ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯಗಳ ಮೀಸಲಾತಿ ಬೇಡಿಕೆ ವಿಚಾರವಾಗಿ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವಪಕ್ಷ ಸಭೆ ಕರೆದಿದ್ದಾರೆ. ಮುಂದಿನ ಶುಕ್ರವಾರದಂದು ಬೆಳಗ್ಗೆ 11.30ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಿಗದಿಯಾಗಿದೆ.
ವಿಧಾನ ಮಂಡಲದ ಉಭಯ ಸದನಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಇತ್ತೀಚೆಗಷ್ಟೇ ಮುಗಿದ ಅಧಿವೇಶನದಲ್ಲಿ ಮೀಸಲಾತಿ ಬೇಡಿಕೆ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯುವುದಾಗಿ ಸಿಎಂ ಹೇಳಿದ್ದರು. ಅದರಂತೆ ಸಿಎಂ ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯಲಾಗಿದೆ.
ಎಸ್‌ಸಿ, ಎಸ್‌ಟಿ ಸಮುದಾಯಗಳ ನಾಯಕರನ್ನೂ ಸಭೆಗೆ ಆಹ್ವಾನಿಸಲಾಗಿದೆ. ಮೀಸಲಾತಿ ಸಂಬಂಧ ನ್ಯಾ.ನಾಹಮೋಹನ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಇದನ್ನೂ ಓದಿ: ಸಿಇಟಿ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್‍ಯಾಂಕಿಂಗ್‌ನಲ್ಲಿ ವ್ಯತ್ಯಾಸವಾಗಿಲ್ಲ.. ಅಶ್ವತ್ಥ ನಾರಾಯಣ