ETV Bharat / state

ಬಜೆಟ್​ನಲ್ಲಿ ಶ್ವಾನ ಪ್ರೀತಿ ಪ್ರದರ್ಶಿಸಿದ ಸಿಎಂ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ತಮ್ಮ ಪ್ರೀತಿಪಾತ್ರ ಪ್ರಾಣಿ ಶ್ವಾನ ಕುರಿತು ವಾತ್ಸಲ್ಯ ತೋರಿದ್ದಾರೆ.

author img

By

Published : Feb 18, 2023, 8:32 AM IST

ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಶ್ವಾನ ಪ್ರೀತಿಯನ್ನು ಪ್ರದರ್ಶಿಸಿದ್ದಾರೆ. ಶ್ವಾನಗಳ ಪೋಷಣೆಗಾಗಿ ವಿಶೇಷ ಕಾರ್ಯಕ್ರಮ ಘೋಷಿಸಿದ್ದಾರೆ.‌ ಸಿಎಂ ಬಸವರಾಜ್ ಬೊಮ್ಮಾಯಿ‌ ತಮ್ಮ ಅಧಿಕಾರಾವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ.‌ ದುಡಿಯುವ ವರ್ಗಗಳಿಗೆ ಹಲವು ಕಾರ್ಯಕ್ರಮಗಳನ್ನು ಘೋಷಿಸಿದ್ದಾರೆ. ಸಿಎಂ ಬೊಮ್ಮಾಯಿ‌ ಮಂಡಿಸಿರುವ ತಮ್ಮ ಎರಡನೇ ಬಜೆಟ್​ನಲ್ಲಿ ಅದೊಂದು ವಿಶೇಷ ಕಾಳಜಿ ವಹಿಸಿದ್ದಾರೆ. ಬಜೆಟ್​​ನಲ್ಲೇ ಅದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಿದ್ದಾರೆ.

ಹೌದು, ಅಷ್ಟಕ್ಕೂ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ತಮ್ಮ ಪ್ರೀತಿಪಾತ್ರ ಪ್ರಾಣಿ ಶ್ವಾನ ಕುರಿತು ವಾತ್ಸಲ್ಯ ತೋರಿದ್ದಾರೆ. ಶ್ವಾನದ ಬಗ್ಗೆ ಸಿಎಂ ಬೊಮ್ಮಾಯಿಗಿರುವ ಅಕ್ಕರೆ ಗೊತ್ತೇ ಇದೆ. ತಮ್ಮ ಮನೆಯಲ್ಲೇ ಸಾಕು ಶ್ವಾನ‌ ಸತ್ತಾಗ ಕಣ್ಣೀರು ಹಾಕಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದು ಸಿಎಂ ಬೊಮ್ಮಾಯಿ‌ ಎಷ್ಟರ ಮಟ್ಟಿಗೆ ಶ್ವಾನಪ್ರಿಯರು ಎಂಬುದು ಸ್ಪಷ್ಟವಾಗುತ್ತದೆ.‌ ಅದಕ್ಕಾಗಿಯೇ ತಮ್ಮ ಬಜೆಟ್​ನಲ್ಲಿ ಶ್ವಾನಕ್ಕಾಗಿ ವಿಶೇಷ ಯೋಜನೆ ರೂಪಿಸಿದ್ದಾರೆ.

ಬಜೆಟ್​ನಲ್ಲಿ ಸಿಎಂ ಶ್ವಾನ ಪ್ರೀತಿ : ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಶ್ವಾನದ ಪೋಷಣೆಗಾಗಿ ವಿಶೇಷ ಕಾರ್ಯಕ್ರಮ ಘೋಷಿಸಿದ್ದಾರೆ. ಬೀದಿನಾಯಿಗಳ ಆರೈಕೆ ಮತ್ತು ಪೋಷಣೆಗಾಗಿ ಸಾರ್ವಜನಿಕರು ದತ್ತು ತೆಗೆದುಕೊಳ್ಳಲು ಒಂದು ಆನ್-ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ನಿರ್ಧರಿಸಿದ್ದಾರೆ.

ಆ ಮೂಲಕ ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ದತ್ತು ಪಡೆಯಲು ಅವಕಾಶ ಕಲ್ಪಿಸಲು ಯೋಜನೆ ರೂಪಿಸಿದ್ದಾರೆ. ಬೀದಿ ನಾಯಿಗಳನ್ನು ದತ್ತು ಪಡೆಯುವ ಕಾರ್ಯಕ್ರಮವನ್ನು ಘೋಷಿಸಿದ್ದಾರೆ. ಆಸಕ್ತ ಶ್ವಾನ ಪ್ರೇಮಿಗಳು ತಮ್ಮ ಹೆಸರು ಈ ಪೋರ್ಟಲ್‌ನಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ. ಆ ಮೂಲಕ ಶ್ವಾನಗಳನ್ನು ದತ್ತು ಪಡೆಯಲು ಅವಕಾಶ ಕಲ್ಪಿಸಿ ಕೊಡುವುದಾಗಿ ತಿಳಿಸಿದ್ದಾರೆ. ಬೀದಿ ನಾಯಿಗಳ ಕಷ್ಟ, ನರಕಯಾತನೆ ಮನಗಂಡು ಶ್ವಾನಪ್ರಿಯ ಸಿಎಂ ಬಸವರಾಜ ಬೊಮ್ಮಾಯಿ ಈ ವಿಶೇಷ ಯೋಜನೆ ಘೋಷಿಸಿದ್ದಾರೆ.

