ETV Bharat / state

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನ: ಸಿಎಂ ಚಾಲನೆ - ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದ್ದು, ಇಂದು ಸಿಎಂ ಬೊಮ್ಮಾಯಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ, 28 ದಿನಗಳ ಬಳಿಕ ಎರಡನೇ ಡೋಸ್​ ನೀಡುವುದಾಗಿ ತಿಳಿಸಿದರು.

CM Bommai inaugurated children covid vaccination program
ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ
author img

By

Published : Jan 3, 2022, 11:32 AM IST

Updated : Jan 3, 2022, 12:01 PM IST

ಬೆಂಗಳೂರು: ರಾಜ್ಯದ 15 -18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ವಿತರಣಾ ಕಾರ್ಯಕ್ರಮ ಇಂದಿನಿಂದ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. ಇಂದು ಬಿಬಿಎಂಪಿ ಮಹಿಳೆಯರ ಪದವಿ ಮತ್ತು ಸ್ನಾತಕೋತ್ತರ ಕಾಲೇಜು ಮೂಡಲಪಾಳ್ಯದಲ್ಲಿ ಮಕ್ಕಳ ಲಸಿಕಾ ಅಭಿಯಾನವನ್ನು ಸಿಎಂ ಉದ್ಘಾಟಿಸಿ, ಸಾಂಕೇತಿಕವಾಗಿ ಆರು ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು. 28 ದಿನಗಳ ಬಳಿಕ ಎರಡನೇ ಡೋಸ್​ ಲಸಿಕೆ ನೀಡಲಾಗುತ್ತದೆ.

15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ

ರಾಜ್ಯದಲ್ಲಿ 43 ಲಕ್ಷ, ಬೆಂಗಳೂರಲ್ಲಿ ಒಟ್ಟು 4 ಲಕ್ಷ 41 ಸಾವಿರ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಇಂದು ಒಂದೇ ದಿನ 61 ಸಾವಿರ ಮಕ್ಕಳಿಗೆ ಲಸಿಕೆ ನೀಡಲು ಸಿದ್ಧತೆ ಮಾಡಲಾಗುತ್ತಿದೆ. ನಗರದ 255 ಶಾಲಾ - ಕಾಲೇಜಿನಲ್ಲಿ ಲಸಿಕೆ ನೀಡಲಾಗುತ್ತಿದೆ.

ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಲಸಿಕಾ ಕಾರ್ಯಕ್ರಮ ಹೊಸವರ್ಷದಲ್ಲಿ ಆಗ್ತಿದೆ. ಎಲ್ಲರೂ ಸುರಕ್ಷಿತ ಆರೋಗ್ಯ ಭಾಗ್ಯ ನಿಮ್ಮದಾಗಲಿ. ಕೊರೊನಾ ಯಾರೂ ನಿರೀಕ್ಷಿಸಿರಲಿಲ್ಲ. ದೇಶ ಕೊರೊನಾ ಎದುರಿಸಿದ ರೀತಿ ಹಾಗೂ ಲಸಿಕೆ ಅಭಿಯಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ಮೂರನೆ ಅಲೆ ಅಕ್ಕಪಕ್ಕದ ರಾಜ್ಯದಲ್ಲಿ ಬಹಳ ಹೆಚ್ಚಿದೆ. ರಾಜ್ಯದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.

ಗಡಿಯಲ್ಲಿ ಭದ್ರತೆ, ಆರ್​​ಟಿ-ಪಿಸಿಆರ್ ಪರೀಕ್ಷೆ, ಕೋವಿಡ್ ಪರೀಕ್ಷೆ, ಲಸಿಕೆ ನೀಡುವಿಕೆಯನ್ನು ಹೆಚ್ಚಳ ಮಾಡಲಾಗುತ್ತಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸೋಂಕು ಹೆಚ್ಚಾಗಿದೆ. ಮಕ್ಕಳ ಆರೋಗ್ಯ ಬಹಳ ಮುಖ್ಯ. ಇಂದಿನಿಂದ ಮೊದಲ ಲಸಿಕೆ ಡೋಸ್ ನೀಡಲಾಗುತ್ತದೆ ಎಂದರು.

ನಂತರ ಡಾ.ಕೆ.ಸುಧಾಕರ್ ಮಾತನಾಡಿ, 15 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ಆರಂಭ ಮಾಡಿದ್ದೇವೆ. ಅವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದೇವೆ. ಲಸಿಕೆ ಕೊಡುವುದರಲ್ಲಿ ದೇಶ ಸಾಧನೆ ಮಾಡಿದೆ. ರಾಜ್ಯದಲ್ಲಿ ಮಕ್ಕಳ ಲಸಿಕೆ ಯಶಸ್ವಿಗೊಳಿಸಲು ಅನೇಕ ಸುತ್ತಿನ ಸಭೆ ನಡೆಸಲಾಗಿದೆ.

ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೋವಿಡ್ ಹರಡುವಿಕೆ ಪ್ರಮಾಣ ಬಹಳ ಕಡಿಮೆಯಿದೆ. ರಾಜ್ಯದಲ್ಲಿ ಶೇ 0.4% ಪಾಸಿಟಿವಿಟಿ ಪ್ರಮಾಣ ಇದೆ. ಇಂದು ಸಂಜೆಯೂ ಸಭೆ ನಡೆಸಲಾಗುತ್ತಿದೆ. 9 ರಿಂದ ದ್ವಿತೀಯ ಪಿಯುಸಿಯ ಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಇಡೀ ರಾಜ್ಯದಲ್ಲಿ ಈವರೆಗೆ 8 ಕೋಟಿ 65 ಲಕ್ಷ ಜನಕ್ಕೆ ಲಸಿಕೆ ನೀಡಲಾಗಿದೆ ಎಂದರು.

ಸಚಿವ ವಿ.ಸೋಮಣ್ಣ ಮಾತನಾಡಿ, ಮೂರನೇ ಅಲೆ ಎಷ್ಟರ ಮಟ್ಟಿಗೆ ಗಂಭೀರ ಅನ್ನುವುದಕ್ಕಿಂತ ಎಲ್ಲರೂ ಲಸಿಕೆ ಪಡೆಯುವುದು ಮುಖ್ಯ. ಜನಜಂಗುಳಿ ತಪ್ಪಿಸಿ, ಮಾಸ್ಕ್ ಧರಿಸುವುದರಿಂದ ಈ ಸೋಂಕನ್ನು ತಡೆಗಟ್ಟಬಹುದು. ಈ ಕ್ಷೇತ್ರದ ಸರ್ಕಾರಿ ಶಾಲೆ ಮಕ್ಕಳಿಗೆ ಎಲ್ಲ ರೀತಿಯ ಸುರಕ್ಷತೆ ನೀಡಲಾಗ್ತಿದೆ.

ಈ ವೇಳೆ, ವಸತಿ ಸಚಿವ ವಿ.ಸೋಮಣ್ಣ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಆಡಳಿತಾಧಿಕಾರಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಭಾಗಿಯಾಗಿದ್ದರು.

ಇದನ್ನೂ ಓದಿ: ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ಮಕ್ಕಳಿಗೆ ಮೊದಲ ಹಂತದ ಲಸಿಕಾ ಅಭಿಯಾನ ಪ್ರಾರಂಭ

Last Updated : Jan 3, 2022, 12:01 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.