ಬೆಂಗಳೂರು : ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವ ಹಿನ್ನೆಲೆ, ಕಾರ್ಯಕ್ರಮಕ್ಕೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಪ್ರಧಾನಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವರಣೆ ನೀಡಿದರು.
ಜೂನ್ 21ರಂದು ಮೈಸೂರಿನಲ್ಲಿ ಆಯೋಜಿಸಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ.
ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಬಸವರಾಜ ಬೊಮ್ಮಾಯಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದು, ಮೈಸೂರಿನಲ್ಲಿ ಯೋಗ ದಿನಾಚರಣೆಗೆ ಮಾಡಲಾಗಿರುವ ವ್ಯವಸ್ಥೆಗಳ ಬಗ್ಗೆ ಪ್ರಧಾನಿಗಳಿಗೆ ವಿವರಿಸಿದರು.
ಯೋಗ ದಿನಾಚರಣೆ, ಕಾರ್ಯಕ್ರಮದ ಪೂರ್ವ ಸಿದ್ಧತೆಗಳ ಬಗ್ಗೆ ಪ್ರಧಾನಿಗಳ ಜತೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪ್ರಧಾನಿಗೆ ಕಾರ್ಯಕ್ರಮದ ವಿವರಣೆ ನೀಡಿದರು. ಜೊತೆಗೆ ಪ್ರಧಾನಿಗಳ ಸಲಹೆ, ಸೂಚನೆ ಪಡೆದುಕೊಂಡಿದ್ದಾರೆ.