ETV Bharat / state

ಅಜ್ಞಾತ ಸ್ಥಳದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ

author img

By

Published : Jan 30, 2023, 7:40 PM IST

ಅಜ್ಞಾತ ಸ್ಥಳದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ- ಮೂರು ಗಂಟೆಗಳ ಕಾಲ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಚರ್ಚೆ- ಯೋಜನೆಗಳ ಕುರಿತು ಮಾಹಿತಿ ಪಡೆದು ಸಿದ್ಧತೆ

ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಾಮಾನ್ಯವಾಗಿ ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆಗಳು ನಡೆಯುತ್ತವೆ. ಆದರೆ, ಇಂದು ಮಾತ್ರ ಅಜ್ಞಾತ ಸ್ಥಳದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಪೂರ್ವಭಾವಿ ಸಭೆ ನಡೆಸಿ ಅಚ್ಚರಿ ಮೂಡಿಸಿದರು. ಫೆಬ್ರವರಿ 17 ರಂದು ರಾಜ್ಯ ಮುಂಗಡ ಬಜೆಟ್ ಮಂಡನೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ 2023-24 ನೇ ಸಾಲಿನ ಆಯ-ವ್ಯಯ ಮಂಡನೆ ಮಾಡಲಿದ್ದಾರೆ. ಈಗಾಗಲೇ ಬಜೆಟ್ ಸಿದ್ದತಾ ಸಭೆಗಳನ್ನು ಆರಂಭಿಸಿರುವ ಮುಖ್ಯಮಂತ್ರಿಗಳು ಶಕ್ತಿ ಭವನದಲ್ಲಿ ಇಲಾಖಾವಾರು ಬೇಡಿಕೆ, ಯೋಜನೆಗಳ ಕುರಿತು ಮಾಹಿತಿ ಪಡೆದು ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದಾರೆ.

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದ ಬಳಿಕ ಬಜೆಟ್ ಪೂರ್ವಭಾವಿ ಸಭೆಗೆ ಸಮಯ ಕಾಯ್ದಿರಿಸಲಾಗಿತ್ತು. ಅದರಂತೆ ಶಕ್ತಿಭವನದಲ್ಲಿ ಸಭೆ ನಡೆಯಬೇಕಿತ್ತು. ಆದರೆ ಮುಖ್ಯಮಂತ್ರಿಗಳು ವಿಧಾನಸೌಧದಿಂದ ಶಕ್ತಿಸೌಧಕ್ಕೆ ಆಗಮಿಸುವ ಬದಲು ಅಜ್ಞಾತ ಸ್ಥಳಕ್ಕೆ ತೆರಳಿದರು. ಅಜ್ಞಾತ ಸ್ಥಳದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೂ ಮೂರು ಗಂಟೆಗಳ ಕಾಲ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಅಜ್ಞಾತ ಸ್ಥಳದಲ್ಲಿ ಸಭೆ ನಡೆಸುವ ಉದ್ದೇಶ ಇದ್ದ ಕಾರಣದಿಂದಾಗಿಯೇ ಬಜೆಟ್ ಪೂರ್ವಭಾವಿ ಸಭೆಯ ಸ್ಥಳವನ್ನು ಖಾಲಿ ಬಿಡಲಾಗಿತ್ತು. ಅದರಂತೆ ಅಜ್ಞಾತ ಸ್ಥಳದಲ್ಲಿ ಸಭೆಗೆ ಸಿದ್ಧತೆ ಮೊದಲೇ ಮಾಡಿಕೊಂಡು ಅಲ್ಲಿ ಸಭೆ ನಡೆಸಲಾಯಿತು ಎನ್ನಲಾಗ್ತಿದೆ.

ಸರ್ಕಾರಿ ಕಾರ್ಯಕ್ರಮಗಳು, ಪಕ್ಷದ ಕಾರ್ಯಕ್ರಮಗಳಲ್ಲಿ ಬಿಡುವಿಲ್ಲದಂತೆ ಭಾಗಿಯಾಗುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಪೂರ್ವ ಸಿದ್ದತೆ ಸಭೆಯನ್ನೂ ನಡೆಸಬೇಕಿದೆ. ಸತತವಾಗಿ ಕೇಂದ್ರದ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವುದೂ ಬಜೆಟ್ ಸಿದ್ಧತೆಗೆ ಹೆಚ್ಚಿನ ಸಮಯ ಸಿಗದಂತಾಗಿದೆ. ಹಾಗಾಗಿ ಸಮಯದ ಅಭಾವದ ಕಾರಣದಿಂದಾಗಿ ಸಭೆಗಳು ನಡೆಯುವಾಗ ಗಣ್ಯರು ಭೇಟಿಗೆ ಆಗಮಿಸಿ ಸಮಯ ವ್ಯಯವಾಗುವುದನ್ನು ತಪ್ಪಿಸಲು ಸಿಎಂ ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಿದರು ಎಂದು ಹೇಳಲಾಗ್ತಿದೆ.

ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಲ್ಲಿ ಕಮಲ ಅರಳಲಿದೆ: ಸಿಎಂ ಬೊಮ್ಮಾಯಿ

ಮೈತ್ರಿ ಸರ್ಕಾರ ಪತನಗೊಂಡು ಹೆಚ್. ಡಿ ಕುಮಾರಸ್ವಾಮಿ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಸರ್ಕಾರ ರಚನೆಯಾಗಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರು. ನಂತರ ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದರು. 2021 ರ ಜೂನ್ ನಲ್ಲಿ ಅಧಿಕಾರಕ್ಕೆ ಬಂದ ಬೊಮ್ಮಾಯಿ 2022 ರಲ್ಲಿ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದರು. ಇದೀಗ ಎರಡನೇ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಯಾರಿ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್​​ನವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ: ಬಿ.ಎಸ್.ಯಡಿಯೂರಪ್ಪ

ಚುನಾವಣಾ ವರ್ಷವಾಗಿರುವ ಹಿನ್ನೆಲೆಯಲ್ಲಿ ಜನಪ್ರಿಯ ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದ್ದು, ಪಕ್ಷಕ್ಕೆ ಲಾಭದಾಯಕವಾಗುವ ರೀತಿ ಬಜೆಟ್ ಮಂಡಿಸಲು ಸಿಎಂ ಬಸವರಾಜ ಬೊಮ್ಮಾಯಿ ಸಿದ್ಧತೆ ನಡೆಸುತ್ತಿದ್ದಾರೆ. ಈ ಹಿಂದಿನ ಯೋಜನೆಗಳನ್ನು ಮುಂದುವರೆಸಿಕೊಂಡು, ಹೊಸ ಯೋಜನೆಗಳನ್ನೂ ಘೋಷಿಸಿಕೊಂಡು, ಯಾವ ಸಮುದಾಯದ ಅಸಮಾಧಾನವನ್ನೂ ಕಟ್ಟಿಕೊಳ್ಳದಂತೆ ಜಾಣ ನಡೆಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ : ಕೇಂದ್ರ ಬಜೆಟ್ ಮೇಲೆ ಹತ್ತು ಹಲವು ನಿರೀಕ್ಷೆ ; ಚುನಾವಣಾ ಹೊಸ್ತಿಲಲ್ಲಿರುವ ರಾಜ್ಯಕ್ಕೆ ಸಿಗುತ್ತಾ ಭರಪೂರ ಕೊಡುಗೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.