ದಿಲ್ಲಿ/ಬೆಂಗಳೂರು : ಶಾಲೆಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ಪ್ರತಿಯೊಬ್ಬರು ಸಂಯಮ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನವಿ ಮಾಡಿದ್ದಾರೆ.
ವರಿಷ್ಠರ ಭೇಟಿ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಹಾಗೂ ಶಾಲಾ ಹಾಗೂ ಕಾಲೇಜು ಆಡಳಿತ ಮಂಡಳಿ ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇನೆ. ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಉದ್ವೇಗಕ್ಕೆ ಒಳಗಾಗದೆ, ಊಹಾಪೋಹಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.
ಇಂದು ಹೈಕೋರ್ಟ್ ಸಹ ಇದೇ ಉತ್ತರವನ್ನು ನೀಡಿದೆ. ಶಾಂತಿ ಸುವ್ಯವಸ್ಥೆ ಹಾಗೂ ಕಾನೂನು ಹಿತದೃಷ್ಟಿಯಿಂದ ಮುಂದಿನ ಮೂರು ದಿನ ಶಾಲಾ-ಕಾಲೇಜುಗಳನ್ನು ಮುಚ್ಚುವುದಕ್ಕೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ ಎಂದರು.
ನ್ಯಾಯಾಲಯದ ಆದೇಶ ಯಾವ ರೀತಿ ಬರುತ್ತದೆ ಎನ್ನುವುದನ್ನು ಕಾದು ನೋಡುತ್ತಿದ್ದೇವೆ. ಪ್ರತಿಯೊಬ್ಬರೂ ಆದೇಶವನ್ನು ಪಾಲಿಸಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಕ್ರಮವನ್ನು ನಾವು ಕೈಗೊಳ್ಳುತ್ತೇವೆ. ಅಲ್ಲಿಯವರೆಗೂ ಶಾಂತಿ-ಸುವ್ಯವಸ್ಥೆ ಕಾಪಾಡಿಕೊಳ್ಳಿ ಎಂದು ಹೇಳಿದರು.
ಓದಿ: ಸಚಿವ ಸ್ಥಾನ ಕೊಡ್ರಿ ಅಂತಾ ನಾನು ಭಿಕ್ಷೆ ಬೇಡುವುದಿಲ್ಲ: ಶಾಸಕ ಶ್ರೀಮಂತ ಪಾಟೀಲ್..