ETV Bharat / state

ಪ್ರೌಢಶಾಲೆ ಹಂತದಲ್ಲೇ ‘Technology School': ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - Atal Bihari Vajpayee Tinkering Lab

ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ ಬೆಳವಣಿಗೆಗೆ ತಕ್ಷಣದಿಂದಲೇ ಆದ್ಯತೆಯ ಮೇಲೆ ಕ್ರಮ ವಹಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

cm-basavaraja-bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Oct 5, 2021, 5:54 PM IST

ಬೆಂಗಳೂರು: ವಿದ್ಯಾರ್ಥಿಗಳಿಗೆ ಪ್ರೌಢಶಾಲಾ ಹಂತದಿಂದಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ನೀಡಬೇಕು. ಇದಕ್ಕಾಗಿ ತಾಂತ್ರಿಕ ಶಿಕ್ಷಣ ಆಧಾರಿತ ಶಾಲೆಗಳನ್ನು (Technology School) ಆರಂಭಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ವತಿಯಿಂದ ಹುಬ್ಬಳ್ಳಿಯಲ್ಲಿ ಆಯೋಜಿಸಿದ್ದ 'ನಾವಿನ್ಯತಾ ಮತ್ತು ಪರಿಣಾಮ' (Innovation And Impact) ಕುರಿತ ಕಾರ್ಯಕ್ರಮವನ್ನು ವಿಧಾನಸೌಧದಲ್ಲಿ ಇಂದು ವರ್ಚುವಲ್ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹುಬ್ಬಳ್ಳಿ ವಲಯದಲ್ಲಿ ಹೊಸ ತಾಂತ್ರಿಕತೆಯ ಉದ್ಯಮದ ಬೆಳವಣಿಗೆಗೆ ತಕ್ಷಣದಿಂದಲೇ ಆದ್ಯತೆಯ ಮೇಲೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು

1960ರಷ್ಟು ಹಿಂದೆಯೇ ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಟೆಕ್ನಾಲಜಿ ಹೈಸ್ಕೂಲ್ ಇತ್ತು. ಆದರೆ, ನಂತರದಲ್ಲಿ ಅದನ್ನು ಮುಚ್ಚಲಾಯಿತು. ಮಕ್ಕಳಲ್ಲಿ ಗ್ರಹಿಕೆ ಶಕ್ತಿ ಹೆಚ್ಚಾಗಿರುವುದರಿಂದ ಹೈಸ್ಕೂಲ್ ಮಟ್ಟದಲ್ಲೇ ತಾಂತ್ರಿಕ ಶಿಕ್ಷಣಕ್ಕೆ ಒತ್ತು ಕೊಡುವುದು ಮುಖ್ಯ. ಹೀಗಾಗಿ, ಕೆಲವು ಪ್ರೌಢಶಾಲಾ ಹಂತದಲ್ಲಿ ಪ್ರತ್ಯೇಕ ಟೆಕ್ನಾಲಜಿ ಸ್ಕೂಲ್​ಗಳನ್ನು ಆರಂಭಿಸುವುದು ಸೂಕ್ತ ಎಂದರು.

ಅಟಲ್ ಬಿಹಾರಿ ವಾಜಪೇಯಿ ಟಿಂಕರಿಂಗ್ ಲ್ಯಾಬ್​ಗಳನ್ನು ಮೇಲ್ದರ್ಜೆಗೇರಿಸಿ ಆ ಹಂತದಲ್ಲಿ ಸ್ವಲ್ಪ ಮಟ್ಟಿಗಾದರೂ ಕೃತಕ ಬುದ್ಧಿಮತ್ತೆಯನ್ನು (ಎಐ) ಅಳವಡಿಸುವ ಅಗತ್ಯವಿದೆ. 150 ಐಟಿಐ ಕಾಲೇಜುಗಳನ್ನು ಉನ್ನತ ದರ್ಜೆಗೇರಿಸಿರುವಂತೆಯೇ ಪಾಲಿಟೆಕ್ನಿಕ್ ಕಾಲೇಜುಗಳನ್ನೂ ಉನ್ನತ ದರ್ಜೆಗೇರಿಸಬೇಕು ಎಂದು ಸಲಹೆ ನೀಡಿದರು.

ಹುಬ್ಬಳ್ಳಿಯಿಂದ ವರ್ಚುವಲ್ ಕಾರ್ಯಕ್ರಮದಲ್ಲಿ ಹಾಜರಿದ್ದ ಐಟಿ/ಬಿಟಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್ ಅಶ್ವತ್ಥ್​​ ನಾರಾಯಣ ಮಾತನಾಡಿ, ಎ. ಐ (ಕೃತಕ ಬುದ್ಧಿಮತ್ತೆ) ಮತ್ತು ಡೇಟಾ ಇಂಜಿನಿಯರಿಂಗ್​ಗೆ ಸಂಬಂಧಿಸಿದ ಉತ್ಕೃಷ್ಠತಾ ಕೇಂದ್ರವನ್ನು (ಸೆಂಟರ್ ಆಫ್ ಎಕ್ಸಲೆನ್ಸ್) ಹುಬ್ಬಳ್ಳಿಯಲ್ಲಿ ಶೀಘ್ರವೇ ಸ್ಥಾಪಿಸಲಾಗುವುದು ಎಂದು ಹೇಳಿದರು.

ಹೊಸ ತಾಂತ್ರಿಕ ಬೆಳವಣಿಗೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್.ಇ.ಪಿ-2020) ಆಶಯವಾಗಿದೆ. ಆ ಪ್ರಕಾರವಾಗಿ, ಶಾಲಾ ಮಟ್ಟದಲ್ಲಿ ಮುಂದಿನ ವರ್ಷದಿಂದಲೇ ಮಕ್ಕಳಿಗೆ ಕೋಡಿಂಗ್ ಕಲಿಕೆಯನ್ನು ಪಠ್ಯಕ್ರಮದ ಭಾಗವನ್ನಾಗಿ ಮಾಡಲಾಗುತ್ತದೆ ಎಂದು ಸಿಎಂ ಹೇಳಿದ್ರು.

ನಾವೀನ್ಯತಾ ತಂತ್ರಜ್ಞಾನಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಪರಿಣಾಮಕಾರಿ ಕಾರ್ಯನೀತಿಗಳನ್ನು ಸರ್ಕಾರ ಜಾರಿಗೊಳಿಸಿದೆ. ವಿದ್ಯಾರ್ಥಿಗಳ ಇಂಟರ್ನ್​ಶಿಪ್​ ಅವಧಿ 3 ವಾರಗಳಷ್ಟು ಇದ್ದದ್ದನ್ನು ಈಗ 30 ವಾರಗಳಿಗೆ ಹೆಚ್ಚಿಸಲಾಗಿದೆ. ಇಂಟರ್ನ್ ಷಿಪ್​ಗಾಗಿ ವಿದೇಶಗಳಿಗೆ ಹೋಗುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮಾಜಿ ಸಚಿವ ಜಗದೀಶ್ ಶೆಟ್ಟರ್, ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ್, ರಾಜ್ಯ ನವೋದ್ಯಮ ದೂರದರ್ಶಿತ್ವ ಮಂಡಳಿ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಅಧ್ಯಕ್ಷ ಬಿ. ವಿ ನಾಯ್ಡ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ ಭಾಗವಹಿಸಿದ್ದರು.

ಓದಿ: ಸಾರಿಗೆ ನೌಕರರ ವೇತನ ವಿಳಂಬ: ಸರ್ಕಾರವನ್ನ ತರಾಟೆಗೆ ತೆಗೆದುಕೊಂಡ ಹೆಚ್​​ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.