ETV Bharat / state

ಟೆಂಪಲ್ ಟೂರಿಸಂಗೆ ಆದ್ಯತೆ ನೀಡಿ: ಸಿಎಂ ಬೊಮ್ಮಾಯಿ ಸೂಚನೆ - ಮುಜರಾಯಿ ಇಲಾಖೆ ಸಚಿವರ ಜೊತೆ ಸಿಎಂ ಬೊಮ್ಮಾಯಿ ಸಭೆ

ಇಂದು ಸಿಎಂ ಬೊಮ್ಮಾಯಿಯವರು ಮುಜರಾಯಿ ಇಲಾಖೆ ಕೆಲವು ಯೋಜನೆಗಳನ್ನು ಲೋಕಾರ್ಪಣೆ ಮಾಡಿದರು. ಈ ವೇಳೆ ಟೆಂಪಲ್ ಟೂರಿಸಂಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

CM Bommai instructed to give priority to temple tourism
ಟೆಂಪಲ್ ಟೂರಿಸಂಗೆ ಆದ್ಯತೆ ನೀಡುವಂತೆ ಸಿಎಂ ಸೂಚನೆ
author img

By

Published : Feb 23, 2022, 5:48 PM IST

ಬೆಂಗಳೂರು: ರಾಜ್ಯದ ಉತ್ತರ, ದಕ್ಷಿಣ ಹಾಗೂ ಕರಾವಳಿ ಭಾಗದಲ್ಲಿ ದೇವಸ್ಥಾನ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದರ ಜೊತೆಗೆ ಸ್ಮಾರಕ ಪ್ರವಾಸೋದ್ಯಮಕ್ಕೂ ಅವಕಾಶ ಇರುವುದರಿಂದ ಇದಕ್ಕೆ ಉತ್ತೇಜನ ನೀಡಲು ಎರಡನ್ನೂ ಸಂಯೋಜಿಸಿ ಟೂರಿಸಂ ಸಕ್ರ್ಯೂಟ್ ನಿರ್ಮಿಸುವಂತೆ ಮಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಮಗ್ರ ದೇವಸ್ಥಾನಗಳ ನಿರ್ವಹಣಾ ವ್ಯವಸ್ಥೆ ಹಾಗೂ ದೈವ ಸಂಕಲ್ಪ ಯೋಜನೆಗಳನ್ನು (Integrated Temple Management System- ಐಟಿಎಂಎಸ್) ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ದೇವಸ್ಥಾನಗಳಲ್ಲಿ ಸೌಲಭ್ಯಗಳನ್ನು ಒದಗಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸುವಂತೆ ಸಿಎಂ ತಿಳಿಸಿದರು.

ಐಟಿಎಂಎಸ್ ಅನ್ನು ಜಾರಿಗೆ ತಂದಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು, ದೇವಸ್ಥಾನಗಳ ನಿರ್ವಹಣೆ ಬಹಳ ಮುಖ್ಯ. ದೇವಸ್ಥಾನಗಳಿಗೆ ಭೇಟಿ ನೀಡುವವರ ಸಂಖ್ಯೆ ಮುಂತಾದವುಗಳನ್ನು ದಾಖಲಿಸುವ ಪ್ರಯತ್ನವಾಗಬೇಕು. ದೇವಸ್ಥಾನಗಳ ಆಸ್ತಿಗಳ ನಿರ್ವಹಣೆಯನ್ನು ಅತ್ಯಂತ ಸಮರ್ಪಕವಾಗಿ ಮಾಡುವ ಅಗತ್ಯವಿದೆ ಎಂದರು.

ದೇವಸ್ಥಾನಗಳ ಸಮಗ್ರ ಅಭಿವೃದ್ಧಿ ಮಾಡಿ ಪೂರ್ಣಪ್ರಮಾಣದಲ್ಲಿ ಸ್ಥಳೀಯವಾಗಿ ವ್ಯವಸ್ಥೆ ಮಾಡಿ ಆಡಳಿತ ಸುಧಾರಿಸುವ ಅಗತ್ಯವಿದೆ. ಸಾರ್ವಜನಿಕರ ದೇಣಿಗೆ ಹಾಗೂ ಆಸ್ತಿ ಒಳಗೊಂಡಿರುವುದರಿಂದ ನಿರ್ವಹಣೆಯ ಜೊತೆಗೆ ನಿಯಂತ್ರಣವೂ ಅಗತ್ಯ. ದೇವಸ್ಥಾನಗಳ ಅರ್ಚಕರು ಹಾಗೂ ಪೂಜಾರಿಗಳ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ದೇಗುಲಗಳ ಸ್ವಚ್ಛತೆಗೆ ಆದ್ಯತೆ: ದೇವಸ್ಥಾನಗಳ ಸ್ವಚ್ಛತೆಯನ್ನು ಕಾಪಾಡಲು ಆದ್ಯತೆ ನೀಡಬೇಕು. ದೇಗುಲಗಳ ಆವರಣಗಳ ವಾತಾವರಣ ಕಲುಷಿತಗೊಳ್ಳದಂತೆ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು ಎಂದರು. ಈ ವೇಳೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕ ಎಸ್ .ಎ .ರಾಮದಾಸ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಕಂದಾಯ ಇಲಾಖೆ ಕಾರ್ಯದರ್ಶಿ ತುಷಾರ ಗಿರಿನಾಥ, ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಈಶ್ವರಪ್ಪರನ್ನ ಸಂಪುಟದಿಂದ ವಜಾ ಮಾಡಿದ್ರೆ ಬಿಜೆಪಿ ಗೌರವ ಉಳಿದುಕೊಳ್ಳುತ್ತೆ: ಡಿಕೆಶಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.