ETV Bharat / state

ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ ಜಾರಿ: ಸಿಎಂ - ಜಿಲ್ಲಾ ಪಂಚಾಯಿತಿ ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ ಜಾರಿ

ಜನೋಪಯೋಗಿ ಸರ್ಕಾರ ಆಗಬೇಕಾದರೆ ಜಿಲ್ಲಾ ಪಂಚಾಯಿತಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಸಿಇಒಗಳ ಸಮ್ಮೇಳನದಲ್ಲಿ ಸಿಎಂ ಹೇಳಿದರು.

CM Basavaraja Bommai
CM Basavaraja Bommai
author img

By

Published : Dec 30, 2021, 3:02 PM IST

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯಿತಿ ಸಿಇಒಗಳ ಕಾರ್ಯನಿರ್ವಹಣೆಗೆ ಜಿಲ್ಲಾವಾರು ಶ್ರೇಯಾಂಕ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಪಂಚಾಯಿತಿ ಸಿಇಒಗಳ ಸಮ್ಮೇಳನದಲ್ಲಿ ಮಾತನಾಡಿ, ಜನೋಪಯೋಗಿ ಸರ್ಕಾರ ಆಗಬೇಕಾದರೆ ಜಿಲ್ಲಾ ಪಂಚಾಯಿತಿಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದು ಅತಿ ಮುಖ್ಯ. ನಿಮ್ಮ ಜಿಲ್ಲೆಯಲ್ಲಿ ಅತ್ಯುತ್ತಮ ಕಾರ್ಯಶೈಲಿಯಿಂದ ನಿಮ್ಮದೇ ಛಾಪು ಮೂಡಿಸಿ. ತಳಹಂತದಲ್ಲಿ ಯೋಜನೆಗಳ ಅನುಷ್ಠಾನ ಅತಿ ಮುಖ್ಯ ಎಂದು ಕರೆಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕೆಂಬ ಅಭಿಪ್ರಾಯ ಜನರಿಂದ ವ್ಯಕ್ತವಾಗಿದೆ: ಸಿದ್ದರಾಮಯ್ಯ

ಅಧಿಕಾರ ವಿಕೇಂದ್ರೀಕರಣ ಮೂಲಕ ನಿಮಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ನಿಮ್ಮ ವಿವೇಚನಾಧಿಕಾರವನ್ನು ಜನರ ಹಿತಕ್ಕಾಗಿ ಬಳಕೆ ಮಾಡಿ. ಬಡವರ ಅನುಕೂಲಕ್ಕಾಗಿ ಅಧಿಕಾರಿಗಳು ಕೈಗೊಳ್ಳುವ ತೀರ್ಮಾನಗಳಿಗೆ ಸರ್ಕಾರದ ಸಂಪೂರ್ಣ ಬೆಂಬಲ ಇರುತ್ತದೆ. ಅಧಿಕಾರಿಗಳು ಸ್ಪಷ್ಟ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಅನಿಶ್ಚಿತತೆ ಪ್ಲೇಗ್ ರೋಗ ಇದ್ದಂತೆ. ವಿಳಂಬ ಧೋರಣೆ ಅತ್ಯಂತ ದುಬಾರಿ. ತಳಹಂತದ ಅಧಿಕಾರಿ, ಸಿಬ್ಬಂದಿ ಮೇಲೆ ಹತೋಟಿ ಇಟ್ಟುಕೊಳ್ಳಿ. ಕಾಲ ಕಾಲಕ್ಕೆ ಪ್ರಗತಿ ಪರಿಶೀಲನೆ ಮಾಡಿ ಎಂದು ಸಿಇಒ ಗಳಿಗೆ ತಾಕೀತು ಮಾಡಿದ ಅವರು, ಹಳ್ಳಿಗಳಿಗೆ ನಿಯಮಿತವಾಗಿ ಭೇಟಿ ನೀಡಬೇಕು. ಸಮರ್ಪಕವಾಗಿ ಕೆಲಸ ನಿರ್ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೇ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ನೀಡಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.