ETV Bharat / state

ಅಮಿತ್ ಶಾಗೆ ಸರ್ಕಾರದ ರಿಪೋರ್ಟ್ ಕಾರ್ಡ್ ನೀಡಿದ ಸಿಎಂ ಬೊಮ್ಮಾಯಿ

ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರು ಹಾಗೂ ಬಡವರಿಗೆ ಆಗುವ ಲಾಭಗಳ ಕುರಿತು ಐಸಾಕ್ ನಡೆಸಿರುವ ಅಧ್ಯಯನ ವರದಿಯನ್ನು ಇದೇ ಸಂದರ್ಭದಲ್ಲಿ ನೀಡಿದರು..

author img

By

Published : Feb 7, 2022, 10:47 PM IST

cm-bommai-issued-the-government-report-card-to-amit-shah
ಅಮಿತ್ ಶಾಗೆ ಸರ್ಕಾರದ ರಿಪೋರ್ಟ್ ಕಾರ್ಡ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರು ಹೊತ್ತಿಗೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದು, ಸರ್ಕಾರದ ಕಾರ್ಯವೈಖರಿಯನ್ನು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಕಳೆದ ಆರು ತಿಂಗಳ ಅವಧಿಯಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿರುವ ಸಾಧನೆಯ ಕಿರು ಹೊತ್ತಿಗೆಯನ್ನು ನೀಡಿ ಅದರ ಸಾರಾಂಶವನ್ನು ಅಮಿತ್ ಶಾ ಅವರಿಗೆ ವಿವರಣೆ ನೀಡಿದರು.

ತಮ್ಮ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳಿಂದ ಜನಸಾಮಾನ್ಯರು ಹಾಗೂ ಬಡವರಿಗೆ ಆಗುವ ಲಾಭಗಳ ಕುರಿತು ಐಸಾಕ್ ನಡೆಸಿರುವ ಅಧ್ಯಯನ ವರದಿಯನ್ನು ಇದೇ ಸಂದರ್ಭದಲ್ಲಿ ನೀಡಿದರು.

ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಅಮಿತ್ ಶಾ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರಾಜ್ಯದಲ್ಲಿನ ಸ್ಥಿತಿಗತಿ ಕುರಿತು ಅಮಿತ್ ಶಾ ಅವರ ಜೊತೆ ಬೊಮ್ಮಾಯಿ ಚರ್ಚೆ ನಡೆಸಿದರು.

ಓದಿ: ಸಿಸಿಬಿ ಪೊಲೀಸರಿಂದ ವಿದೇಶಿ ಪ್ರಜೆಗಳ‌ ಮನೆಗಳ ಮೇಲೆ ದಾಳಿ : 27 ಮಂದಿ ಅಕ್ರಮ ವಲಸಿಗರು ಪತ್ತೆ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.