ETV Bharat / state

ಮಳೆ ಹಾನಿ ಪ್ರದೇಶದ ರಸ್ತೆ ದುರಸ್ತಿ ಮಾಡಿ, 300 ಕೋಟಿ ಅನುದಾನ ಬಳಸಿಕೊಳ್ಳಿ : ಸಿಎಂ ಬಸವರಾಜ ಬೊಮ್ಮಾಯಿ - ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ

ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು..

cm-basavaraja-bommai-talk-about-road-repair-in-bengalore
ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ
author img

By

Published : Aug 17, 2021, 9:19 PM IST

ಬೆಂಗಳೂರು : ಮಳೆಯಿಂದ ಹಾನಿಯಾದ ಪ್ರದೇಶಗಳ ರಸ್ತೆ ಸುಧಾರಣೆಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ವಾಸ್ತವವಾಗಿ ಹಾನಿಯಾದ ಪ್ರದೇಶದಲ್ಲಿಯೇ ಬಳಕೆ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಳಾಗಿವೆ. ಹಾಗಾಗಿ, ಹಾಳಾದ ರಸ್ತೆಗಳ ದುರಸ್ತಿ ಕಾರ್ಯವನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಿದರು.

ಪ್ರತಿ ಜಿಲ್ಲೆಯ ರಸ್ತೆಗಳ ಸಾಂದ್ರತೆಯನ್ನು ಪರಿಶೀಲಿಸಿ, ಕಡಿಮೆ ಇರುವ ಜಿಲ್ಲೆಗಳಲ್ಲಿ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೆತ್ತಿಕೊಳ್ಳಲಾಗಿದೆ. ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ ಪಾಟೀಲ, ಲೋಕೋಪಯೋಗಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಡಾ. ಕೆ ಎಸ್ ಕೃಷ್ಣಾರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಓದಿ: ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ಪಡೆದು ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಿ : ಸಿಎಂ ಬಿಎಸ್‌ಬಿ ಸಲಹೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.