ETV Bharat / state

ರಾಜ್ಯಕ್ಕೆ ಪ್ರಧಾನಿ ಭೇಟಿ.. ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ.. ಸಿಎಂ ಬೊಮ್ಮಾಯಿ - yoga day celebration in mysore

ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸೂಕ್ತ ಸಿದ್ಧತೆ ನಡೆದಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು..

cm basavaraja bommai speaks on PM visit to state
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Jun 18, 2022, 6:07 PM IST

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಲಿದ್ದು, ಕೊಮ್ಮಘಟ್ಟದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಭದ್ರತೆ ದೃಷ್ಟಿಯಿಂದ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಎಲ್ಲವನ್ನೂ ಕೈಗೊಳ್ಳಲಾಗಿದೆ. ಎಸ್​ಪಿಜಿ ಮಾರ್ಗದರ್ಶನದಲ್ಲಿ ಭದ್ರತಾ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೊಮ್ಮಘಟ್ಟದಲ್ಲಿ ಕಾರ್ಯಕ್ರಮದ ಸಿದ್ಧತಾ ಕಾರ್ಯ ಪರಿಶೀಲಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮ ಅಚ್ಚುಕಟ್ಟಾಗಿ ಆಗಬೇಕು ಎನ್ನುವ ಕಾರಣಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳು, ಕೇಂದ್ರದ ಮಾಜಿ ಸಚಿವ ಸದಾನಂದ ಗೌಡ ಸೇರಿ ‌ಎಲ್ಲಾ ಶಾಸಕರು ಬಹಳಷ್ಟು ಶ್ರಮವಹಿಸುತ್ತಿದ್ದಾರೆ. ಬಿಬಿಎಂಪಿ, ಬಿಡಿಎ, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಏನೆಲ್ಲಾ ಕ್ರಮಕೈಗೊಳ್ಳಬೇಕೆಂದು ಪರಿಶೀಲಿಸಿದ್ದಾರೆ ಎಂದರು.

ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿರುವುದು..

ಪ್ರಧಾನಿ ಆಗಮನ : ಜೂನ್ 20ರಂದು 11.55ಕ್ಕೆ ಪ್ರಧಾನಿ ಮೋದಿ ಯಲಹಂಕ ವಾಯುನೆಲೆಗೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಐಐಎಸ್ಸಿಗೆ ಆಗಮಿಸಲಿದ್ದಾರೆ. ಬ್ರೈನ್ ರಿಸರ್ಚ್ ಸೆಂಟರ್, ಸೂಪರ್ ಕಂಪ್ಯೂಟಿಂಗ್ ಉದ್ಘಾಟನೆ ನಡೆಸಲಿದ್ದು, ಮೈಂಡ್​ಟ್ರೀ ವತಿಯಿಂದ ನಿರ್ಮಾಣವಾಗಲಿರುವ 850 ಹಾಸಿಗೆಗಳ ಸಂಶೋಧನಾ ಆಸ್ಪತ್ರೆಗೆ ಅಡಿಗಲ್ಲು ಹಾಕಲಿದ್ದಾರೆ ಎಂದರು.

ಹಲವು ಯೋಜನೆಗೆ ಚಾಲನೆ : ಐಐಎಸ್ಸಿಯಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಕೊಮ್ಮಘಟ್ಟಕ್ಕೆ ಆಗಮಿಸಲಿರುವ ಪ್ರಧಾನಿಗಳು, ಬೆಂಗಳೂರು ಉಪನಗರ ರೈಲು ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ. ಬೆಂಗಳೂರು ಹೊರವಲಯಕ್ಕೆ ಸಂಪರ್ಕ ಕಲ್ಪಿಸುವ 15 ಸಾವಿರ ಕೋಟಿ ರೂ.ಗಳ ವೆಚ್ಚದ ಯೋಜನೆ ಇದಾಗಿದೆ ಎಂದರು. ಆರು ರೈಲ್ವೆ ಯೋಜನೆಗಳಿಗೂ ಚಾಲನೆ ನೀಡಲಾಗುತ್ತದೆ. ಇದರ ಜೊತೆಗೆ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಇಲ್ಲಿಯೇ ಚಾಲನೆ ನೀಡಲಾಗುತ್ತದೆ ಎಂದರು.

