ETV Bharat / state

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ಆಯ-ವ್ಯಯದಲ್ಲಿ ಅನುದಾನ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ - CM Bommai spoke about financial distribution to welfare karnataka

2019ರಲ್ಲಿ 66 ಇದ್ದ ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ ಪ್ರಸ್ತುತ 72ಕ್ಕೆ ಏರಿದ್ದು, ಆರೋಗ್ಯ ವಿಮೆ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿಯರಲ್ಲಿ ಅಪೌಷ್ಟಿಕತೆ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಸರಬರಾಜು, ಸ್ವಚ್ಛ ಅಡುಗೆ ಅನಿಲ ಪೂರೈಕೆಯಲ್ಲಿ ಕರ್ನಾಟಕ ರಾಜ್ಯ ಸುಧಾರಣೆ ಕಾಣಬೇಕಿದೆ..

CM Basavaraja Bommai
ಸಿಎಂ ಗೃಹ ಕಚೇರಿ ಕೃಷ್ಣಾ
author img

By

Published : Jan 7, 2022, 7:39 PM IST

ಬೆಂಗಳೂರು : ರಾಯಚೂರು, ಯಾದಗಿರಿ ಹಾಗೂ ಕಲಬುರಗಿಯ ಚಿಂಚೋಳಿಯಲ್ಲಿ ಅಪೌಷ್ಟಿಕತೆ ನಿವಾರಣೆಗೆ ನಿರ್ದಿಷ್ಟ ಕ್ರಮಗಳನ್ನು ಜರುಗಿಸಲಾಗುವುದು ಹಾಗೂ ಈ ಬಾರಿಯ ಆಯ-ವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾಗೆ ನೀತಿ ಆಯೋಗದ (ಎಸ್‌ಜಿಡಿ) ಸಲಹೆಗಾರರಾದ ಸನ್ಯುಕ್ತ ಸಮದ್ದಾರ್ ಭೇಟಿ ನೀಡಿದರು. ಸಿಎಂ ಜೊತೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಆರೋಗ್ಯ, ಶಿಕ್ಷಣ ಹಾಗೂ ಜೀವನದ ಗುಣಮಟ್ಟದ ಸುಧಾರಣೆಗೆ ಅಗತ್ಯ ಅನುದಾನವನ್ನು ಮುಂದಿನ ಆಯ-ವ್ಯಯದಲ್ಲಿ ಮೀಸಲಿರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಇದಕ್ಕೆ ಪ್ರತಿಯಾಗಿ ಬಡತನವನ್ನು ಕೇವಲ ಆದಾಯದ ಮೇಲೆ ಅವಲಂಬಿಸದೆ ಆರೋಗ್ಯ, ಶಿಕ್ಷಣ ಹಾಗೂ ಜೀವನ ಗುಣಮಟ್ಟದಂತಹ ಬಹು ಆಯಾಮಗಳನ್ನು ಆಧರಿಸಿ, ಬಡತನದ ಗುಣಮಟ್ಟ ಹಾಗೂ ಪರಿಣಾಮವನ್ನು ನಿರ್ಧರಿಸಲಾಗುತ್ತದೆ ಎಂದು ನೀತಿ ಆಯೋಗದ ಸಲಹೆಗಾರರು ವಿವರಿಸಿದರು.

2019ರಲ್ಲಿ 66 ಇದ್ದ ಕರ್ನಾಟಕದ ಸುಸ್ಥಿರ ಅಭಿವೃದ್ಧಿ ಗುರಿಗಳ ಸೂಚ್ಯಂಕ ಪ್ರಸ್ತುತ 72ಕ್ಕೆ ಏರಿದ್ದು, ಆರೋಗ್ಯ ವಿಮೆ, ಹದಿಹರೆಯದ ಹೆಣ್ಣುಮಕ್ಕಳಲ್ಲಿ ಅಪೌಷ್ಟಿಕತೆ, ಗರ್ಭಿಣಿಯರಲ್ಲಿ ಅಪೌಷ್ಟಿಕತೆ, ಗ್ರಾಮೀಣ ಮನೆಗಳಿಗೆ ಕುಡಿಯುವ ನೀರು ಸರಬರಾಜು, ಸ್ವಚ್ಛ ಅಡುಗೆ ಅನಿಲ ಪೂರೈಕೆಯಲ್ಲಿ ಕರ್ನಾಟಕ ರಾಜ್ಯ ಸುಧಾರಣೆ ಕಾಣಬೇಕಿದೆ.

ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಇವುಗಳ ಬಗ್ಗೆ ಕೇಂದ್ರೀಕೃತವಾಗಿ ಕೆಲಸ ಮಾಡಲು ಬಹು ಆಯಾಮ ಬಡತನ ಸೂಚಕಗಳು (ಎಂಪಿಐ) ಸಹಾಯಕವಾಗಿವೆ ಎಂದು ನೀತಿ ಆಯೋಗದ ಸಲಹೆಗಾರರು ತಿಳಿಸಿದರು. ಈ ಕಾರ್ಯಕ್ಕೆ ಕಲ್ಯಾಣ ಕರ್ನಾಟಕದ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸಹಕಾರವನ್ನು ಪಡೆದು ಕ್ರಮವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಯೋಜನಾ ಆಯೋಗದ ಉಪಾಧ್ಯಕ್ಷ ಬಿ. ಜೆ ಪುಟ್ಟಸ್ವಾಮಿ, ಸಚಿವ ಮುನಿರತ್ನ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ಅಮಿತಾ ಪ್ರಸಾದ್, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಮತ್ತಿತರರು ಉಪಸ್ಥಿತರಿದ್ದರು.

ಓದಿ: ಕಳೆದೊಂದು ವಾರದಿಂದ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ.. ಸೋಂಕು ನಿಯಂತ್ರಣಕ್ಕೆ ಡಿಸಿ ಕ್ರಮ..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.