ETV Bharat / state

ಕಲ್ಯಾಣ ಕರ್ನಾಟಕಕ್ಕೆ 5030 ಕೋಟಿ ರೂ. ಅನುದಾನ ನೀಡಿ : ನಿರ್ಮಲಾ ಸೀತಾರಾಮನ್​ಗೆ ಸಿಎಂ ಮನವಿ

2022ರ ಮಾರ್ಚ್​ಗೆ ಜಿಎಸ್‌ಟಿ ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ, ಕೋವಿಡ್-19ನಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು..

cm-basavaraja-bommai and Nirmala sitharaman
ನಿರ್ಮಲಾ ಸೀತಾರಾಮನ್ ಹಾಗು ಸಿಎಂ
author img

By

Published : Feb 7, 2022, 8:19 PM IST

ನವದೆಹಲಿ/ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು.

ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ. 371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದೆ.

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ, ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಜಿಎಸ್‌ಟಿ ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ : ರಾಜ್ಯಗಳಿಗೆ ಕೇಂದ್ರ ಸರ್ಕಾರ ನೀಡುವ ಜಿಎಸ್​ಟಿ ಪರಿಹಾರವನ್ನು 2024-25ರ ವರೆಗೆ ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

2022ರ ಮಾರ್ಚ್​ಗೆ ಜಿಎಸ್‌ಟಿ ಪರಿಹಾರದ ಅವಧಿ ಮುಕ್ತಾಯಗೊಳ್ಳಲಿದೆ. ಆದರೆ, ಕೋವಿಡ್-19ನಿಂದಾಗಿ ರಾಜ್ಯ ಸರ್ಕಾರಗಳು ಸಂಪನ್ಮೂಲ ಕ್ರೋಢೀಕರಿಸಲು ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರವು ಜಿಎಸ್‌ಟಿ ಪರಿಹಾರದ ಅವಧಿ ವಿಸ್ತರಿಸುವ ಮೂಲಕ ರಾಜ್ಯ ಸರ್ಕಾರಗಳ ಸಂಕಷ್ಟ ಬಗೆಹರಿಸುವಂತೆ ಮನವಿ ಮಾಡಿದರು.

ಕಳೆದ ಎರಡು ವರ್ಷಗಳಲ್ಲಿ ಸಾಲದ ಮೂಲಕ ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರ ಒದಗಿಸಿದಂತೆ, ಮುಂದಿನ ಮೂರು ವರ್ಷಗಳೂ ಇದೇ ಕ್ರಮ ಅನುಸರಿಸುವಂತೆ ಹಾಗೂ ಜಿಎಸ್‌ಟಿ ಸೆಸ್ ಸಂಗ್ರಹದಿಂದ ಈ ಸಾಲ ಮರುಪಾವತಿ ಮಾಡಬಹುದು ಎಂದು ಮುಖ್ಯಮಂತ್ರಿಗಳು ಪ್ರಸ್ತಾಪಿಸಿದ್ದಾರೆ.

ಓದಿ: ಪ್ರತಿಪಕ್ಷದವರು ಮಕ್ಕಳಲ್ಲಿ ವಿಷದಬೀಜ ಬಿತ್ತುವ ಕಾರ್ಯ ಮಾಡುತ್ತಿದ್ದಾರೆ: ಸಚಿವ ಬಿ.ಸಿ.ಪಾಟೀಲ್

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.