ETV Bharat / state

ಶೇ.90 ರಷ್ಟು ಷೇರು ಬಂಡವಾಳದೊಂದಿಗೆ ವಿವಿಧೋದ್ದೇಶಗಳ ಮಹಿಳಾ ಸಹಕಾರಿ ಸಂಘಗಳ ಪ್ರಾರಂಭ : ಸಿಎಂ ಬೊಮ್ಮಾಯಿ - ಮಹಿಳಾ ಸಹಕಾರಿ ಸಂಘ ಸ್ಥಾಪನೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿಕೆ

ಕರ್ನಾಟಕದಲ್ಲಿ ಹಾಲು ಉತ್ಪಾದನೆ ಸಹಕಾರ ಸಂಘಗಳ ವಾರ್ಷಿಕ ಆದಾಯ 36,000 ಕೋಟಿ ರೂ.ಗಳಷ್ಟಿದೆ. ಪ್ರತಿ ತಿಂಗಳು 300 ಕೋಟಿ ರೂ. ಗಳನ್ನು ಹಾಲು ಉತ್ಪಾದಕರಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಹಾಲು ಉತ್ಪಾದಕ ಸಂಘಗಳು ಪಾವತಿ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

CM Basavaraja Bommai
ಸಿಎಂ ಬಸವರಾಜ ಬೊಮ್ಮಾಯಿ
author img

By

Published : Mar 20, 2022, 11:02 PM IST

ಬೆಂಗಳೂರು: ರಾಜ್ಯದ ಪ್ರತಿ ತಾಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರು ಸಹಕಾರ ರಂಗದ ವಿವಿಧ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗುವಂತೆ ಉತ್ತೇಜಿಸಲು ಸದಸ್ಯತ್ವ ಶುಲ್ಕವನ್ನು ಸರ್ಕಾರದಿಂದ ಪಾವತಿಸಲಾಗುವುದು. ದುಡಿಯುವ ವರ್ಗ, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಾಗ ಮಾತ್ರ ಸಹಕಾರಿ ರಂಗ ಯಶಸ್ವಿಯಾಗುತ್ತದೆ.

ಮಹಿಳೆಯರು ದುಡಿಮೆಯ ಕ್ಷಮತೆಯುಳ್ಳವರು, ಅವರಿಂದ ರಾಜ್ಯದ ತಲಾವಾರು ಆದಾಯ ಹೆಚ್ಚಾಗುವುದಲ್ಲದೇ ರಾಜ್ಯದ ಆರ್ಥಿಕತೆಯೂ ಹೆಚ್ಚುತ್ತದೆ. ಸಹಕಾರ ರಂಗದಲ್ಲಿ ಬದ್ಧತೆ, ಪ್ರಾಮಾಣಿಕತೆ, ಶ್ರದ್ಧೆ ಹಾಗೂ ಶ್ರಮ ಬಹಳ ಮುಖ್ಯ. ಸಹಕಾರಿ ಕ್ಷೇತ್ರ ಬೆಳೆದರೆ ರಾಜ್ಯ ನಂ.1 ಆಗುತ್ತದೆ. ಸಹಕಾರಿ ಕ್ಷೇತ್ರದಿಂದ ಔದ್ಯೋಗಿಕ ಕ್ರಾಂತಿಯನ್ನು ಮಾಡಲಾಗುವುದು ಎಂದು ತಿಳಿಸಿದರು.

ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆಗೆ ಶೀಘ್ರದಲ್ಲಿಯೇ ಕಾರ್ಯಾದೇಶ.. ಕರ್ನಾಟಕದಲ್ಲಿ ಹಾಲು ಉತ್ಪಾದನೆ ಸಹಕಾರ ಸಂಘಗಳ ವಾರ್ಷಿಕ ಆದಾಯ 36,000 ಕೋಟಿ ರೂ.ಗಳಷ್ಟಿದೆ. ಪ್ರತಿ ತಿಂಗಳು 300 ಕೋಟಿ ರೂ.ಗಳನ್ನು ಹಾಲು ಉತ್ಪಾದಕರಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ ಹಾಲು ಉತ್ಪಾದಕ ಸಂಘಗಳು ಪಾವತಿ ಮಾಡುತ್ತಾರೆ.

ಉತ್ಪಾದನೆಯ ಲಾಭ ಹಾಲು ಉತ್ಪಾದಕರಿಗೆ ಹೋಗಬೇಕೆನ್ನುವ ದೃಷ್ಟಿಯಿಂದ ಹಾಲು ಉತ್ಪಾದಕರ ಬ್ಯಾಂಕ್ ಸ್ಥಾಪನೆ ಮಾಡಲು ಸರ್ಕಾರ ಬಜೆಟ್ ನಲ್ಲಿ 100 ಕೋಟಿ ಅನುದಾನ ನೀಡಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆಗೆ ನಿರ್ಧಾರ ಮಾಡಿದ್ದು, ಕಾರ್ಯಾದೇಶವನ್ನು ಅತಿ ಶೀಘ್ರವಾಗಿ ನೀಡಲಿದೆ. ಪ್ರತಿ ತಾಲೂಕಿನಲ್ಲಿ ಬ್ಯಾಂಕ್ ಇರಲಿದೆ. ಅವರಿಗೆ ಸುಲಭದಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ. ಇದನ್ನು ಸರಿಯಾಗಿ ನಡೆಸಿದ್ದೇ ಆದಲ್ಲಿ ಅಪೆಕ್ಸ್ ಬ್ಯಾಂಕ್​​ಗೆ ಸರಿಸಮಾನವಾಗಿ ಇದು ನಡೆಯಲಿದೆ ಎಂದರು.

ನಮ್ಮ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ದೂರದೃಷ್ಟಿಯ ಫಲವಾಗಿ 10 ಹೆಚ್.ಪಿ ಪಂಪ್ ಸೆಟ್​ಗಳಿಗೆ 12 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ವಿದ್ಯುತ್ ಇಲಾಖೆಗೆ ರೈತರ ಪರವಾಗಿ ಭರಿಸುತ್ತಿದೆ. ಪ್ರಧಾನ ಮಂತ್ರಿಗಳ ಕೃಷಿ ಸಮ್ಮಾನ್ ಯೋಜನೆಯಡಿ 45 ಲಕ್ಷ ರೈತರಿಗೆ 2800 ಕೋಟಿ ರೂ.ಗಳನ್ನು ಪ್ರತಿ ವರ್ಷ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿದೆ ಎಂದು ತಿಳಿಸಿದರು.

ಓದಿ: ಮಸ್ಕತ್​ನಿಂದ ಕೆಐಎಎಲ್​ಗೆ ಬಂದ ವಿಮಾನದಲ್ಲಿ ಬಾಂಬ್: ಹುಸಿ ಕರೆಗೆ ಬೆಚ್ಚಿಬಿದ್ದ ಪ್ರಯಾಣಿಕರು

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.