ETV Bharat / state

ನಾರ್ತ್ ಅಮೆರಿಕದ '6ನೇ ವಿಶ್ವ ಕನ್ನಡ ಸಮ್ಮೇಳನ’ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಕನ್ನಡ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ ಮುಂತಾದ ಎಲ್ಲಾ ರಂಗದಲ್ಲಿಯೂ ಪ್ರಮುಖ ಸ್ಥಾನದಲ್ಲಿದೆ. ಕನ್ನಡದ ಸಾಹಿತಿಗಳು ಜೀವನದ ತಿರುಳನ್ನು ಸೊಗಸಾಗಿ ಹೇಳಿದ್ದಾರೆ. ಹಲವಾರು ನಾಯಕರು ಉತ್ತಮ ಆಡಳಿತ ನೀಡಿ, ದೇಶಕ್ಕೆ ಮಾದರಿಯಾಗಿದ್ದಾರೆಂದು ವರ್ಚುವಲ್ ಕಾರ್ಯಕ್ರಮದಲ್ಲಿ ಸಿಎಂ ತಿಳಿಸಿದ್ದರು.

cm-bommai-inaugurates-6th-world-kannada-conference
ನಾರ್ತ್ ಅಮೇರಿಕದ '6ನೇ ವಿಶ್ವ ಕನ್ನಡ ಸಮ್ಮೇಳನ’ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
author img

By

Published : Aug 28, 2021, 9:51 PM IST

ಬೆಂಗಳೂರು: ನಾರ್ತ್ ಅಮೆರಿಕ ವಿಶ್ವ ಕನ್ನಡಿಗರ ಸಂಘದ ನಾವಿಕ 6ನೇ ವಿಶ್ವ ಕನ್ನಡ ಸಮ್ಮೇಳನವನ್ನು ವರ್ಚುವಲ್ ಆಗಿ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ವಿಶ್ವದೆಲ್ಲೆಡೆಯ ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ. ಕನ್ನಡ ನಾಡು, ನುಡಿ, ಜಲ, ನೆಲದ ಸಂರಕ್ಷಣೆಯ ಜತೆ ವಿಶ್ವದೆಲ್ಲೆಡೆ ನೆಲೆಸಿರುವ ಕನ್ನಡಿಗರ ಹಿತ ಕಾಪಾಡಲು ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ.

ನಾರ್ತ್ ಅಮೇರಿಕದ '6ನೇ ವಿಶ್ವ ಕನ್ನಡ ಸಮ್ಮೇಳನ’ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಕನ್ನಡವನ್ನು ಅಗ್ರಮಾನ್ಯ ಸ್ಥಾನಕ್ಕೆ ಕೊಂಡೊಯ್ಯಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಕನ್ನಡಿಗರು ವಿವಿಧ ದೇಶಗಳಲ್ಲಿ ನೆಲೆಸಿದ್ದರೂ, ನಮ್ಮೆಲ್ಲರ ಮನಸ್ಸು ಹತ್ತಿರವಾಗಿದೆ. ನಮ್ಮ ನಡೆ, ನುಡಿ ಭಾವನೆಗಳೆಲ್ಲವೂ ಒಂದಾಗಿದೆ. ಅನಿವಾಸಿ ಭಾರತೀಯರು ವಿದೇಶದಿಂದಲೂ ಕರ್ನಾಟಕದ ಆಗುಹೋಗುಗಳಿಗೆ ಸ್ಪಂದಿಸುತ್ತಿದ್ದಾರೆ. ನಾವೂ ಸಹ ಅನಿವಾಸಿ ಕನ್ನಡಿಗರ ಬಗ್ಗೆ ಆದರ ಹಾಗೂ ಪ್ರೀತಿಯನ್ನಿಟ್ಟುಕೊಂಡಿದ್ದೇವೆ ಎಂದರು.

ಕನ್ನಡ ಸಂಸ್ಕೃತಿ, ಸಾಹಿತ್ಯ, ಕಲೆ, ಸಂಗೀತ ಮುಂತಾದ ಎಲ್ಲಾ ರಂಗದಲ್ಲಿಯೂ ಪ್ರಮುಖ ಸ್ಥಾನದಲ್ಲಿದೆ. ಕನ್ನಡದ ಸಾಹಿತಿಗಳು ಜೀವನದ ತಿರುಳನ್ನು ಸೊಗಸಾಗಿ ಹೇಳಿದ್ದಾರೆ. ಹಲವಾರು ನಾಯಕರು ಉತ್ತಮ ಆಡಳಿತ ನೀಡಿ, ದೇಶಕ್ಕೇ ಮಾದರಿಯಾಗಿದ್ದಾರೆ. ಅನಿವಾಸಿ ಕನ್ನಡಿಗರು ಎಲ್ಲರೂ ಹೆಮ್ಮೆ ಪಡುವ ರೀತಿಯಲ್ಲಿ ಬದುಕು ನಡೆಸಿದ್ದಾರೆ ಎಂದರು. ಕರ್ನಾಟಕದ ನೈಸರ್ಗಿಕ ಸಂಪತ್ತು ನಮ್ಮೆಲ್ಲರಿಗೂ ಸೇರಿದ್ದು ಎಂದಿದ್ದಾರೆ.

ಓದಿ: ಒಂದು ತಿಂಗಳಲ್ಲೇ 'ಸಿಂಪಲ್ ಸಿಎಂ' ಹೆಗ್ಗಳಿಕೆಗೆ ಪಾತ್ರರಾದ ಮುಖ್ಯಮಂತ್ರಿ ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.