ETV Bharat / state

ಪೌರ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ - CM Bommai

ಇಂದು ಬೆಳಗ್ಗೆ ಪೌರ ಕಾರ್ಮಿಕ ಮಹಿಳೆಯರೊಂದಿಗೆ ಸಿಎಂ ಬೊಮ್ಮಾಯಿ ಉಪಾಹಾರ ಸೇವಿಸಿದರು.

CM Bommai had lunch with civil workers
ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ
author img

By

Published : Sep 23, 2022, 6:22 PM IST

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸ ರೇಸ್ ವ್ಯೂವ್ ಕಾಟೇಜ್​ನಲ್ಲಿ ಇಂದು ಸಡಗರದ ವಾತಾವರಣ ನಿರ್ಮಾಣವಾಗಿತ್ತು. ಮೊನ್ನೆಯಷ್ಟೇ ಸೇವೆ ಖಾಯಂಗೊಂಡು ಸಿಹಿ ಸುದ್ದಿ ಪಡೆದಿದ್ದ ಪೌರ ಕಾರ್ಮಿಕ ಮಹಿಳೆಯರಿಗೆ ಇಂದು ಮುಖ್ಯಮಂತ್ರಿಯವರೊಂದಿಗೆ ಬೆಳಗ್ಗಿನ ಉಪಾಹಾರ ಸವಿಯುವ ಅವಕಾಶ ಒದಗಿತ್ತು. ಹಾಗಾಗಿ ಇದು ಅವರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಿತ್ತು.

ಸಿಎಂ ಬೊಮ್ಮಾಯಿ ಆಗಮಿಸುತ್ತಿದ್ದಂತೆ ಅವರನ್ನು ಸುತ್ತುವರಿದು, ಶಾಲು, ಹಾರ, ಫಲ ತಾಂಬೂಲ ಅರ್ಪಿಸಿದವರು. ಕುಶಲೋಪರಿ ವಿಚಾರಿಸಿದ ಮುಖ್ಯಮಂತ್ರಿಗಳು ನಿಮ್ಮ ಆರೋಗ್ಯ, ನಿಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಸರ್ಕಾರ ಕಾಳಜಿ ವಹಿಸಲಿದೆ ಎಂದು ಭರವಸೆ ನೀಡಿದರು. ಜೊತೆಗೆ ನಿಮ್ಮ ಮನೆಯ ಗಂಡು ಮಕ್ಕಳ ಬಗ್ಗೆ ನಿಗಾ ವಹಿಸಿ ಎಂದು ಕಿವಿಮಾತು ಹೇಳಿದರು.

ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ

ನಂತರ ಪೌರ ಕಾರ್ಮಿಕರಿಗೆ ಸ್ವತಃ ತಿಂಡಿ ಬಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ತಮ್ಮ ಪಕ್ಕ ಕುಳಿತ ಭಾರತಿ ಅವರೊಂದಿಗೆ ಮಾತನಾಡಿದರು. ಅವರ ವೇತನ ಸರಿಯಾಗಿ ಆಗುತ್ತಿದೆಯೇ, ಕೆಲಸದ ಸ್ಥಳದಲ್ಲಿ ಸೂಕ್ತ ಸೌಲಭ್ಯಗಳು ದೊರೆಯುತ್ತಿವೆಯೇ. ಹೀಗೆ ಹಲವು ವಿಷಯಗಳ ಕುರಿತು ಮಾಹಿತಿ ಪಡೆದರು.

CM Bommai had lunch with civil workers
ಪೌರಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿದ ಸಿಎಂ ಬೊಮ್ಮಾಯಿ

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಪೌರಕಾರ್ಮಿಕರು ಅತ್ಯಂತ ತಳಮಟ್ಟದಲ್ಲಿ ಕೆಲಸ ಮಾಡುತ್ತಾರೆ. ಅವರಲ್ಲಿ ಆತ್ಮವಿಶ್ವಾಸ ಮತ್ತು ಆತ್ಮಗೌರವ ತುಂಬಬೇಕಿದೆ. ಪೌರಕಾರ್ಮಿಕರಿಗೆ ಸೇವಾ ಭದ್ರತೆ ಇರದಿದ್ದ ಕಾರಣ ಸಮಿತಿ ರಚಿಸಲಾಗಿತ್ತು. ಸಮಿತಿಯ ಶಿಫಾರಸಿನಂತೆ ಹಂತ ಹಂತವಾಗಿ ಸುಮಾರು 43 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಆದೇಶಿಸಲಾಗಿತ್ತು. ಅದರ ಮೊದಲ ಹಂತವಾಗಿ 11,137 ಪೌರಕಾರ್ಮಿಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ. 2 ನೇ ಹಾಗೂ 3ನೇ ಹಂತದಲ್ಲಿ ಪೂರ್ತಿ ಮಾಡಲಾಗುವುದು ಎಂದರು.

ಇದನ್ನೂ ಓದಿ: ಒಂದೇ ಸೂರಿನಡಿ ಬಿಎಂಟಿಸಿ, ಬಿಬಿಎಂಪಿ, ಬಿಡಿಎ, ಬೆಂಗಳೂರು ಮೆಟ್ರೋ, ಬೆಂಗಳೂರು ಟ್ರಾಫಿಕ್ ಪೊಲೀಸ್: ವಿಧೇಯಕ ಮಂಡನೆ

ಸರ್ಕಾರದ ಈ ಉಪಕ್ರಮದಿಂದ ಈ ವರ್ಗದ ಜನರಲ್ಲಿ ಆತ್ಮವಿಶ್ವಾಸ ತುಂಬಿದೆ. ಇಷ್ಟು ವರ್ಷದ ನಮ್ಮ ಕಠಿಣ ಪರಿಶ್ರಮಕ್ಕೆ ನ್ಯಾಯ ಸಿಕ್ಕಿರುವ ಭಾವನೆ ಇದೆ. ಮಾನವೀಯತೆಯಿಂದ ಅವರ ಭಾವನೆಗಳಿಗೆ ಗೌರವ ನೀಡಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.