ಅಷ್ಟೇ ಅಲ್ಲ ಸಿಎಂ ಬೊಮ್ಮಾಯಿ ಬಜೆಟ್​ನಲ್ಲಿ ರಾಷ್ಟ್ರೀಯ ಪ್ರಾಣಿ ತಳಿ ಸಂಪನ್ಮೂಲ ಬ್ಯೂರೋದಿಂದ ಭಾರತೀಯ ದೇಶಿ ಶ್ವಾನ ತಳಿ ಎಂದು ಮಾನ್ಯತೆ ಪಡೆದ ಮುಧೋಳ ಹೌಂಡ್ ಶ್ವಾನ ತಳಿಯ ಅಭಿವೃದ್ಧಿಗಾಗಿ 5 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ಇನ್ನು ಪ್ರಾಣಿಗಳ ಮೇಲಿನ ಹಿಂಸೆ ತಡೆಯಲು ಮತ್ತು ಪ್ರಾಣಿ ಕಲ್ಯಾಣಕ್ಕಾಗಿ ಪ್ರಾಣಿ ಕಲ್ಯಾಣ ಮಂಡಳಿಗೆ 5 ಕೋಟಿ ರೂ. ಅನುದಾನ ನೀಡಲಾಗುವುದಾಗಿ ತಿಳಿಸಿದ್ದಾರೆ. ಮಂಡಳಿಯ ವತಿಯಿಂದ ಬೆಂಗಳೂರಿನಲ್ಲಿ ನಿರ್ಲಕ್ಷಿತ ಪ್ರಾಣಿಗಳ ಸೂಕ್ತ ಚಿಕಿತ್ಸೆಗಾಗಿ ಸಂಚಾರಿ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

ಸಿಎಂ ಶ್ವಾನ ಮಮತೆ : ಸಿಎಂ ಬೊಮ್ಮಾಯಿ‌ ಶ್ವಾನದ ಮೇಲೆ ಅತಿಯಾದ ಮಮತೆ ಹೊಂದಿದ್ದಾರೆ. ತಮ್ಮ ಮನೆಯಲ್ಲೇ ಶ್ವಾನ ಸಾಕುವ ಮೂಲಕ ಅದರ ಜೊತೆಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ. ಹಾಗಾಗಿ ಶ್ವಾಗಳೆಂದರೆ ಸಿಎಂ ಬೊಮ್ಮಾಯಿಗೆ ಅಚ್ಚುಮೆಚ್ಚು. ತಮ್ಮ ಮನೆಯ ಸಾಕು ನಾಯಿ ಸತ್ತಾಗ ಕಣ್ಣೀರು ಹಾಕಿ ತಮ್ಮ ಶ್ವಾನ ಪ್ರೀತಿಯನ್ನು ಜಗಜ್ಜಾಹೀರುಗೊಳಿಸಿದ್ದರು.

ಬಳಿಕ ಶ್ವಾನದ ಕಥಾಹಂದರ ಹೊಂದಿರುವ ಚಾರ್ಲಿ ಕನ್ನಡ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ತಮ್ಮ ಶ್ವಾನ ಪ್ರೀತಿಯನ್ನು ಸಾಬೀತು ಪಡಿಸಿದ್ದರು.‌ ಸ್ವತಃ ತಾವೇ ಚಾರ್ಲಿ ಸಿನಿಮಾ ವೀಕ್ಷಿಸಿದ ಸಿಎಂ ಬೊಮ್ಮಾಯಿ ಬಳಿಕ ಭಾವುಕರಾಗಿದ್ದರು. ಇದು ಸಿಎಂ ಬೊಮ್ಮಾಯಿಗೆ ಶ್ವಾನದ ಮೇಲಿನ ಅಕ್ಕರೆಯನ್ನು ತೋರಿಸುತ್ತದೆ. ಇದೀಗ ತಮ್ಮ ಶ್ವಾನ ಪ್ರೀತಿಯನ್ನು ಬಜೆಟ್​ನಲ್ಲಿ ತೋರಿಸಿದ್ದಾರೆ. ವಿಶೇಷವಾಗಿ ಶ್ವಾನಗಳಿಗಾಗಿ ಕಾರ್ಯಕ್ರಮಗಳನ್ನು ಘೋಷಿಸುವ ಮೂಲಕ ಶ್ವಾನ ಮಮತೆ ಮೆರೆದಿದ್ದಾರೆ.

ಇದನ್ನೂ ಓದಿ : ಬೊಮ್ಮಾಯಿ ಜೋಳಿಗೆಯಲ್ಲಿ ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ ವಲಯಕ್ಕೆ ಸಿಕ್ಕಿದ್ದೇನು..?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.