 1-8ರವರೆಗೆ ಶಾಲೆಗಳ ಆರಂಭ ಹೀಗೆ ಮೂರು ಮಾದರಿಯನ್ನು ಶಿಕ್ಷಣ ಇಲಾಖೆ ಸಿದ್ದಪಡಿಸಿಕೊಂಡಿದೆ. ಇದನ್ನು ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುತ್ತದೆ. ಸದ್ಯಕ್ಕೆ ಈಗಿರುವಂತೆ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೆ ಮುಂದುವರೆಸುವುದು ಅಥವಾ ಸಮಿತಿ ಶಿಫಾರಸು ಮಾಡಿದಲ್ಲಿ 1ನೇ ತರಗತಿ, 5ನೇ ತರಗತಿ ಅಥವಾ 6ನೇ ತರಗತಿಯಿಂದ ಶಾಲೆಗಳ ಆರಂಭಕ್ಕೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.

ಸಭೆಯಲ್ಲಿ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್, ಎಸ್ ಟಿ ಸೋಮಶೇಖರ, ಬಿ ಸಿ ನಾಗೇಶ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ತಜ್ಞ ವೈದರಾದ ಡಾ. ಸುದರ್ಶನ್ , ಡಾ. ಸಿ ಎನ್ ಮಂಜುನಾಥ, ಡಾ. ದೇವಿಶೆಟ್ಟಿ ಸೇರಿ ಇತರೆ ಅಧಿಕಾರಿಗಳು ಉಪಸ್ಥಿತರಿದ್ದಾರೆ.

ಓದಿ : SSLC ಪೂರಕ ಪರೀಕ್ಷೆ : ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕ ವಿಸ್ತರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.