ETV Bharat / state

ರಾಜ್ಯಕ್ಕೆ ಒಮಿಕ್ರೋನ್ ಎಂಟ್ರಿ: ಹೊಸ ಮಾರ್ಗಸೂಚಿ ಬಗ್ಗೆ ಇಂದು ಸಿಎಂ ಮಹತ್ವದ ಸಭೆ - omicron virus in karnataka

ಒಮಿಕ್ರೋನ್ ಕುರಿತಂತೆ ಪರಿಣತರು ಹಾಗೂ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದೇನೆ. ಈ ಸಭೆಯಲ್ಲಿ ಹೊಸ ಹೊಸ ತಳಿಗಳ ಸೋಂಕು ನಿಯಂತ್ರಿಸುವ ಕುರಿತು ರಾಜ್ಯ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

cm bommai meeting
ಒಮಿಕ್ರೋನ್ ಬಗ್ಗೆ ಸಿಎಂ ಸಭೆ
author img

By

Published : Dec 2, 2021, 10:37 PM IST

Updated : Dec 3, 2021, 6:36 AM IST

ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರೋನ್​​ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶುಕ್ರವಾರ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌.

ನವದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ, ರಾಜ್ಯದಿಂದ ಎನ್​​ಸಿಬಿಎಸ್​​ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಎರಡು ಒಮಿಕ್ರೋನ್​​ ಪ್ರಕರಣಗಳನ್ನು ದೃಢಪಡಿಸಿದೆ. ಆದರೆ, ವಿವರವಾದ ಪರೀಕ್ಷಾ ವರದಿ ಬಂದಿಲ್ಲ. ಪ್ರಕರಣಗಳ ಸಂಪೂರ್ಣ ವಿವರ ಪಡೆಯುವಂತೆ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ ಎಂದರು.

ನವದೆಹಲಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ

ಶುಕ್ರವಾರ ಪರಿಣತರು ಹಾಗೂ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆದಿದ್ದೇನೆ. ಈ ಸಭೆಯಲ್ಲಿ ಹೊಸ ಹೊಸ ತಳಿಗಳ ಸೋಂಕು ನಿಯಂತ್ರಿಸುವ ಕುರಿತು ರಾಜ್ಯ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುತ್ತದೆ. ಕೇಂದ್ರದ ಪರಿಣತರ ಜೊತೆಗೂ ಈ ಕುರಿತು ಚರ್ಚಿಸಲಾಗುತ್ತದೆ ಹಾಗೂ ಹೊಸ ಮಾರ್ಗಸೂಚಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಒಮಿಕ್ರೋನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಮತ್ತೊಮ್ಮೆ ಭೇಟಿಯಾಗಿದ್ದೇನೆ. ಈ ಪ್ರಕರಣದ ವಿವರ ಒದಗಿಸುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಪ್ರಭೇದದ ಸೋಂಕು ತೀವ್ರ ಸ್ವರೂಪದಲ್ಲ ಎಂದು ತಿಳಿದು ಬಂದಿದೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ಒಮಿಕ್ರೋನ್​​ ಪತ್ತೆ ವಿಚಾರ: ಭಯ ಬೇಡ ಎಂದು ಅಭಯ ನೀಡಿದ ಆರೋಗ್ಯ ಸಚಿವರು!

Last Updated : Dec 3, 2021, 6:36 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.