ETV Bharat / state

ಎನ್​ಇಪಿ ಅಡಿ ವಿದ್ಯಾರ್ಥಿ ಕೇಂದ್ರಿತ ಬೋಧನಾ ಕ್ರಮ ರೂಪಿಸಲು ಮುಖ್ಯಮಂತ್ರಿ ಸಲಹೆ.. - Bommahai Advice for Student-Centered Teaching

ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂವಾದಕ್ಕೆ ಅವಕಾಶ ಕಲ್ಪಿಸಬೇಕು. ಕಲಿಕೆ ಸುಲಲಿತವಾಗಿ ಆಗಬೇಕು. ಮಕ್ಕಳು ಆಟವಾಡುತ್ತ ಕಲಿಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳ ಗ್ರಹಣ ಶಕ್ತಿ ಅತಿ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ನಾವು ಅವರ ಮೇಲೆ ಮಾಹಿತಿಯ ಹೊರೆ ಹೊರಿಸದೆ ಉತ್ತಮ ಆಲೋಚನಾ ವಿಧಾನವನ್ನು ಕಲಿಸಿ ಕೊಡಬೇಕು..

cm-basavaraja-bommai-conduct-nep-meeting-in-bengalore
ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ರೂಪಿಸಲಾದ ಕಾರ್ಯಪಡೆಯ ಸಭೆ
author img

By

Published : Sep 28, 2021, 9:13 PM IST

ಬೆಂಗಳೂರು : ರಾಷ್ಟ್ರೀಯ ಶಿಕ್ಷಣ ನೀತಿಯಡಿ ರೂಪಿಸಲಾಗುವ ಪಠ್ಯಕ್ರಮ, ಬೋಧನಾ ವಿಧಾನಗಳನ್ನು ವಿದ್ಯಾರ್ಥಿ ಕೇಂದ್ರಿತವಾಗಿ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿಕ್ಷಣ ಇಲಾಖೆಗೆ ಸಲಹೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಂತದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ರೂಪಿಸಲಾದ ಕಾರ್ಯಪಡೆಯ ಸಭೆ ನಡೆಸಿ, ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಮುಗ್ಧತೆ ಮತ್ತು ಕುತೂಹಲಗಳೆಂಬ ಪರಸ್ಪರ ವಿರುದ್ಧ ಗುಣಗಳನ್ನು ಮಕ್ಕಳು ಹೊಂದಿರುತ್ತಾರೆ. ಇದು ಪ್ರಾಯಕ್ಕೆ ಬರುವವರೆಗೂ ಮಕ್ಕಳಲ್ಲಿ ಇರುತ್ತದೆ. ಇದಕ್ಕೆ ಪೂರಕವಾದ ಶಿಕ್ಷಣ ವ್ಯವಸ್ಥೆ ರೂಪಿಸಬೇಕು ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯ ಮೂಲಕ ನಮಗೆ ಶಿಕ್ಷಣದ ಬಗ್ಗೆ, ಮಕ್ಕಳ ಬಗ್ಗೆ ಚಿಂತನೆ ನಡೆಸಲು ಅವಕಾಶ ದೊರೆತಿದೆ. ಇದರಡಿ ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು. ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಕರ್ನಾಟಕದ ಭವಿಷ್ಯವನ್ನು ಬರೆಯುತ್ತಿವೆ ಎಂಬುದನ್ನು ಮನದಟ್ಟು ಮಾಡಿಕೊಂಡು ಕಾರ್ಯನಿರ್ವಹಿಸುವಂತೆ ಅವರು ಸಲಹೆ ನೀಡಿದರು.

ನೂತನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳಿಗೆ ಸಂವಾದಕ್ಕೆ ಅವಕಾಶ ಕಲ್ಪಿಸಬೇಕು. ಕಲಿಕೆ ಸುಲಲಿತವಾಗಿ ಆಗಬೇಕು. ಮಕ್ಕಳು ಆಟವಾಡುತ್ತ ಕಲಿಯಬೇಕು. ಎಳೆಯ ವಯಸ್ಸಿನಲ್ಲಿ ಮಕ್ಕಳ ಗ್ರಹಣ ಶಕ್ತಿ ಅತಿ ಹೆಚ್ಚಾಗಿರುತ್ತದೆ. ಈ ಅವಧಿಯಲ್ಲಿ ನಾವು ಅವರ ಮೇಲೆ ಮಾಹಿತಿಯ ಹೊರೆ ಹೊರಿಸದೆ ಉತ್ತಮ ಆಲೋಚನಾ ವಿಧಾನವನ್ನು ಕಲಿಸಿ ಕೊಡಬೇಕು ಎಂದು ತಿಳಿಸಿದರು.

ವಿವಿಧ ವಯೋಮಾನದಲ್ಲಿ ಮಕ್ಕಳ ಕಲಿಕೆಯ ಮಟ್ಟ ನಿಗದಿಪಡಿಸುವ ಕುರಿತು ಮತ್ತು ಬೋಧನಾ ವಿಧಾನಗಳ ಕುರಿತು ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಜೊತೆಗೆ 8ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ವಿವಿಧ ವೃತ್ತಿಗಳಿಗೆ ಸಿದ್ಧತೆ ಕುರಿತು ಮಾರ್ಗದರ್ಶ ನೀಡಬೇಕು. ಈ ನೀತಿಯಡಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶಗಳನ್ನು ವಿಶೇಷ ಶೈಕ್ಷಣಿಕ ವಲಯ ಎಂದು ಗುರುತಿಸಿ, ಸುಧಾರಣಾ ಕ್ರಮಗಳನ್ನು ಕೈಗೊಳ್ಳುವ ಪ್ರಕ್ರಿಯೆಯನ್ನು ಶೀಘ್ರವೇ ಪ್ರಾರಂಭಿಸಬೇಕು ಎಂದು ಸಲಹೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರೂ ಸಹ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸುವಂತಾಗಬೇಕು ಹಾಗೂ ಶಿಕ್ಷಕರ ಮೌಲ್ಯಮಾಪನಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವ ಬಿ ಸಿ ನಾಗೇಶ್ ಅವರು, ರಾಜ್ಯದ ಶಿಕ್ಷಣ ವ್ಯವಸ್ಥೆ ಇತರ ರಾಜ್ಯಗಳಿಗೆ ಹೋಲಿಸಿದರೆ, ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳಿಗೆ ಸಮೀಪದಲ್ಲಿದೆ.

ಇವೆರಡರ ನಡುವಿನ ಅಂತರ ನಿವಾರಿಸುವ ಮೂಲಕ ಹೊಸ ನೀತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ ಕುರಿತ ಕಾರ್ಯಪಡೆಯ ಅಧ್ಯಕ್ಷ ಮದನಗೋಪಾಲ್, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪೂರ ಮತ್ತಿತರರು ಭಾಗವಹಿಸಿದ್ದರು.

ಓದಿ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕಾನೂನು ಕೋಶ ಬಲಿಷ್ಠಗೊಳಿಸಲು ಸಿಎಂ ಸೂಚನೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.