ETV Bharat / state

ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಮಹನೀಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ - ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಇಂದು ಬೆಂಗಳೂರಿನ ಕೆಂಗೇರಿಯಲ್ಲಿ ವಿವಿಧ ಮಂಡಳಗಳ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಜನರಿಗೆ ಸಿಎಂ ಬೊಮ್ಮಾಯಿಯವರು ಪ್ರಶಸ್ತಿ ಪ್ರದಾನ ಮಾಡಿದರು..

CM Bommai distributed Cooperative Ratna award to sixty people
60 ಮಹನೀಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ
author img

By

Published : Mar 20, 2022, 2:34 PM IST

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಹಕಾರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 60 ಜನ ಮಹನೀಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಇಂದು ಕೆಂಗೇರಿಯಲ್ಲಿ ಸಹಕಾರ ಇಲಾಖೆ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳ ವತಿಯಿಂದ ಆಯೋಜಿಸಲಾಗಿದ್ದ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿದರು.

ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ

ಈ ವೇಳೆ ಸಚಿವ ಎಸ್​ ಟಿ ಸೋಮಶೇಖರ್​ ಮಾತನಾಡಿ, ರಾಜ್ಯಮಟ್ಟದಲ್ಲಿ ಆಯ್ಕೆ ಸಮಿತಿ ಇದೆ. ಸಮಿತಿಯಲ್ಲಿ ಕೃಷಿ ಸಚಿವರು, ಸಹಕಾರ ಮಹಾಮಂಡಳದ ಅಧ್ಯಕ್ಷರು, ಸಹಕಾರ ಇಲಾಖಾ ಪ್ರಧಾನ ಕಾರ್ಯದರ್ಶಿಯವರು, ಸಹಕಾರ ಸಂಘಗಳ ನಿಬಂಧಕರು ಮತ್ತು ಸಹಕಾರ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರು (ಸದಸ್ಯ ಕಾರ್ಯದರ್ಶಿ) ಇದ್ದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಹಕಾರಿ ಯೂನಿಯನ್​​​ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚನೆಯಾಗಿರುತ್ತದೆ. ಸಮಿತಿಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು, ಹಾಲು ಒಕ್ಕೂಟದ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಪ್ರತಿನಿಧಿ, ಪ್ರಾಂತೀಯ ಸಹಕಾರ ಸಂಘಗಳ ಜಂಟಿ ನಿಬಂಧಕರು ಮತ್ತು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರು ಇರುತ್ತಾರೆ ಎಂದು ಮಾಹಿತಿ ನೀಡಿದರು.

ಜಿಲ್ಲಾಮಟ್ಟದ ಸಭೆಯ ಶಿಫಾರಸುಗಳನ್ನು ರಾಜ್ಯಮಟ್ಟದ ಸಮಿತಿ ಪರಿಶೀಲಿಸಿ ಅಂತಿಮವಾಗಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕಾರದ ಹೆಸರುಗಳನ್ನು ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಶ್ರೇಷ್ಠ ಸಹಕಾರಿಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಸನ್ಮಾನಿಸಿ, ಗೌರವಿಸುವ ಪ್ರಕ್ರಿಯೆ ಬಹುತೇಕ ಕರ್ನಾಟಕ ರಾಜ್ಯದಲ್ಲಿ ಮಾತ್ರವೆ ಎಂದು ಹೇಳಲಾಗುತ್ತಿದೆ.

ಈವರೆಗೆ 140 ಜನ ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಇದೊಂದು ಸಹಕಾರ ಚಳವಳಿಯ ಆರೋಗ್ಯಕರ ಬೆಳವಣಿಗೆಗೆ ನೀಡುವ ಪ್ರೋತ್ಸಾಹ, ಬೆಂಬಲ ಎಂದು ಭಾವಿಸಲಾಗಿದೆ. ಇದು ಭಾರತದ ಸಹಕಾರ ಚಳವಳಿಯಲ್ಲಿ ದಾಖಲಾರ್ಹವಾಗಿದೆ ಎಂದು ವಿವರಿಸಿದರು.

CM Bommai distributed Cooperative Ratna award to sixty people
ಸಮಾರಂಭದಲ್ಲಿ ಪುನೀತ್​​ಗೆ ಗೌರವ ಸಲ್ಲಿಸಿದ ಗಣ್ಯರು

ಆರ್ಥಿಕ ಸ್ವಾತಂತ್ರಕ್ಕೆ ಹೆಬ್ಬಾಗಿಲು ಎಂಬ ಆಶಯದೊಂದಿಗೆ ಸಹಕಾರ ಕ್ಷೇತ್ರಕ್ಕೆ ಒತ್ತು ನೀಡಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ, ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿದ್ದ ರಾಷ್ಟ್ರದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರುಗಳ ಸೇವೆಯನ್ನು ಸ್ಮರಿಸಬೇಕಾಗಿದೆ.

ರಾಷ್ಟ್ರದ ಪ್ರಥಮ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪಕರಾದ ಸಹಕಾರಿ ಪಿತಾಮಹ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರವರನ್ನು ಹಾಗೂ ಕ್ಷೀರ ಕ್ರಾಂತಿಯ ಪಿತಾಮಹ ವರ್ಗೀಸ್ ಕುರಿಯನ್ ಅವರನ್ನು ನೆನಪಿಸಿಕೊಳ್ಳಬೇಕಾಗಿದೆ ಎಂದರು.

ಕಳೆದೆರಡು ವರ್ಷಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕು ಉಲ್ಬಣಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಹಾಗೂ ಆರ್ಥಿಕವಾಗಿ ಅಬಲರಾದವರನ್ನು ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ 20 ಲಕ್ಷ ಕೋಟಿ ರೂ.ಗಳ ಬೃಹತ್ ಮೊತ್ತದ ಪ್ಯಾಕೇಜ್​ ಅನ್ನು ಘೋಷಿಸಿದ್ದರು.

ಇದರಿಂದ ದೇಶದಲ್ಲಿ ಕೋಟ್ಯಂತರ ಜನರಿಗೆ ಅನುಕೂಲಗಳನ್ನು ಕಲ್ಪಿಸಿಕೊಡಲಾಗಿದೆ. ಅದರಂತೆ ರಾಜ್ಯ ಸರ್ಕಾರವು ಪರಿಣಾಮಕಾರಿಯಾಗಿ ಕೇಂದ್ರದ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಬದ್ಧತೆಯನ್ನು ಪ್ರದರ್ಶಿಸಿದೆ ಎಂದು ವಿವರಿಸಿದರು.

ಈ ವೇಳೆ ಸಹಕಾರ ಜಲಸಂಪನ್ಮೂ0ಲ ಸಚಿವ ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ.ಕೆ. ಸುಧಾಕರ್​​, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಅಬಕಾರಿ ಸಚಿವ ಗೋಪಾಲಯ್ಯ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್​​, ಸಂಸದ ಡಿ.ವಿ.ಸದಾನಂದಗೌಡ, ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿವಿಧ ಸಹಕಾರ ಮಂಡಳಿಗಳ ಪದಾಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಹಿಜಾಬ್ ತೀರ್ಪು ನೀಡಿದ ಮೂವರು ನ್ಯಾಯಾಧೀಶರಿಗೆ 'Y' ಶ್ರೇಣಿಯ ಭದ್ರತೆ: ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.