ETV Bharat / state

ಬೆಂಗಳೂರು ಪ್ರವಾಹ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ: ಇಂದು ಖುದ್ದು ಪರಿಶೀಲನೆ - ಈಟಿವಿ ಭಾರತ ಕನ್ನಡ

ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

cm-bommai-meeting-with-senior-officials-on-bengaluru-floods
ಬೆಂಗಳೂರು ಪ್ರವಾಹ ಕುರಿತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ: ನಾಳೆ ಖುದ್ದು ಪರಿಶೀಲನೆ
author img

By

Published : Aug 31, 2022, 8:51 PM IST

Updated : Sep 1, 2022, 6:05 AM IST

ಬೆಂಗಳೂರು: ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿದು ಬೆಂಗಳೂರಿನ ಬಹುತೇಕ ಪ್ರದೇಶಗಳಿಗೆ ಹಾನಿಯಾಗಿದ್ದು, ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ನಿನ್ನೆ ಸಂಜೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು.

ಅಲ್ಲದೇ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಿ.ಕುಮಾರ ನಾಯಕ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಪ್ರತಿಯೊಂದು ಪ್ರದೇಶಗಳಲ್ಲಿ ಮಳೆಯಿಂದಾಗಿರುವ ಅನಾಹುತಗಳ ಬಗ್ಗೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹೆಚ್ಚು ತೊಂದರೆಯಾಗಿರುವ ಪ್ರದೇಶಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿವರಣೆ ನೀಡಿದರು.

ಇದೇ ವೇಳೆ ಹೆಚ್ಚು ಹಾನಿಯಾಗಿರುವ ಪ್ರದೇಶಗಳಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಮಧ್ಯಾಹ್ನ ಸಿಎಂ ಹಾನಿಗೊಳಗಾದ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇದನ್ನೂ ಓದಿ: ಜಡಿಮಳೆಗೆ ನಲುಗಿದ ಬೆಂಗಳೂರಿನ ಬಡಾವಣೆಗಳು: ಎಲ್ಲೆಲ್ಲೂ ನೀರು, ಕಿ.ಮೀಗಟ್ಟಲೆ ಟ್ರಾಫಿಕ್ ಜಾಮ್

Last Updated : Sep 1, 2022, 6:05 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.