ಸ್ಯಾಟಲೈಟ್ ಟೌನ್ ರಿಂಗ್ ರೋಡ್, ಡಾಬಸ್ ಪೇಟೆಯಿಂದ ಹೊಸಕೋಟೆ ಮೂಲಕ ಹಳೆ ಮದ್ರಾಸ್ ರಸ್ತೆಗೆ ಸಂಪರ್ಕ ಕಲ್ಪಿಸುವ ಯೋಜನೆಗೂ ಚಾಲನೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಸರ್ಕಾರ ಒಟ್ಟಾಗಿ ಯೋಜನೆ ಮಾಡಲಿವೆ. ಇದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಹಲವು ವಿನಾಯತಿಗಳನ್ನು ಕೇಳಿದ್ದೆವು.

ಎರಡು ಬಾರಿ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದೆ. ಹಾಗಾಗಿ, ವಿಶೇಷ ವಿನಾಯಿತಿ ಮೇರೆಗೆ ಯೋಜನೆ ಆಗುತ್ತಿದೆ. ಬೆಂಗಳೂರಿಗೆ ಸಂಬಂಧಪಟ್ಟಂತೆ ಹಲವಾರು ದೂರದೃಷ್ಟಿಯಿಂದ ಕೂಡಿದ ಯೋಜನೆಗಳಿಗೆ ಚಾಲನೆ ನೀಡಲಾಗುತ್ತದೆ. ನಂತರ ಬಹಳ ದೊಡ್ಡ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದರು.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ : ಡಜನ್ ಪ್ರಶ್ನೆ ಮುಂದಿಟ್ಟ ರಾಜ್ಯ ಕಾಂಗ್ರೆಸ್

ನಂತರ 'ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ'ಯ (ಬೇಸ್) ನೂತನ ಕ್ಯಾಂಪಸ್​ ಅನ್ನು ಉದ್ಘಾಟಿಸಲಿದ್ದು, ಅಂಬೇಡ್ಕರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ. ಮೈಸೂರಿನಲ್ಲಿ ಎರಡು ದೊಡ್ಡ ಕಾರ್ಯಕ್ರಮಗಳಿದ್ದು, ಫಲಾನುಭವಿಗಳ ದೊಡ್ಡ ಕಾರ್ಯಕ್ರಮ ಇದೆ. ಅದನ್ನು ಮುಗಿಸಿ ಸುತ್ತೂರು ಮಠ ಮತ್ತು ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಮರುದಿನ ಅರಮನೆ ಮೈದಾನದಲ್ಲಿ ನಡೆಯುವ ಯೋಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಪ್ರಧಾನಿ ವಾಪಸ್ಸಾಗಲಿದ್ದಾರೆ.

ಕೋವಿಡ್ ರಿಪೋರ್ಟ್ ಕಡ್ಡಾಯ : ಇನ್ನು ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಮಾರ್ಗಸೂಚಿ ರೂಪಿಸಲಾಗಿದೆ. ಸಮಾರಂಭದ ವೇದಿಕೆಯ ಹೊರಾಂಗಣದಲ್ಲಿ ಭಾಗಿಯಾಗುವವರಿಗೆ ಲಸಿಕೆಯ ಎರಡು ಡೋಸ್ ಸರ್ಟಿಫಿಕೇಟ್ ಸಾಕು. ಆದರೆ, ಒಳಾಂಗಣದ ವ್ಯಾಪ್ತಿಯ ಒಳಗಡೆ ಇದ್ದವರಿಗೆ ಕೋವಿಡ್ ನೆಗಟಿವ್ ವರದಿ ಕಡ್ಡಾಯವಾಗಿದೆ. ನಾನು ಕೂಡ ಕೋವಿಡ್ ತಪಾಸಣೆ ಮಾಡಿಸಿಯೇ ಸಮಾರಂಭದಲ್ಲಿ ಭಾಗಿಯಾಗುತ್ತೇನೆ. ಸಚಿವರು, ಶಾಸಕರು, ಅಧಿಕಾರಿಗಳು, ಪತ್ರಕರ್ತರಿಗೂ ಇದು ಅನ್ವಯ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.