ETV Bharat / state

ಯಾಕೆ ಈ ಮೀಟಿಂಗ್​.. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಸರಣಿ ಸಭೆ..! - ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ

ಸಿಎಂ ಬಸವರಾಜ್​ ಬೊಮ್ಮಾಯಿ ಸರಣಿ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ‌.

cm-basavaraja-bommai-series-meeting-in-home-office-krishna
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಸರಣಿ ಸಭೆ
author img

By

Published : Jul 5, 2022, 7:30 PM IST

ಬೆಂಗಳೂರು: ಹೈದರಾಬಾದ್​ನಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಿಂದ ವಾಪಸ್​ ಆಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಫುಲ್ ಆಕ್ಟೀವ್ ಆಗಿದ್ದು, ಸರಣಿ ಸಭೆಗಳನ್ನು ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ್ದಾರೆ‌.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಹೊಸ ಉದ್ಯೋಗ ನೀತಿ ಕುರಿತ ಸಭೆ ನಡೆಯಿತು. ಸಭೆಯಲ್ಲಿ ಐಟಿ, ಬಿಟಿ, ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಎಸ್.ಶ್ರೀಕರ, ಹಿರಿಯ ಅಧಿಕಾರಿ ಸೆಲ್ವ ಕುಮಾರ್ ಮತ್ತು ಇತರರು ಉಪಸ್ಥಿತರಿದ್ದರು.

ನಂತರ ಪೆಟ್ರೋನಾಸ್ ಹೈಡ್ರೋಜನ್ ಕಂಪೆನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು. ಜೊತೆಗೆ ಕಾಂಟಿನೆಂಟಲ್ ಆಟೋಮೋಟಿವ್ಸ್ ಇಂಡಿಯಾ ಪ್ರೈ.ಲಿ.ಕಂಪನಿಯು ರಾಜ್ಯದಲ್ಲಿ ಹೂಡಿಕೆ ಮಾಡಲು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತು.

ಅಲ್ಲದೇ, ಸಂಶೋಧನೆ ಮತ್ತು ಅಭಿವೃದ್ಧಿ ನೀತಿ ಕುರಿತು ಸಿಎಂ ಬೊಮ್ಮಾಯಿ ಪ್ರೊ.ಅಶೋಕ ಶೆಟ್ಟರ್ ನೇತೃತ್ವದ ಟಾಸ್ಕ್ ಫೋರ್ಸ್ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಇದೇ ವೇಳೆ ಕೇಂದ್ರ ಸರ್ಕಾರದ ಕೈಗಾರಿಕೆ ಮತ್ತು ವ್ಯಾಪಾರ ಉತ್ತೇಜನ ಇಲಾಖೆಯು ಬಿಡುಗಡೆ ಮಾಡಿರುವ ಸ್ಟಾರ್ಟಪ್ ರ‍್ಯಾಂಕಿಂಗ್​ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗ ಪ್ರಮಾಣಪತ್ರವನ್ನು ಬೊಮ್ಮಾಯಿ ಅವರಿಗೆ ಸಚಿವ ಡಾ.ಅಶ್ವತ್ಥನಾರಾಯಣ ಹಸ್ತಾಂತರಿಸಿದರು.

ರಾಜ್ಯ ಸಾರಿಗೆ ಸಂಸ್ಥೆಗಳ ಸುಸ್ಥಿರ ಕಾರ್ಯ ನಿರ್ವಹಣೆಯ ಕುರಿತು ಅಧ್ಯಯನ ನಡೆಸಲು ರಚಿಸಲಾಗಿದ್ದ ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್.ಶ್ರೀನಿವಾಸಮೂರ್ತಿ ಅಧ್ಯಕ್ಷತೆಯ ಏಕ ಸದಸ್ಯ ಸಮಿತಿ ಹಾಗೂ ಸರ್ಕಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ಅಂಶಗಳ ಕುರಿತು ಚರ್ಚಿಸಿದರು.

ಇದನ್ನೂ ಓದಿ: ಠಾಣೆಯಲ್ಲಿ ಲಂಚ ಪಡೆಯುವಾಗ ಎಸಿಬಿ ದಾಳಿ: ಬಲೆಗೆ ಬಿದ್ದ ಪಿಎಸ್​ಐ, ಹೆಡ್ ಕಾನ್ಸ್​ಟೇಬಲ್​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.