ETV Bharat / state

ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ, ಕೆರೆಕಟ್ಟೆಗಳು ಒಡೆಯದಂತೆ ನಿಗಾ ವಹಿಸಿ: ಡಿಸಿಗಳಿಗೆ ಸಿಎಂ ಸೂಚನೆ

ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಪರಿಹಾರ ವಿತರಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಡಿಸಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ
ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ
author img

By

Published : Aug 2, 2022, 10:44 PM IST

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ 11 ಜಿಲ್ಲೆಗಳ ಪರಿಸ್ಥಿತಿ ಅವಲೋಕನ ಮಾಡಬೇಕು. ಮನೆ ಹಾನಿಗೆ ತಕ್ಷಣ ಪರಿಹಾರ ನೀಡಿ, ಕೆರೆ-ಕಟ್ಟೆಗಳು ಒಡೆಯದಂತೆ ನಿಗಾ ವಹಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಳೆಯಿಂದ ಹಾನಿಗೊಳಗಾಗಿರುವ ಹನ್ನೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಅವರು ವಿಡಿಯೋ ಸಂವಾದ ನಡೆಸಿದರು. ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಹಾನಿ ವಿವರ ಹೀಗಿದೆ:

ಬೆಳೆ ಹಾನಿ: ಒಟ್ಟು 3499 ಹೆಕ್ಟೇರ್ ಕೃಷಿ ಬೆಳೆ ನಾಶ, 2057 ಹೆಕ್ಟೇರ್ ತೋಟಗಾರಿಕಾ ಬೆಳೆ ನಾಶ.

ಮನೆ ಹಾನಿ: 2430 ಮನೆಗಳು ಸಂಪೂರ್ಣ ಹಾನಿ. 4378 ಮನೆಗಳಿಗೆ ಭಾಗಶಃ ಹಾನಿ.

ಜೀವ ಹಾನಿ: ಜೀವ ಹಾನಿ- 39 ಹಾಗೂ 99 ಪ್ರಾಣಿ ಹಾನಿ.

ರಸ್ತೆ ಹಾನಿ: 1730 ಕಿ.ಮೀ, 5419 ಕಿ.ಮೀ ಗ್ರಾಮೀಣ ರಸ್ತೆ ಹಾನಿ.

629 ಸೇತುವೆಗಳಿಗೆ ಹಾನಿ - 3,264 ಶಾಲಾ ಕಟ್ಟಡಗಳು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳು ಹಾನಿಯಾಗಿವೆ.

ವಿದ್ಯುತ್ ಕಂಬಗಳಿಗೆ ಹಾನಿ: 11,796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, 759 ಟ್ರಾನ್ಸ್ ಫಾರ್ಮರ್​ಗಳು ಹಾನಿಗೊಳಪಟ್ಟಿವೆ.

ಸತತ ಮಳೆಯಿಂದ ಎಲ್ಲಾ ಕೆರೆಗಳು ತುಂಬಿವೆ. ಈ ಸಂದರ್ಭದಲ್ಲಿ ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿರುತ್ತವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ ಕೆರೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳು ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು. ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು. ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನ: ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಕೈಗೊಳ್ಳುವುದು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡಬೇಕು. ಭಟ್ಕಳದಲ್ಲಿ ಹಾಗೂ ಸುಳ್ಯದ ಸೇರಿದಂತೆ ಇತರ ಕಡೆಗಳ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿದರು.

ಕೂಡಲೇ ಪರಿಹಾರ ವಿತರಿಸಿ: ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು. ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮ‌ ಕೈಗೊಂಡು ಆ ಮೂಲಕ ಸರ್ಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನೆ ಮಾಡಬೇಕಿದೆ. ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ ಕೂಡಲೇ ಪರಿಹಾರ ವಿತರಿಸಿ ಎಂದು ತಿಳಿಸಿದರು.

ಹೆಚ್ಚುವರಿ ಅನುದಾನ ಬಿಡುಗಡೆ: ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓ ಗಳಿಂದ ಪಡೆಯಬೇಕು. ಕಾಳಜಿ ಕೇಂದ್ರಗಳಲ್ಲಿ ಎಲ್ಲಾ ವ್ಯವಸ್ಥೆಗಳನ್ನು ತಹಶೀಲ್ದಾರ್​ಗಳು ಖಾತರಿಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡಲು ಸೂಚನೆ ನೀಡಿದ ಸಿಎಂ ಎಲ್ಲಾ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಐ.ಎಸ್.ಎನ್ ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್ ಉಮಾಶಂಕರ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ದುಡ್ಡಿನ ಮದದಿಂದ ಸಚಿವ ಅಶ್ವತ್ಥ್​ ನಾರಾಯಣ್​ ಮಾತನಾಡುತ್ತಿದ್ದಾರೆ: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.