ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರಿಗೆ 'ಕರ್ನಾಟಕ ರತ್ನ ಪ್ರಶಸ್ತಿ' ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಒತ್ತಾಯ ಕೇಳಿ ಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಪ್ರಶಸ್ತಿ ಬಗ್ಗೆ ಪ್ರಮುಖರ ಜತೆ ಚರ್ಚಿಸುತ್ತೇವೆ ಎಂದು ತಿಳಿಸಿದರು.
ಕೋವಿಡ್ 3ನೇ ಅಲೆ ಭೀತಿ ವಿಚಾರ:
ರಾಜ್ಯದಲ್ಲಿ ಕೋವಿಡ್ 3ನೇ ಅಲೆಯ ಭೀತಿ ಇದೆ. ಹೀಗಾಗಿ, ರಾಷ್ಟ್ರ ಮತ್ತು ರಾಜ್ಯಮಟ್ಟದ ಪರಿಣಿತರ ಸಂಪರ್ಕದಲ್ಲಿದ್ದೇವೆ. ಎಲ್ಲವನ್ನೂ ಗಮನಿಸುತ್ತಿದ್ದೇವೆ. ಬೇರೆ ಬೇರೆ ದೇಶಗಳಲ್ಲಿ ಯಾವ ಪರಿಸ್ಥಿತಿ ಇದೆ ಅನ್ನೋದನ್ನು ತಿಳಿದುಕೊಳ್ಳುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಯಾವ ಪರಿಸ್ಥಿತಿ ಇದೆ ಅನ್ನೋದು ವರದಿ ಕೊಟ್ಟ ನಂತರ ತಿಳಿಯಲಿದೆ. ನಂತರ ತಜ್ಞರ ಶಿಫಾರಸ್ಸಿನಂತೆ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಉಪಚುನಾವಣೆಯಲ್ಲಿ ಗೆಲುವು
ಹಾನಗಲ್ ಹಾಗೂ ಸಿಂದಗಿಯಲ್ಲಿ ನಾವು ಗೆಲ್ಲುತ್ತೇವೆ. ಉಪಚುನಾವಣೆಯಲ್ಲಿ ಹೆಚ್ಚು ಮತದಾನವಾಗಿದೆ ಎಂದು ಸಿಎಂ ಹೇಳಿದರು.
'ಪೊಲೀಸ್ ಕವಾಯತು ಇನ್ಮುಂದೆ ಕನ್ನಡದಲ್ಲೇ ಆಗಲಿದೆ'
2016ರಲ್ಲಿ ಹಾಲಿ ಜಂಟಿ ಪೊಲೀಸ್ ಆಯುಕ್ತ ಡಾ.ರವಿಕಾಂತೇಗೌಡ ಬೆಳಗಾವಿಯಲ್ಲಿ ಕನ್ನಡದಲ್ಲಿ ಕವಾಯತು ಮಾಡಿಸಿದ್ದರು. ಇನ್ನುಂದೆ ಕವಾಯತು ಆದೇಶ ಕನ್ನಡದಲ್ಲೇ ಆಗಲಿದೆ. ಈ ಸಂಬಂಧ ಗೃಹಸಚಿವರು ಒಪ್ಪಿಗೆ ಕೊಡ್ತಾರೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ಹಾಗೂ ಶಿಕ್ಷಣ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಶಿಕ್ಷಣಕ್ಕೆ ಬಹಳ ದೊಡ್ಡ ಸಹಾಯದ ಅವಶ್ಯಕತೆ ಇದೆ. ನಮ್ಮಲ್ಲಿ ಕೊಠಡಿ ಹಾಗೂ ವ್ಯವಸ್ಥೆಗಳ ಕೊರತೆ ಇದೆ. ಮುಂದಿನ ಬಜೆಟ್‌ನಲ್ಲಿ ಹೆಚ್ಚು ಹಣ ನೀಡಲಾಗುತ್ತದೆ ಎಂದು ತಿಳಿಸಿದರು.
ಮನೆ-ಮನೆಗೆ ರೇಷನ್ ಯೋಜನೆ
ಪೂರ್ವನಿಯೋಜಿತವಾಗಿ ಪ್ಲಾನಿಂಗ್ ಆಗಿದೆ. ನಗರದಾದ್ಯಂತ ಜನವರಿ 26ರಿಂದ ವಾಹನ ಮುಖಾಂತರ ಆಹಾರ ಧಾನ್ಯ ತಲುಪಿಸಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನೇರವಾಗಿ ಹಣ ಹಂಚಿದೆ : ಡಿಕೆಶಿಗೆ ಸಚಿವ ಈಶ್ವರಪ್ಪ ತಿರುಗೇಟು