ETV Bharat / state

ಗುಜರಾತ್ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ: ಸಿಎಂ ಬೊಮ್ಮಾಯಿ, ಬಿಎಸ್​ವೈ​ ಭಾಗಿ - Oath taking ceremony of new CM of Gujarat

ಸೋಮವಾರ ಮಧ್ಯಾಹ್ನ ನಡೆಯಲಿರುವ ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

cm bommai and bsy attending Oath taking ceremony
ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಿಎಂ ಬೊಮ್ಮಾಯಿ ಬಿಎಸ್​ವೈ​ ಭಾಗಿ
author img

By

Published : Dec 11, 2022, 7:24 PM IST

ಬೆಂಗಳೂರು: ಸೋಮವಾರ ಮಧ್ಯಾಹ್ನ ನಡೆಯಲಿರುವ ಗುಜರಾತ್ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಲಿದ್ದಾರೆ.

ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿರುವ ಭೂಪೇಂದ್ರ ಪಟೇಲ್ ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅಧಿಕೃತ ಆಹ್ವಾನ ನೀಡಿದ್ದು, ಗುಜರಾತ್ ಸಿಎಂ ಆಹ್ವಾನದ ಮೇರೆಗೆ ಗುಜರಾತ್ ನಲ್ಲಿಯೇ ಉಳಿದುಕೊಂಡಿರುವ ಬಿಎಸ್​ವೈ​ ಇಂದು ಗಾಂಧಿನಗರದ ಲೀಲಾ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಸೋಮವಾರ ಮಧ್ಯಾಹ್ನ 1.45 ಕ್ಕೆ ಗಾಂಧಿನಗರದ ಹೆಲಿಪ್ಯಾಡ್ ಮೈದಾನದಲ್ಲಿ ನಡೆಯಲಿರುವ ಗುಜರಾತ್ ನೂತನ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಇನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಆಹ್ವಾನ ನೀಡಲಾಗಿದ್ದು, ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 11.30ಕ್ಕೆ ಅಹಮದಾಬಾದ್ ನ ಸರ್ದಾರ್ ವಲಭಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ.

ಇದನ್ನೂ ಓದಿ:ನನಗೆ ಮತ್ತೊಮ್ಮೆ ಅವಕಾಶ ಸಿಕ್ಕಿದರೆ ಕನಕ ಭವನಕ್ಕೆ ಎಷ್ಟು ಬೇಕೋ ಅಷ್ಟು ದುಡ್ಡು ಕೊಡುತ್ತೇನೆ: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.