ETV Bharat / state

ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ: ಸಿಎಂ ಬೊಮ್ಮಾಯಿ ಘೋಷಣೆ - CM Bommai announce Housing Beneficiaries Income Limit Increases

ವಸತಿ ಯೋಜನೆ ಫಲಾನುಭವಿಗಳ ಆದಾಯ ಮಿತಿ ಏರಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ‌ ಮಾಡಿದ್ದಾರೆ.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Mar 16, 2022, 6:57 PM IST

ಬೆಂಗಳೂರು: ವಸತಿ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಆದಾಯ ಮಿತಿ ಹೆಚ್ಚಳ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ‌ ಮಾಡಿದ್ದಾರೆ.

ವಸತಿ ಯೋಜನೆಗಳಿಗಾಗಿನ ಫಲಾನುಭವಿಗಳ ಆದಾಯ ಮಿತಿ ಹೆಚ್ಚಳ ಮಾಡಿ ಸಿಎಂ ಘೋಷಣೆ

ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಗ್ರಾಮೀಣ ಪ್ರದೇಶಗಳಲ್ಲಿನ ವಿವಿಧ ವಸತಿ ಯೋಜನೆಗಳ ಫಲಾನುಭವಿಗಳ ಆದಾಯ ಮಿತಿಯನ್ನು 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದೆ. ನಗರ ಪ್ರದೇಶಗಳಲ್ಲಿನ ವಿವಿಧ ವಸತಿ ಯೋಜನಗಳ ಫಲಾನುಭವಿಗಳ ಆದಾಯ ಮಿತಿಯನ್ನು 87 ಸಾವಿರ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ ಎಂದು ತಿಳಿಸಿದರು.

ಆದಾಯ‌ ಮಿತಿ ಏರಿಕೆ ಮಾಡುವಂತೆ ಪ್ರಶ್ನೋತ್ತರ ಅವಧಿಯಲ್ಲಿ ಚಿಕ್ಕಮಗಳೂರು ಶಾಸಕರಾದ ಸಿ.ಟಿ.ರವಿ ಹಾಗೂ ರಮೇಶ್ ಕುಮಾರ್ ಮನವಿ ಮಾಡಿದ್ದರು. ಇದೀಗ ಸಿಎಂ ಸದನದಲ್ಲೇ ಆದಾಯ ಮಿತಿ ಹೆಚ್ಚಿಸಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ವಸತಿ ಯೋಜನೆಗಳ ಫಲಾನುಭವಿಗಳಿಗೆ ಆದಾಯದ ಮಿತಿ ಹೆಚ್ಚಳ: ಸಚಿವ ಸೋಮಣ್ಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.